ಪ್ರಸ್ತುತ ಪೊಲೀಸ್ ಮತ್ತು ಅರಣ್ಯ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಶೇ.3 ರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಇತರ ಇಲಾಖೆಗಳಲ್ಲಿಯೂ ಶೇ.2 ರಷ್ಟು ಮೀಸಲಾತಿ ನೀಡುವ ಕುರಿತು ಸಕಾರಾತ್ಮಕವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇತ್ತೀಚೆಗೆ ಚೀನಾದಲ್ಲಿ ನಡೆದ 19ನೇ ಏಷ್ಯನ್ ಗೇಮ್ಸ್‌ನಲ್ಲಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಸನ್ಮಾನಿಸಿ, ನಗದು ಪುರಸ್ಕಾರ ನೀಡಿ ಮಾತನಾಡಿದರು.
ಈ ಬಾರಿ ಚೀನಾದಲ್ಲಿ ನಡೆದ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಅತ್ಯಧಿಕ ಪದಕಗಳನ್ನು ಗೆದ್ದಿದ್ದಾರೆ. ಕಳೆದ ಬಾರಿ 70, ಈ ಬಾರಿ 107 ಪದಕ ಗೆದ್ದಿದ್ದಾರೆ. ದೇಶದ ಕ್ರೀಡಾಪಟುಗಳ ಸಾಧನೆ ದೇಶ ಮತ್ತು ರಾಜ್ಯದ ಗೌರವ ಹೆಚ್ಚಿಸಿದೆ. ಸಮಸ್ತ ಕನ್ನಡಿಗರಿಗೆ ಇದು ಹೆಮ್ಮೆಯ ವಿಷಯ ಎಂದರು.
ಇಡೀ ಜಗತ್ತಿನಲ್ಲಿ ಜನಸಂಖ್ಯೆಯಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಏಷ್ಯನ್ ಗೇಮ್ಸ್‌ನಲ್ಲಿಯೂ ಮೊದಲ-ಎರಡನೇ ಸ್ಥಾನ ಬಂದರೆ ಇನ್ನಷ್ಟು ಗೌರವ ಹೆಚ್ಚಲಿದೆ ಎಂದು ಹೇಳಿದರು.
ರಾಜ್ಯ ಸರ್ಕಾರ ಕ್ರೀಡೆಗೆ ಉತ್ತೇಜನ ನೀಡಲು ಬದ್ಧವಾಗಿದ್ದು, ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದಾಗ ಏಷ್ಯನ್ ಗೇಮ್ಸ್, ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಬಹುಮಾನ ಮೊತ್ತ ನೀಡುವ ಕುರಿತು ಘೋಷಿಸಿದ್ದೆ. ಅತಿ ಹೆಚ್ಚು ಮೊತ್ತದ ಬಹುಮಾನ ಘೋಷಿಸಿದ ಮೊದಲ ರಾಜ್ಯ ನಮ್ಮದು ಎಂದು ತಿಳಿಸಿದರು.
ಈಗ ನಮ್ಮ ರಾಜ್ಯದಿಂದ 8 ಜನ ಪದಕ ಪಡೆದಿದ್ದಾರೆ, ಸರ್ಕಾರ ಮತ್ತು ಏಳು ಕೋಟಿ ಕನ್ನಡಿಗರ ವತಿಯಿಂದ ಅಭಿನಂದನೆಗಳು. ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆಲ್ಲುವುದು ಸಣ್ಣ ವಿಷಯವಲ್ಲ. ಇದಕ್ಕೆ ಅಪಾರ ಪರಿಶ್ರಮದ ಅಗತ್ಯವಿದೆ. ಇದು ಅದ್ಭುತ ಸಾಧನೆ. ಭಾರತೀಯ ಕ್ರೀಡಾಪಟುಗಳು ಒಲಿಂಪಿಕ್ಸ್‌ನಲ್ಲಿಯೂ ಹೆಚ್ಚೆಚ್ಚು ಪದಕ ಗೆಲ್ಲುವಂತಾಗಲಿ ಎಂದು ಶುಭ ಹಾರೈಸುತ್ತೇನೆ ಎಂದರು.
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…