ಎಲೈಟ್ ಇಂಟರ್ನ್ಯಾಷನಲ್ ಶಾಲೆಯ 2025ನೇ ಚರಿಸ್ ಸಂಭ್ರಮ

ದೇವನಹಳ್ಳಿ ತಾಲೂಕು ಬೂದಿಗೆರೆ ಎಲೈಟ್ ಇಂಟರ್ ನ್ಯಾಷನಲ್ ಶಾಲೆಯ ಚರಿಸ್ ಸಂಭ್ರಮ 2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹೈಮಾ ರಮೇಶ್ ಅವರು, ಪ್ರಸ್ತುತ ಕಾಲಘಟ್ಟದಲ್ಲಿ ಶಾಲೆ ನಡೆಸುವುದು ತುಂಬಾ ಕಷ್ಟದ ಕೆಲಸ. ಒಂದು ಸಂಸ್ಥೆ ಕಟ್ಟಲು ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಎಂಬ ನಾಲ್ಕು ಪಿಲ್ಲರ್ ಗಳು ಅತ್ಯಗತ್ಯ ಎಂದರು.

ಇದೆ ಸಂದರ್ಭದಲ್ಲಿ ಮಾತನಾಡಿದ ಸಿ ಆರ್ ಪಿ ಲೋಕೇಶ್ ಪ್ರಪಂಚದಲ್ಲಿ ಜ್ಞಾನವೇ ಶ್ರೇಷ್ಠ, ಜ್ಞಾನವಂತರು ಎಲ್ಲಿ‌ ಬೇಕಾದರೂ‌ ಬದುಕಬಹುದು. ಜಗತ್ತಿನ ಸರ್ವಶ್ರೇಷ್ಠ ಎಂಜಿನಿಯರ್ ಆಗಿದ್ದ ಸರ್.ಎಂ.ವಿಶ್ವೇಶ್ವರಯ್ಯ ಅವರು ಜನಿಸಿದ ಈ ಕಾಲಮಾನ ಜ್ಞಾನವಂತರ ಯುಗ ಎನಿಸಿದೆ ಎಂದು ಅಭಿಪ್ರಾಯಪಟ್ಟರು ಮಕ್ಕಳಿಗೆ ಉತ್ತಮ ವಿದ್ಯೆ ನೀಡುವ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹೆಚ್ಚು ತರಬೇತಿ ನೀಡುತ್ತಿದೆ. ಮುಂಬರುವ ದಿನಗಳಲ್ಲಿ ಶಾಲೆಗೆ ಉತ್ತಮ ಭವಿಷ್ಯವಿದೆ ಎಂದು ಹೇಳಿದರು.

ವಿದ್ಯಾರ್ಥಿ ಪೋಷಕರಾದ ಶಿವರಾಜ್ ಪಾಟೀಲ್ ಮಾತನಾಡಿ ಮಕ್ಕಳ‌ ಎದುರು ಪೋಷಕರು ಜಗಳ ಆಡವಾಡಬಾರದು. ಜಗಳದ ವೇಳೆ ಬಳಸುವ ಕೆಟ್ಟ ಪದಗಳನ್ನು ಕೇಳುವ ಮಕ್ಕಳು ಶಾಲೆಯಲ್ಲಿ ಪ್ರಯೋಗಿಸುವ ಸಾಧ್ಯತೆ ಇರುತ್ತದೆ. ಸಾಂಸಾರಿಕ ಜೀವನದಲ್ಲಿ ಕಷ್ಟ‌ ಸುಖ ಎಲ್ಲರಿಗೂ ಇರುತ್ತದೆ. ಹಾಗಾಗಿ ಜಗಳ ಆಡುವಾಗ ಮಕ್ಕಳಿರುವುದನ್ನು ಮರೆಯಬಾರದು. ಇನ್ನು ಶಾಲೆಯಲ್ಲಿ ಪೋಷಕರ ಸಭೆಗೆ ತಪ್ಪದೇ ಹಾಜರಾಗಿ ಮಗುವಿನ ಶೈಕ್ಷಣಿಕ ಪ್ರಗತಿ ವಿಚಾರಿಸಬೇಕು. ಮನೆಯ ಒಳಗೆ, ಹೊರಗೆ ಮಕಳ ಚಲನವಲನದ ಮೇಲೆ ಪೋಷಕರು ಸದಾ ಕಣ್ಣಿಡಬೇಕು ಎಂದು ಸಲಹೆ ನೀಡಿದರು.

ಶಾಲೆಯ ಮುಖ್ಯಸ್ಥರು ಶೃತಿಕ ಮಾತನಾಡಿ ಆಡಳಿತ ಮಂಡಳಿ ಮೇಲೆ‌ ಪೋಷಕರು ಇಟ್ಟಿರುವ ನಂಬಿಕೆ‌ಯನ್ನು ಉಳಿಸಿಕೊಳ್ಳುತ್ತೇವೆ. ಮಕ್ಕಳಿಗೆ ಅತ್ಯುನ್ನತ ವಿದ್ಯಾಭ್ಯಾಸದೊಂದಿಗೆ ಜಿವನಶೈಲಿಯನ್ನೇ ಬದಲಿಸಬೇಕೆಂದು ಪಣ ತೊಟ್ಟಿದ್ದೇವೆ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ಕೊಡಿಸುವ ಜೊತೆಗೆ ಮಕ್ಕಳಿಗೆ ಅಗತ್ಯ ಮೂಲ‌ಸೌಕರ್ಯ ಕಲ್ಪಿಸಿದ ಪರಿಣಾಮ ಶಾಲಾ ವಿದ್ಯಾರ್ಥಿಗಳ‌ ಸಂಖ್ಯೆ ಹೆಚ್ಚುತ್ತಿದೆ ಎಂದರು.

ಇನ್ನು ಎಲೈಟ್ ಇಂಟರ್ನ್ಯಾಷನಲ್ ಶಾಲೆಯ ಸ್ಕೌಟ್ ಮತ್ತು ಗೈಡ್ಸ್ ಮೂಲಕ ಮಕ್ಕಳಿಗೆ ಅರಿವು ಮೂಡಿಸುವ ಕಾರ್ಯ ನಿರ್ವಹಿಸುತ್ತಿದ್ದಾರೆ

ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವಾರ್ಷಿಕೋತ್ಸವದ ಸಂಭ್ರಮವನ್ನು ಇಮ್ಮಡಿಗೊಳಿಸಿತು. ಭರತನಾಟ್ಯ ನಾಟಕ ಯೋಗಾಸನ ಕನ್ನಡದ ಜಾನಪದ ಸೊಗಡು, ವಿದ್ಯಾರ್ಥಿಗಳು ಹೆಜ್ಜೆ ಹಾಕಿದರು ಪ್ರತಿಭೆ ಪ್ರದರ್ಶಿಸಿ ಪೋಷಕರ‌ ಮೆಚ್ಚುಗೆಗೆ ಪಾತ್ರರಾದರು.

ಕಾರ್ಯಕ್ರಮದಲ್ಲಿ ವೆಂಕಟೇಶ್, ಋತಿಕ, ಆಶಾ, ರೇಷ್ಮಾ, ಮಹಾದೇವಿ,ಶ್ವೇತಾ, ಸ್ವಪ್ನ, ಚಂದನ, ರೂಪ, ರಾಣಿ,ಐಶಾ, ಸುಮ,ಜಾಯ್ಸ್, ನಾಗೇಶ, ದೇವರಾಜ್, ಯಲ್ಲಪ್ಪ ಉಪಸ್ಥಿತಿ ಇದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

50 minutes ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

5 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

5 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

10 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

22 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

22 hours ago