Categories: ರಾಜ್ಯ

ಎರಡು ಹಂತದಲ್ಲಿ ಪಟ್ಟಿ ಶೀಘ್ರ ಬಿಡುಗಡೆ: ಸಿಎಂ ಬೊಮ್ಮಾಯಿ

ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪಟ್ಟಿ ಎರಡು ಹಂತದಲ್ಲಿ ಅತಿ ಶೀಘ್ರದಲ್ಲಿ ಬಿಡುಗಡೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.

ಕೆ.ಎಸ್.ಈಶ್ವರಪ್ಪ ರಾಜೀನಾಮೆ: ಪಕ್ಷದ ಅಧ್ಯಕ್ಷರು ತೀರ್ಮಾನ

ಕೆ.ಎಸ್. ಈಶ್ವರಪ್ಪ ಅವರು ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದು, ಚುನಾವಣಾ ರಾಜಕಾರಣದಿಂದ ಹಿಂದೆ ಸರಿದಿರುವುದಾಗಿ ಹೇಳಿದ್ದಾರೆ. ಅವರು ಹಲವಾರು ದಿನಗಳಿಂದ ಈ ಮಾತು ಹೇಳುತ್ತಿದ್ದರು‌. ನಾವು ಅವರಿಗೆ ನಿಮ್ಮ ಅನುಭವದ ಅಗತ್ಯ ವಿದೆ ಎಂದು ತಿಳಿಸಿದ್ದೆವು. ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿರುವುದರಿಂದ ಅದನ್ನು ಅಧ್ಯಕ್ಷರೇ ತೀರ್ಮಾನ ಮಾಡುತ್ತಾರೆ. ಈಶ್ವರಪ್ಪ ಅವರು ರಾಜಕಾರಣದಲ್ಲಿ ಮುಂದುವರೆಯಬೇಕು. ಚುನಾವಣೆಯಲ್ಲಿ ಸ್ಪರ್ಧಿಸುವುದು ಅವರಿಗೆ ಬಿಟ್ಟಿದ್ದು ಎಂದು ತಿಳಿಸಿದರು.

ಬಿಜೆಪಿಯಲ್ಲಿ ಸಂಪ್ರದಾಯ ಬೆಳೆಯುತ್ತಿದೆ

ನಮ್ಮ ಪಕ್ಷದಲ್ಲಿ ಒಂದು ಸಂಪ್ರದಾಯ ಬೆಳೆಯುತ್ತಿದೆ.ಇನ್ನೊಂದೆಡೆ ಕಾಂಗ್ರೆಸ್ ನಲ್ಲಿ 92 ವರ್ಷದ ಶಾಮನೂರು ಶಿವಶಂಕರಪ್ಪ ಅವರಿಗೆ ಟಿಕೆಟ್ ಕೊಟ್ಟಿದ್ದಾರೆ. ಇದು ಅವರಿಗೂ ನಮಗೂ ಇರುವ ವ್ಯತ್ಯಾಸ. ಜಗದೀಶ್ ಶೆಟ್ಟರ್ ಅವರ ಜೊತೆ ಮಾತನಾಡಿದ್ದು, ಅವರು ಕ್ಷೇತ್ರದಲ್ಲಿ ಇನ್ನಷ್ಟು ಕೆಲಸ ಮಾಡಬೇಕಿದೆ. ಅದಕ್ಕೆ ಇನ್ನೊಂದು ಅವಕಾಶ ಬೇಕು ಅಂತ ಹೇಳಿದಾರೆ. ಅದನ್ನು ವರಿಷ್ಠರ ಗಮನಕ್ಕೆ ತಂದಿದ್ದೇನೆ. ಬೇರೆ ಯಾವುದೇ ನಾಯಕರ ವಿಷಯಗಳು ನಮ್ಮ ಮುಂದೆ ಇಲ್ಲ. ಲಕ್ಷ್ಮಣ ಸವದಿಯವರೊಂದಿಗೆ ಸಂಪರ್ಕದಲ್ಲಿ ಇದ್ದು, ಮಹೇಶ ಕುಮಠಳ್ಳಿ ಅವರು ನಾವು ಸರ್ಕಾರ ರಚನೆಗೆ ಕಾರಣರಾದವರು. ಹೀಗಾಗಿ ಅವರಿಗೆ ಯಾವುದೇ ದುಡುಕಿನ ನಿರ್ಧಾರ ತೆಗೆದುಕೊಳ್ಳದಂತೆ ಸೂಚಿಸಿದ್ದೇನೆ ಎಂದರು.

ಬಿಜೆಪಿಯಿಂದ ದೇಶದಲ್ಲಿ ಬದಲಾವಣೆ

ದೇಶದಲ್ಲಿ ಬಿಜೆಪಿ ಸಾಕಷ್ಟು ಬದಲಾವಣೆ ತರುತ್ತಿದೆ. ಇದುವರೆಗೂ ಆಡಳಿತ ವಿರೋಧಿ ಅಲೆ ಇತ್ತು. ಈಗ ಆಡಳಿತ ಪರ ಅಲೆ ಇದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ‌ ತಿಳಿಸಿದರು.

Ramesh Babu

Journalist

Recent Posts

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

9 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

11 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

13 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

18 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

21 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

2 days ago