ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹ ಫಲಾನುಭವಿಗಳು ಕಛೇರಿ ವೇಳೆಯಲ್ಲಿ ಅರ್ಜಿಗಳನ್ನು ಪಡೆದು ಅಕ್ಟೋಬರ್ 31 ರೊಳಗೆ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್ ದೊಡ್ಡಬಳ್ಳಾಪುರ ಕಚೇರಿ ದೂರವಾಣಿ : 080-22860495 ಯನ್ನು ಸಂಪರ್ಕಿಸಲು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!