ದೇವನಹಳ್ಳಿ ತಾಲೂಕು ಬೂದಿಗೆರೆ ಎಲೈಟ್ ಇಂಟರ್ ನ್ಯಾಷನಲ್ ಶಾಲೆಯ ಚರಿಸ್ ಸಂಭ್ರಮ 2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹೈಮಾ ರಮೇಶ್ ಅವರು, ಪ್ರಸ್ತುತ ಕಾಲಘಟ್ಟದಲ್ಲಿ ಶಾಲೆ ನಡೆಸುವುದು ತುಂಬಾ ಕಷ್ಟದ ಕೆಲಸ. ಒಂದು ಸಂಸ್ಥೆ ಕಟ್ಟಲು ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಎಂಬ ನಾಲ್ಕು ಪಿಲ್ಲರ್ ಗಳು ಅತ್ಯಗತ್ಯ ಎಂದರು.
ಇದೆ ಸಂದರ್ಭದಲ್ಲಿ ಮಾತನಾಡಿದ ಸಿ ಆರ್ ಪಿ ಲೋಕೇಶ್ ಪ್ರಪಂಚದಲ್ಲಿ ಜ್ಞಾನವೇ ಶ್ರೇಷ್ಠ, ಜ್ಞಾನವಂತರು ಎಲ್ಲಿ ಬೇಕಾದರೂ ಬದುಕಬಹುದು. ಜಗತ್ತಿನ ಸರ್ವಶ್ರೇಷ್ಠ ಎಂಜಿನಿಯರ್ ಆಗಿದ್ದ ಸರ್.ಎಂ.ವಿಶ್ವೇಶ್ವರಯ್ಯ ಅವರು ಜನಿಸಿದ ಈ ಕಾಲಮಾನ ಜ್ಞಾನವಂತರ ಯುಗ ಎನಿಸಿದೆ ಎಂದು ಅಭಿಪ್ರಾಯಪಟ್ಟರು ಮಕ್ಕಳಿಗೆ ಉತ್ತಮ ವಿದ್ಯೆ ನೀಡುವ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹೆಚ್ಚು ತರಬೇತಿ ನೀಡುತ್ತಿದೆ. ಮುಂಬರುವ ದಿನಗಳಲ್ಲಿ ಶಾಲೆಗೆ ಉತ್ತಮ ಭವಿಷ್ಯವಿದೆ ಎಂದು ಹೇಳಿದರು.
ವಿದ್ಯಾರ್ಥಿ ಪೋಷಕರಾದ ಶಿವರಾಜ್ ಪಾಟೀಲ್ ಮಾತನಾಡಿ ಮಕ್ಕಳ ಎದುರು ಪೋಷಕರು ಜಗಳ ಆಡವಾಡಬಾರದು. ಜಗಳದ ವೇಳೆ ಬಳಸುವ ಕೆಟ್ಟ ಪದಗಳನ್ನು ಕೇಳುವ ಮಕ್ಕಳು ಶಾಲೆಯಲ್ಲಿ ಪ್ರಯೋಗಿಸುವ ಸಾಧ್ಯತೆ ಇರುತ್ತದೆ. ಸಾಂಸಾರಿಕ ಜೀವನದಲ್ಲಿ ಕಷ್ಟ ಸುಖ ಎಲ್ಲರಿಗೂ ಇರುತ್ತದೆ. ಹಾಗಾಗಿ ಜಗಳ ಆಡುವಾಗ ಮಕ್ಕಳಿರುವುದನ್ನು ಮರೆಯಬಾರದು. ಇನ್ನು ಶಾಲೆಯಲ್ಲಿ ಪೋಷಕರ ಸಭೆಗೆ ತಪ್ಪದೇ ಹಾಜರಾಗಿ ಮಗುವಿನ ಶೈಕ್ಷಣಿಕ ಪ್ರಗತಿ ವಿಚಾರಿಸಬೇಕು. ಮನೆಯ ಒಳಗೆ, ಹೊರಗೆ ಮಕಳ ಚಲನವಲನದ ಮೇಲೆ ಪೋಷಕರು ಸದಾ ಕಣ್ಣಿಡಬೇಕು ಎಂದು ಸಲಹೆ ನೀಡಿದರು.
ಇನ್ನು ಎಲೈಟ್ ಇಂಟರ್ನ್ಯಾಷನಲ್ ಶಾಲೆಯ ಸ್ಕೌಟ್ ಮತ್ತು ಗೈಡ್ಸ್ ಮೂಲಕ ಮಕ್ಕಳಿಗೆ ಅರಿವು ಮೂಡಿಸುವ ಕಾರ್ಯ ನಿರ್ವಹಿಸುತ್ತಿದ್ದಾರೆ
ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವಾರ್ಷಿಕೋತ್ಸವದ ಸಂಭ್ರಮವನ್ನು ಇಮ್ಮಡಿಗೊಳಿಸಿತು. ಭರತನಾಟ್ಯ ನಾಟಕ ಯೋಗಾಸನ ಕನ್ನಡದ ಜಾನಪದ ಸೊಗಡು, ವಿದ್ಯಾರ್ಥಿಗಳು ಹೆಜ್ಜೆ ಹಾಕಿದರು ಪ್ರತಿಭೆ ಪ್ರದರ್ಶಿಸಿ ಪೋಷಕರ ಮೆಚ್ಚುಗೆಗೆ ಪಾತ್ರರಾದರು.
ಕಾರ್ಯಕ್ರಮದಲ್ಲಿ ವೆಂಕಟೇಶ್, ಋತಿಕ, ಆಶಾ, ರೇಷ್ಮಾ, ಮಹಾದೇವಿ,ಶ್ವೇತಾ, ಸ್ವಪ್ನ, ಚಂದನ, ರೂಪ, ರಾಣಿ,ಐಶಾ, ಸುಮ,ಜಾಯ್ಸ್, ನಾಗೇಶ, ದೇವರಾಜ್, ಯಲ್ಲಪ್ಪ ಉಪಸ್ಥಿತಿ ಇದ್ದರು.
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…