ರಾಜ್ಯ ರಾಜಧಾನಿ ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ದೊಡ್ಡಬಳ್ಳಾಪುರದಿಂದ ಹಿಂದೂಪುರ-ಯಲಹಂಕ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ-9, ದಾಬಸ್ ಪೇಟೆ-ಹೊಸಕೋಟೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ-248 ಹಾದು ಹೋಗುತ್ತವೆ. ಇದಲ್ಲದೇ ದೇವನಹಳ್ಳಿ, ನೆಲಮಂಗಲ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು, ಗೌರಿಬಿದನೂರು ಹೀಗೆ ನಾನಾ ಜಿಲ್ಲೆ, ತಾಲೂಕು, ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಸಾವಿರಾರು ವಾಹನಗಳು ಇಲ್ಲಿದಂಲೇ ಹಾದು ಹೋಗುತ್ತವೆ.
ಅದೇರೀತಿ ಏಷ್ಯಾದಲ್ಲೇ ಎರಡನೇ ಅತಿದೊಡ್ಡ ಕೈಗಾರಿಕಾ ಪ್ರದೇಶವಿದ್ದು, ಕಾರ್ಖಾನೆಗಳಲ್ಲಿ ಕೆಲಸ ಮಾಡಲು ಲಕ್ಷಾಂತರ ಜನ ಕಾರ್ಮಿಕರು ಬಂದು ಹೋಗುತ್ತಾರೆ.
ಈ ಹಿನ್ನೆಲೆ ನಗರದಲ್ಲಿ ಜನದಟ್ಟಣೆ, ವಾಹನ ದಟ್ಟಣೆ ಜೊತೆಗೆ ಅಪಘಾತಗಳ ಸಂಖ್ಯೆಯ ಪ್ರಮಾಣವು ಹೆಚ್ಚಾಗುತ್ತಿವೆ. ಕಳೆದ ವರ್ಷ 2024ರಿಂದ ಇಲ್ಲಿಯವರೆಗೆ ಅಪಘಾತಗಳಿಂದ ಸಾವು-ನೋವಿನ ಅಂಕಿಅಂಶಗಳನ್ನು ನೋಡಿದರೆ ಬೆಚ್ಚಿಬೀಳುವುದಂತು ಖಚಿತ. ದೊಡ್ಡಬಳ್ಳಾಪುರ ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಬಂವಿಸಿದ ಅಪಘಾತದಲ್ಲಿ ಕೇವಲ ಒಂದು ವರ್ಷದಲ್ಲಿ 125ಕ್ಕೂ ಹೆಚ್ಚು ಜನ ಸಾವನಪ್ಪಿದ್ದು, 350ಕ್ಕೂ ಹೆಚ್ಚು ಜನ ಕೈ ಕಾಲು ಮುರಿದುಕೊಂಡು ಗಾಯಗೊಂಡಿದ್ದಾರೆ.
ಇನ್ನೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು ನಾಲ್ಕು ತಾಲೂಕುಗಳಿವೆ. ದೊಡ್ಡಬಳ್ಳಾಪುರ ಹೊರತುಪಡಿಸಿ ಉಳಿದ ಮೂರು ತಾಲೂಕಿನಲ್ಲಿಯೂ ಸಂಚಾರಿ ಪೊಲೀಸ್ ಠಾಣೆಗಳಿವೆ. ಸದ್ಯಕ್ಕೆ ದೊಡ್ಡಬಳ್ಳಾಪುರಕ್ಕೆ ಸಂಚಾರಿ ಪೊಲೀಸ್ ಠಾಣೆ ಬೇಕೆಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ. ದೊಡ್ಡಬಳ್ಳಾಪುರ ನಗರದಲ್ಲಿ ಟ್ರಾಫಿಕ್ ಸಿಗ್ನಲ್ ಇರುವುದು ಟಿಬಿ ಸರ್ಕಲ್ ಬಳಿ ಮಾತ್ರ. ಹಾಗಾಗಿ ಜನರು ಬೇಕಾಬಿಟ್ಟಿ ಸಂಚಾರ ಮಾಡುತ್ತಿದ್ದಾರೆ. ಅವರು ಸಾಯುವುದು ಅಲ್ಲದೆ, ಬೇರೆಯವರ ಜೀವಕ್ಕೂ ಕುತ್ತು ತರುತ್ತಿದ್ದಾರೆ. ಹಾಗಾಗಿ ಪ್ರಮುಖ ವೃತ್ತಗಳಲ್ಲಿ ಟ್ರಾಫಿಕ್ ಸಿಗ್ನಲ್ ಗಳನ್ನ ಅಳವಡಿಸಬೇಕು ಎಂದು ಜನ ಒತ್ತಾಯಿಸಿದ್ದಾರೆ.
ನಗರ ಪ್ರದೇಶದ ರಸ್ತೆಗಳು, ಗ್ರಾಮೀಣ ರಸ್ತೆಗಳು, ರಾಜ್ಯ ಹೆದ್ದಾರಿಗಳು, ರಾಷ್ಟ್ರೀಯ ಹೆದ್ದಾರಿಗಳು ಮತ್ತು ಎಕ್ಸ್‌ಪ್ರೆಸ್ ಹೆದ್ದಾರಿಗಳಲ್ಲಿ ವೇಗಮಿತಿ ಇದೆ. ವೇಗಮಿತಿ ಜಾರಿಯಲ್ಲಿದ್ದೂ ಅದನ್ನು ಮೀರಿದ ವೇಗದಲ್ಲಿ ವಾಹನ ಚಲಾಯಿಸಿದ್ದರಿಂದ ಈ ಅಪಘಾತಗಳು ಸಂಭವಿಸಿವೆ. ಇಂತಹ ಅಪಘಾತಗಳನ್ನು ಚಾಲಕನ ಲೋಪದಿಂದ ಸಂಭವಿಸಿದ್ದು ಎಂದೇ ಪರಿಗಣಿಸಲಾಗುತ್ತಿದೆ.
ಸಂಚಾರಿ ನಿಯಮಗಳನ್ನು ಉಲ್ಲಂಘಿಸುವುದು ಅಪಘಾತಕ್ಕೆ ಆಹ್ವಾನ ನೀಡಿದಂತೆ. ಅತಿವೇಗ, ಪಥ ಶಿಸ್ತು ಇಲ್ಲದಿರುವುದು, ವಿರುದ್ಧ ದಿಕ್ಕಿನಲ್ಲಿ ಚಾಲನೆ, ಮದ್ಯಪಾನ ಮಾಡಿ ಚಾಲನೆ ಮಾಡುವುದು ಮತ್ತು ಚಾಲನೆ ವೇಳೆ ಮೊಬೈಲ್ ಬಳಸುವುದು… ಇವೆಲ್ಲವನ್ನೂ ಸಂಚಾರ ನಿಯಮಗಳ ಪ್ರಕಾರ ದಂಡಾರ್ಹ ಅಪರಾಧ ಎಂದು ಪರಿಗಣಿಸಲಾಗಿದೆ.
ದ್ವಿಚಕ್ರ ವಾಹನಗಳ ಚಾಲನೆ ವೇಳೆ ಸವಾರ ಮತ್ತು ಹಿಂಬದಿಯ ಸವಾರ ಹೆಲ್ಮೆಟ್ ಧರಿಸುವುದು ಕಡ್ಡಾಯ. ಆದರೆ, ದೇಶದ ಕೆಲವು ನಗರಗಳಲ್ಲಷ್ಟೇ ಇದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗಿದೆ. ಬಹುತೇಕ ಕಡೆ ಈ ನಿಯಮ ಜಾರಿಯಲ್ಲಿಯೂ ಇಲ್ಲ. ಆದರೆ, ಪ್ರಸ್ತುತ ಸಂಭವಿಸುತ್ತಿರುವ ಅಪಘಾತಗಳಲ್ಲಿ ಹೆಲ್ಮೆಟ್ ಧರಿಸಿದೇ ಇದ್ದ ಕಾರಣಕ್ಕೇ ಹೆಚ್ಚು ಜನರು ಮೃತರಾಗುತ್ತಿದ್ದಾರೆ.
ದ್ವಿಚಕ್ರ ವಾಹನ ಚಾಲನೆ ವೇಳೆ ಅಪಘಾತ ಸಂಭವಿಸಿದರೆ ಹೆಚ್ಚು ಪೆಟ್ಟು ಬೀಳುವುದು ತಲೆಗೆ. ಸುರಕ್ಷಿತವಾದ ಮತ್ತು ಸರಿಯಾದ ಅಳತೆಯ ಹೆಲ್ಮೆಟ್‌ಗಳನ್ನ ಕಡ್ಡಾಯವಾಗಿ ಧರಿಸಿದರೆ ತಲೆಗೆ ಪೆಟ್ಟಾಗುವುದನ್ನು ತಡೆಯಬಹುದು.
ಕಾರುಗಳಲ್ಲಿ ಎಷ್ಟೇ ಏರ್‌ಬ್ಯಾಗ್‌ಗಳಿದ್ದರೂ, ಸೀಟ್‌ಬೆಲ್ಟ್ ಧರಿಸದೇ ಇದ್ದರೆ ಅವು ಪ್ರಾಣಾಪಾಯದಿಂದ ಪಾರು ಮಾಡಲಾರವು.
ವಾಹನ ಚಾಲನೆ ವೇಳೆ ಮೊಬೈಲ್ ಬಳಸುವುದರಿಂದ ಏಕಾಗ್ರತೆ ಹೋಗಿ, ಅಪಘಾತ ಸಂಭವಿಸುವ ಅಪಾಯವೂ ಇರುತ್ತದೆ. ಹೀಗಾಗಿಯೇ ಚಾಲನೆ ವೇಳೆ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ. ಇದನ್ನು ಉಲ್ಲಂಘಿಸುತ್ತಿರುವುದರಿಂದಲೇ ಹಲವು ಅಪಘಾತಗಳು ಸಂಭವಿಸುತ್ತಿವೆ.
ಜೊತೆಗೆ ಅತಿವೇಗ, ಅವಸರದ ಚಾಲನೆ, ಚಾಲನಾ ತರಬೇತಿ ಇಲ್ಲದೇ ವಾಹನ ಚಾಲನೆ, ಸ್ವಯಂ ಅಪಘಾತ, ತ್ರಿಬಲ್ ರೈಡಿಂಗ್, ಅಪ್ರಾಪ್ತ ವಯಸ್ಕರು ವಾಹನ ಚಲಾಯಿಸುವುದು, ತಾಂತ್ರಿಕ ದೋಷ, ಹವಾಮಾನ ವೈಪರಿತ್ಯ, ರಸ್ತೆ ಗುಂಡಿ, ಅವೈಜ್ಞಾನಿಕ ತಿರುವು ನಿರ್ಮಾಣ, ಅಡ್ಡಾದಿಡ್ಡಿ ವಾಹನ ಚಲಾಯಿಸುವಿಕೆ, ಒನ್ ವೇನಲ್ಲಿ ಅಡ್ಡ ಬರುವುದು, ವಾಹನ ಪರವಾನಗಿ ಇಲ್ಲದೇ ಬೇರೊಬ್ಬರ ವಾಹನ ಚಲಾಯಿಸುವುದು ಸೇರಿದಂತೆ ಇತರೆ ಕಾರಣಗಳಿಂದಾಗಿ ಅಪಘಾತಗಳು ಸಂಭವಿಸಿ ಸಾಕಷ್ಟು ಸಾವು ನೋವು ಆಗುತ್ತಿವೆ.
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೊಡ್ಡಬಳ್ಳಾಪುರ ತಾಲೂಕಿನ ರಾಮಯ್ಯನಪಾಳ್ಯ ಸಮೀಪವಿರುವ ರೇಣುಕಾ ಯಲ್ಲಮ್ಮ ದೇವಾಲಯದ…
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆಂದು ನಟ ಪ್ರಥಮ್…
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ, ದೊಡ್ಡಬಳ್ಳಾಪುರ ಪ್ರಧಾನ ಸಿವಿಲ್ ನ್ಯಾಯಾಲಯದ ವತಿಯಿಂದ ಯಶಸ್ವಿನಿ, ಬೇಕರಿ ರಘುಗೆ ಷರತ್ತುಬದ್ಧ…
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಇಂದು…
ನಮ್ಮ ನಿಷ್ಠೆ ಪ್ರಕೃತಿಗೆ....... ಹರಕೆ ಮತ್ತು ಶಾಪ, ಜೊತೆಗೆ ನಿನ್ನೆಯ ನಾಗರ ಪಂಚಮಿ...... ಎರಡೂ ನಮ್ಮ ನಡುವಿನ ಪ್ರಬಲ ನಂಬಿಕೆಗಳು.......…
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಸಚಿವರು ಮತ್ತು ಶಾಸಕರುಗಳ ಜೊತೆ ನಡೆಸಿದ ಸಭೆಯಲ್ಲಿ…