ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಕ್ಕಟ್ಟು ಭಾರತಕ್ಕೂ ತಟ್ಟಿರುವ ಹಿನ್ನೆಲೆ ದೇಶಾದ್ಯಂತ ಅಡುಗೆ ಅನಿಲ ಪೂರೈಕೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಪ್ರಸ್ತುತ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದಿದ್ದರೂ ಮುಂದಿನ ದಿನಗಳಲ್ಲಿ ಅಭಾವ ಉಂಟಾಗಬಹುದು ಎಂಬ ಭೀತಿಯಿಂದ, ಸಿಲಿಂಡ ರ್ ಗಾಗಿ ಜನರು ಮುಗಿಬಿದ್ದಿದ್ದಾರೆ.
ಇಂತಹ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹಿರೇಮುದ್ದೇನಹಳ್ಳಿ ಗ್ರಾಮದಲ್ಲಿಂದು ಎಲ್‌ಪಿಜಿ ಸಿಲಿಂಡರ್ ಗಾಗಿ ಇಡೀ ಗ್ರಾಮವೇ ಮುಗಿಬಿದ್ದಿರುವ ದೃಶ್ಯ ಕಂಡುಬಂದಿದೆ…
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ.
ಗೃಹ ಬಳಕೆ ಸಿಲಿಂಡರ್ರನ್ನು 25 ದಿನಗಳ ಬಳಿಕವೇ ಬುಕ್ ಮಾಡಲು ಅವಕಾಶಕಲ್ಪಿಸಲಾಗಿದೆ. ಆದ್ದರಿಂದ ಗ್ರಾಹಕರು ಅಡುಗೆ ಅನಿಲವನ್ನು ಮಿತಬಳಕೆ ಮಾಡುವಂತೆ ಡಿಸಿ ಕೋರಿದ್ದಾರೆ.
ಗ್ಯಾಸ್ ಸರಬರಾಜುನಲ್ಲಿ ಏನಾದರೂ ಸಮಸ್ಯೆ ಉಂಟಾದಲ್ಲಿ ಆಹಾರ ನೀರಿಕ್ಷಕರು/ಶಿರಸ್ತೇದಾರ್ ಅವರ ದೂರವಾಣಿ ಸಂಖ್ಯೆಗಳು ದೇವನಹಳ್ಳಿ-9449269001, ದೊಡ್ಡಬಳ್ಳಾಪುರ-9483482766, ನೆಲಮಂಗಲ-9036434552, ಹೊಸಕೋಟೆ-9902805563 ಸಂಪರ್ಕಿಸಬಹುದಾಗಿದೆ.
ಯಾವುದೇ ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹಣೆ ಅಥವಾ ಅಕ್ರಮ ಮಾರಾಟ ಕಂಡುಬಂದಲ್ಲಿ ಅಗತ್ಯ ವಸ್ತುಗಳ ಕಾಯ್ದೆ ಹಾಗೂ 1955 Petroleum Products(Maintenace of Production, Storage and Supply) Order 1999 and LPG Control Order 2000 2000 ಸಂಬಂಧಿತ ನಿಯಂತ್ರಣ ಆದೇಶಗಳಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…
ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…
ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…
ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…
ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…