ದೊಡ್ಡಬಳ್ಳಾಪುರ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಬೀಡಿಕೆರೆ ಹಾಗೂ ಮುಕ್ಕೇನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಗಾಯಾಳು ಬೈಕ್ ಸವಾರರನ್ನು ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಗ್ರಾ.ಪಂ.ವ್ಯಾಪ್ತಿಯ ಗೌಚೇನಹಳ್ಳಿ ಹಾಗೂ ಶಿಡ್ಲಘಟ್ಟದವರು ಎಂದು ತಿಳಿದುಬಂದಿದೆ. ಬೈಕ್ ಸವಾರರ ಪೈಕಿ ಒಬ್ಬರಿಗೆ ಕಾಲಿಗೆ ಗಂಭೀರ ಪೆಟ್ಟು ಬಿದ್ದಿದೆ. ಮತ್ತೊಬ್ಬ ಸವಾರನ ಕಾಲಿನ ಮೂಳೆ ಮುರಿದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತದಿಂದ ತೀವ್ರ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಬೈಕ್ ಸವಾರರನ್ನು ದೊಡ್ಡಬಳ್ಳಾಪುರದ ಪತ್ರಕರ್ತ ಕೊತ್ತೂರಪ್ಪ, ಅವರ ಸ್ನೇಹಿತರಾದ ವಡ್ಡರಪಾಳ್ಯ ನಾರಾಯಣಪ್ಪ ಹಾಗೂ ಸ್ಥಳೀಯರು ಉಪಚರಿಸಿ ಕೂಡಲೇ ಆಸ್ಪತ್ರೆಗೆ ದಾಖಲಿಸಲು ನೆರವಾಗಿ ಮಾನವೀಯತೆ ಮೆರೆದಿದ್ದಾರೆ.
ಅಪಘಾತ ಸಂಭವಿಸುತ್ತಲೇ ಸ್ಥಳದಲ್ಲಿದ್ದವರು 108 ಅಂಬುಲೆನ್ಸ್ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಆದರೆ, ಆ ಸಿಬ್ಬಂದಿ ಖಾಸಗಿ ಅಂಬುಲೆನ್ಸ್ ಕಳುಹಿಸಿಕೊಟ್ಟು ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಗಾಯಾಳುಗಳ ಪೋಷಕರು ಖಾಸಗಿ ಆಸ್ಪತ್ರೆಯ ಚಿಕಿತ್ಸಾ ವೆಚ್ಚಕ್ಕೆ ಹೆದರುವಂತಾಗಿದೆ.
ನಗರದ ಬಹುತೇಕ ಕಡೆಗಳಲ್ಲಿ ಅಪಘಾತ ಸಂಭವಿಸುವ ಸಂದರ್ಭಗಳಲ್ಲಿ ಖಾಸಗಿ ಆಸ್ಪತ್ರೆ ಅಂಬುಲೆನ್ಸ್ ಗಳೇ ಬರುತ್ತಿದ್ದು, 108 ಅಂಬುಲೆನ್ಸ್ ಸಿಬ್ಬಂದಿ, ಖಾಸಗಿ ಆಸ್ಪತ್ರೆಗಳ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಸಣ್ಣಪುಟ್ಟ ಗಾಯಗಳಾಗಿದ್ದರೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೆಪದಲ್ಲಿ ಸುಲಿಗೆ ಮಾಡಲಾಗುತ್ತಿದೆ. ತಾಲೂಕು ಆರೋಗ್ಯಾಧಿಕಾರಿಗಳು 108 ಅಂಬುಲೆನ್ಸ್ ಸಿಬ್ಬಂದಿಗೆ ಎಚ್ಚರಿಕೆ ನೀಡಿ, ಸೂಕ್ತ ಸಮಯದಲ್ಲಿ ಸ್ಪಂದಿಸುವಂತೆ ನಿರ್ದೇಶನ ನೀಡಬೇಕು. ಖಾಸಗಿ ಆಸ್ಪತ್ರೆಗಳಿಗೆ ಸಹಕರಿಸುತ್ತಿರುವ 108 ಅಂಬುಲೆನ್ಸ್ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…