ಎಲ್ಲಾ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಶೇ.2 ರಷ್ಟು ಮೀಸಲಾತಿ ನೀಡುವ ಕುರಿತು ಕ್ರಮ ಕೈಗೊಳ್ಳಲಾಗುವುದು: ಸಿಎಂ ಸಿದ್ದರಾಮಯ್ಯ

ಪ್ರಸ್ತುತ ಪೊಲೀಸ್‌ ಮತ್ತು ಅರಣ್ಯ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಶೇ.3 ರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಇತರ ಇಲಾಖೆಗಳಲ್ಲಿಯೂ ಶೇ.2 ರಷ್ಟು ಮೀಸಲಾತಿ ನೀಡುವ ಕುರಿತು ಸಕಾರಾತ್ಮಕವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು‌ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇತ್ತೀಚೆಗೆ ಚೀನಾದಲ್ಲಿ ನಡೆದ 19ನೇ ಏಷ್ಯನ್‌ ಗೇಮ್ಸ್‌ನಲ್ಲಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಸನ್ಮಾನಿಸಿ, ನಗದು ಪುರಸ್ಕಾರ ನೀಡಿ ಮಾತನಾಡಿದರು.

ಈ ಬಾರಿ ಚೀನಾದಲ್ಲಿ ನಡೆದ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಅತ್ಯಧಿಕ ಪದಕಗಳನ್ನು ಗೆದ್ದಿದ್ದಾರೆ. ಕಳೆದ ಬಾರಿ 70, ಈ ಬಾರಿ 107 ಪದಕ ಗೆದ್ದಿದ್ದಾರೆ. ದೇಶದ ಕ್ರೀಡಾಪಟುಗಳ ಸಾಧನೆ ದೇಶ ಮತ್ತು ರಾಜ್ಯದ ಗೌರವ ಹೆಚ್ಚಿಸಿದೆ. ಸಮಸ್ತ ಕನ್ನಡಿಗರಿಗೆ ಇದು ಹೆಮ್ಮೆಯ ವಿಷಯ ಎಂದರು.

ಇಡೀ ಜಗತ್ತಿನಲ್ಲಿ ಜನಸಂಖ್ಯೆಯಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಏಷ್ಯನ್‌ ಗೇಮ್ಸ್‌ನಲ್ಲಿಯೂ ಮೊದಲ-ಎರಡನೇ ಸ್ಥಾನ ಬಂದರೆ ಇನ್ನಷ್ಟು ಗೌರವ ಹೆಚ್ಚಲಿದೆ ಎಂದು ಹೇಳಿದರು.

ರಾಜ್ಯ ಸರ್ಕಾರ ಕ್ರೀಡೆಗೆ ಉತ್ತೇಜನ ನೀಡಲು ಬದ್ಧವಾಗಿದ್ದು, ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದಾಗ ಏಷ್ಯನ್‌ ಗೇಮ್ಸ್‌, ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಬಹುಮಾನ ಮೊತ್ತ ನೀಡುವ ಕುರಿತು ಘೋಷಿಸಿದ್ದೆ. ಅತಿ ಹೆಚ್ಚು ಮೊತ್ತದ ಬಹುಮಾನ ಘೋಷಿಸಿದ ಮೊದಲ ರಾಜ್ಯ ನಮ್ಮದು ಎಂದು ತಿಳಿಸಿದರು.

ಈಗ ನಮ್ಮ ರಾಜ್ಯದಿಂದ 8 ಜನ ಪದಕ ಪಡೆದಿದ್ದಾರೆ, ಸರ್ಕಾರ ಮತ್ತು ಏಳು ಕೋಟಿ ಕನ್ನಡಿಗರ ವತಿಯಿಂದ ಅಭಿನಂದನೆಗಳು. ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆಲ್ಲುವುದು ಸಣ್ಣ ವಿಷಯವಲ್ಲ. ಇದಕ್ಕೆ ಅಪಾರ ಪರಿಶ್ರಮದ ಅಗತ್ಯವಿದೆ. ಇದು ಅದ್ಭುತ ಸಾಧನೆ. ಭಾರತೀಯ ಕ್ರೀಡಾಪಟುಗಳು ಒಲಿಂಪಿಕ್ಸ್‌ನಲ್ಲಿಯೂ ಹೆಚ್ಚೆಚ್ಚು ಪದಕ ಗೆಲ್ಲುವಂತಾಗಲಿ ಎಂದು ಶುಭ ಹಾರೈಸುತ್ತೇನೆ ಎಂದರು.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

46 minutes ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

13 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

15 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

17 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

17 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

19 hours ago