Categories: ಕೋಲಾರ

ಎಫ್.ಆರ್.ಎಸ್ ತಡೆಗೆ ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ

ಕೋಲಾರ: ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್ ಯೋಜನೆ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು) ನೇತೃತ್ವದಲ್ಲಿ ಗುರುವಾರ ಸಮಗ್ರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ ಮನವಿ ಸಲ್ಲಿಸಿದರು

ರಾಜ್ಯ ಅಂಗನವಾಡಿ ನೌಕರರ ಸಂಘದ(ಸಿಐಟಿಯು) ತಾಲೂಕು ಅಧ್ಯಕ್ಷೆ ಕಲ್ಪನಾ ಮಾತನಾಡಿ ಮಾನವ ಅಭಿವೃದ್ಧಿ ಸೂಚ್ಯಂಕಕ್ಕೆ ಇರುವ ಐಸಿಡಿಎಸ್ ಯೋಜನೆ ಜಾರಿ ಆಗಿ 50 ವರ್ಷಗಳಾಗಿದೆ. ಆದರೆ, ಈ ಯೋಜನೆಯನ್ನು ಸರಳೀಕರಿಸಿ, ಫಲಾನುಭವಿಗಳನ್ನು ಆಕರ್ಷಿಸಲು ಸರ್ಕಾರ ಕ್ರಮ ರೂಪಿಸಬೇಕಿತ್ತು. ಅದರ ಬದಲಿಗೆ ಸಂಕೀರ್ಣಗೊಳಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಯಾವುದೇ ಸೌಲಭ್ಯ ನೀಡದೆ, ಮುಖಚರ್ಯೆ ಗುರುತಿಸುವ ಕ್ರಮ (ಎಫ್‍ಆರ್‌ಎಸ್) ಅಳವಡಿಸಿರುವುದರಿಂದ ತೊಂದರೆ ಅನುಭವಿಸುವಂತಾಗಿದೆ ಎಂದು ಆರೋಪಿಸಿದರು

ದೇಶದಲ್ಲಿ 2013ರ ಆಹಾರ ಭದ್ರತೆ ಕಾಯ್ದೆ ಪ್ರಕಾರ ಯಾವುದೇ ಫಲಾನುಭವಿ ಹಸಿವಿನಿಂದ ನರಳಬಾರದು ಎಂಬ ಆಶಯಕ್ಕೆ ಹಿನ್ನಡೆಯಾಗಿದೆ. ಅಲ್ಲದೆ, ಆಧಾರ್ ಕಾರ್ಡ್ ಇಲ್ಲ ಎಂಬ ಕಾರಣಕ್ಕೆ ಸಬ್ಸಿಡಿ ಮತ್ತು ಉಚಿತವಾಗಿ ಸಿಗುವ ಸೌಲಭ್ಯಗಳಿಂದ ಫಲಾನುಭವಿಗಳು ವಂಚಿತರಾಗಬಾರದು ಎಂಬ ಸುಪ್ರೀಂ ಕೋರ್ಟ್ ಆದೇಶವೂ ಪಾಲನೆಯಾಗುತ್ತಿಲ್ಲ. ಎಫ್ಆರ್‌ಎಸ್ ಜಾರಿ ಮೂಲಕ ಫಲಾನುಭವಿಗಳ ಹಕ್ಕನ್ನು ನಿರಾಕರಿಸಲಾಗುತ್ತಿದೆ ಎಂದು ದೂರಿದರು.

ತಾಲೂಕು ಕಾರ್ಯದರ್ಶಿ ಗಾಂಧಿನಗರ ಮಂಜುಳ ಮಾತನಾಡಿ, ಎಫ್‍ಆರ್‌ಎಸ್ ಮೂಲಕ ಸಂಗ್ರಹಿಸುವ ಫಲಾನುಭವಿಗಳ ವೈಯುಕ್ತಿಕ ಮಾಹಿತಿ ಸೋರಿಕೆ ಆಗುತ್ತಿದೆ. ಇದರಿಂದ ಸೈಬರ್ ವಂಚನೆಗಳು ಹೆಚ್ಚಾಗುತ್ತಿವೆ. ಶೇ 60ರಷ್ಟು ತನ್ನ ಪಾಲಿನ ವಂತಿಗೆಯನ್ನು ನೀಡಬೇಕಾದ ಕೇಂದ್ರ ಸರ್ಕಾರ ಎಫ್‍ಆರ್‌ಎಸ್ ನಿಬಂಧನೆ ಹಾಕುವ ಮೂಲಕ ತನ್ನ ಪಾಲಿನ ಹಣ ಕಡಿಮೆ ಮಾಡಿಕೊಳ್ಳಲು ಮುಂದಾಗಿದೆʼ ಎಂದು ದೂರಿದರು.

ಕಾರ್ಯಕರ್ತರಿಗೆ 2018ರಿಂದ ಅನ್ವಯವಾಗುವಂತೆ ವೇತನ ಹೆಚ್ಚಿಸಬೇಕು. ಫಲಾನುಭವಿಗಳ ಘಟಕದ ವೆಚ್ಚ ಹೆಚ್ಚಿಸುವುದು, ಎಫ್‌ಆರ್‌ಎಸ್ ನಿಲ್ಲಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಒತ್ತಾಯಿಸಿ ಕಪ್ಪು ಪಟ್ಟಿ ಧರಿಸಿ ಕಪ್ಪು ದಿನಾಚರಣೆ ಆಚರಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಖಜಾಂಚಿ ಲಕ್ಷ್ಮೀದೇವಿ, ರಾಜಮ್ಮ, ಲೋಕೇಶ್ವರಿ, ಗೌರಮ್ಮ, ತಿಮ್ಮಕ್ಕ, ಅಂಜನಮ್ಮ, ಲಾಲು, ರಾಜಮ್ಮ, ಅನುಸೂಯ, ಮುನಿರತ್ನ, ಮುಂತಾದವರು ಭಾಗವಹಿಸಿದ್ದರು

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

11 minutes ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

4 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

6 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

6 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

8 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

12 hours ago