ದೊಡ್ಡಬಳ್ಳಾಪುರ: ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಹುಣಸೆಮರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಕೊಂಡ ಸ್ಥಿತಿಯಲ್ಲಿ ತಾಲೂಕಿನ ಕೂಗೆನಹಳ್ಳಿ ಪತ್ತೆಯಾಗಿದೆ.
ಅಸ್ಥಿಪಂಜರದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಇದರಿಂದ ಜನ ಬೆಚ್ಚಿಬಿದ್ದಿದ್ದಾರೆ.
ಮೃತ ವ್ಯಕ್ತಿಯನ್ನು ಕೂಗೆನಹಳ್ಳಿ ಗ್ರಾಮದ ಸುರೇಶ್(53), ಎಂದು ಗುರುತಿಸಲಾಗಿದೆ.
ಗ್ರಾಮದ ಹೊರವಲಯದಲ್ಲಿರುವ ಹುಣಸೆಮರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಹುಣಸೆಮರವು ದಟ್ಟವಾಗಿದ್ದು, ಪಕ್ಕದಲ್ಲೇ ದ್ರಾಕ್ಷಿ ತೋಟ ಇರುವ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವುದು ಯಾರಿಗೂ ತಿಳಿದುಬಂದಿಲ್ಲ.
ಸುರೇಶ್ ಕಾಣೆಯಾಗಿರುವ ಕುರಿತು ಕುಟುಂಬಸ್ಥರು ಎರಡು ತಿಂಗಳ ಹಿಂದೆಯೇ ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಇಂದು ಆಕಸ್ಮಿಕವಾಗಿ ಗ್ರಾಮಸ್ಥರು ಮರವನ್ನು ನೋಡಿದಾಗ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ರೀತಿ ಅಸ್ಥಿಪಂಜರ ಪತ್ತೆಯಾಗಿದೆ.
ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಕಾಣೆಯಾಗಿದ್ದ ಸುರೇಶನ ಶವ ಎಂದು ತಿಳಿದುಬಂದಿದೆ.
ಈ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.