Categories: ರಾಜ್ಯ

‘ಎಲ್ಲಿಯವರೆಗೆ ಜಾತೀಯತೆ, ಅಸ್ಪೃಶ್ಯತೆ ಜೀವಂತವಾಗಿರುತ್ತದೆ ಅಲ್ಲಿಯವರೆಗೆ ಮೀಸಲಾತಿ ವ್ಯವಸ್ಥೆ ಇರಬೇಕು’- ಸಿಎಂ ಸಿದ್ದರಾಮಯ್ಯ

ಸಂವಿಧಾನ ಜಾರಿಯಾಗಿ 7 ದಶಕಗಳು ಕಳೆದಿದೆ. ಸಾಮಾಜಿಕ, ಆರ್ಥಿಕ ವ್ಯವಸ್ಥೆ ಬದಲಾಗಿದೆ ಹಾಗಾಗಿ ಇನ್ನೆಷ್ಟು ವರ್ಷ ಮೀಸಲಾತಿ ಕೊಡಬೇಕು ಎಂದು ಪ್ರಶ್ನಿಸುತ್ತಿದ್ದವರು ಇಂದು ಗೂಳಿಹಟ್ಟಿ ಶೇಖರ್ ಅವರಿಗಾದ ಅವಮಾನದ ಹೊಣೆ ಹೊರುವರೇ? ಇದೇ ಕಾರಣಕ್ಕೆ ನಾನು ಹಿಂದೆ ನೂರು ಬಾರಿ ಹೇಳಿದ್ದೇನೆ, ಈಗ ಮತ್ತೆ ಹೇಳುತ್ತೇನೆ ‘ಎಲ್ಲಿಯವರೆಗೆ ಜಾತೀಯತೆ, ಅಸ್ಪೃಶ್ಯತೆ ಜೀವಂತವಾಗಿರುತ್ತದೆ ಅಲ್ಲಿಯವರೆಗೆ ಮೀಸಲಾತಿ ವ್ಯವಸ್ಥೆ ಇರಬೇಕು’. ಜಾತೀಯತೆಯನ್ನು ತೊಡೆದು ಹಾಕಲು ಮೀಸಲಾತಿಯೂ ಒಂದು ಪ್ರಬಲ ಅಸ್ತ್ರ ಎಂದು‌ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶೂದ್ರರು ಮತ್ತು ದಲಿತರಿಗೆ ಆರ್.ಎಸ್.ಎಸ್ ಗರ್ಭಗುಡಿಗೆ ಪ್ರವೇಶ ಇಲ್ಲ, ಅವರೇನಿದ್ದರೂ ಹೊರಬಾಗಿಲಲ್ಲಿ ನಿಂತು ‘ಜೀ..ಜೀ..ಹುಜೂರ್’ ಎಂದಷ್ಟೇ ಹೇಳಬೇಕು. ಇದಕ್ಕೆ ಬಿಜೆಪಿಯ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಬಿ.ಎಲ್ ಸಂತೋಷ್‌ ಅವರಿಗೆ ಕಳುಹಿಸಿರುವ ವಾಟ್ಸಾಪ್ ವಾಯ್ಸ್ ರೆಕಾರ್ಡ್ ಸಾಕ್ಷಿ ಎಂದು ಹೇಳಿದ್ದಾರೆ.

ಬಿಜೆಪಿ ಮತ್ತು ಆರ್.ಎಸ್.ಎಸ್ ಪರಿವಾರ ಬಹಿರಂಗವಾಗಿ ಮುಸ್ಲಿಂಮರ ವಿರುದ್ಧ ಮಾತ್ರ ಹರಿಹಾಯ್ದರೂ ಅಂತರಂಗದಲ್ಲಿ ಅದು ಶೂದ್ರರು ಮತ್ತು ದಲಿತರ ವಿರುದ್ಧವಾಗಿದೆ. ಬಾಯಿಯಲ್ಲಿ ಹಿಂದೂ ನಾವೆಲ್ಲರೂ ಒಂದು ಎನ್ನುವ ಮಂತ್ರವನ್ನು ಸದಾ ಪಠಿಸುವ ಸಂಘ ಪರಿವಾರದ ನಾಯಕರು ಶೂದ್ರರು ಮತ್ತು ದಲಿತರನ್ನು ಬಡಿಯಲು ಕಂಕುಳಲ್ಲಿ ಬಡಿಗೆ ಇಟ್ಟುಕೊಂಡಿರುತ್ತಾರೆ ಎಂದಿದ್ದಾರೆ.

ಗೂಳಿಹಟ್ಟಿ ಶೇಖರ್ ಅವರಂತಹ ದಲಿತ ಸಮುದಾಯದ‌ ನಾಯಕರಿಗೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆ ಮತ್ತು ಸಂವಿಧಾನ ಮಾತ್ರ ರಕ್ಷಣೆ ನೀಡಬಹುದೇ ಹೊರತು ಸಂಘ ಪರಿವಾರದ ಸಾವರ್ಕರ್, ಗೋಲ್ವಾಲ್ಕರ್ ಚಿಂತನೆಗಳಲ್ಲ. ಶೇಖರ್ ಅವರು ತನ್ನ ಅನುಭವದಿಂದ ಪಾಠ ಕಲಿಯಲಿ ಎಂದು ಹಾರೈಸುತ್ತೇನೆ ಎಂದು‌ ತಿಳಿಸಿದ್ದಾರೆ.

ಆರ್.ಎಸ್.ಎಸ್ ಸ್ಥಾಪನೆಯಾಗಿ ಇನ್ನೆರಡು ವರ್ಷಕ್ಕೆ ನೂರು ವರ್ಷಗಳಾಗುತ್ತದೆ.  ಈ ವರೆಗೆ ಒಬ್ಬನೇ ಒಬ್ಬ ತಳ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಆರ್.ಎಸ್.ಎಸ್ ತನ್ನ ‌ಸರಸಂಘಚಾಲಕ ಇಲ್ಲವೇ ಇತರ ಉನ್ನತ ಪದಾಧಿಕಾರಿಯಾಗಿ ಯಾಕೆ ನೇಮಿಸಿಲ್ಲ ಎಂದು ನಾನು ಪ್ರಶ್ನೆ ಮಾಡಿದ್ದಕ್ಕೆ ಬಿಜೆಪಿ ಮತ್ತು ಸಂಘ ಪರಿವಾರದವರು, ಎದೆ ಬಡಿದುಕೊಂಡು ನನ್ನ ಮೈಮೇಲೆ ಎರಗಿದರು, ಅಪಪ್ರಚಾರದ ಮೂಲಕ ನನ್ನ ನಿಂದನೆ ಮಾಡಿದರು. ಈಗ ಗೂಳಿಹಟ್ಟಿ ಶೇಖರ್ ಅವರಿಗೆ ಆಗಿರುವ ಅವಮಾನ ಮತ್ತು ಅನ್ಯಾಯಕ್ಕೆ ಉತ್ತರಿಸುವ ಧೈರ್ಯ ತೋರುವರೇ? ಎಂದು ಪ್ರಶ್ನಿಸಿದ್ದಾರೆ.

‘ಹಿಂದುಗಳೆಲ್ಲ ಒಂದು’ ಎನ್ನುವ ಘೋಷಣೆ ಪ್ರಾಮಾಣಿಕತೆಯಿಂದ ಕೂಡಿದ್ದರೆ, ಮೊದಲು ಆರ್.ಎಸ್.ಎಸ್ ಸರಸಂಘಚಾಲಕ ಹುದ್ದೆಗೆ ಒಬ್ಬ ದಲಿತನನ್ನು ನೇಮಕ‌ ಮಾಡಬೇಕು. ಇಲ್ಲದೆ ಇದ್ದರೆ ಈ ರೀತಿ “ಹಿಂದೂ..ಒಂದು” ಎಂದು ಸುಳ್ಳುಹೇಳಿ ಜನರನ್ನು ನಂಬಿಸಿ‌ ಮೋಸಮಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ.

ತನ್ನ ‘ಹೊಡಿ ಬಡಿ’ ರಾಜಕಾರಣ ಮತ್ತು ತನ್ನ ಸೈದ್ಧಾಂತಿಕ ವಿರೋಧಿಗಳನ್ನು ಹಣಿಯಲು ಶೂದ್ರ ಮತ್ತು ದಲಿತ ಸಮುದಾಯದ ಅಮಾಯಕರನ್ನು ಯಥೇಚ್ಚವಾಗಿ ಬಳಸುವ ಸಂಘ ಪರಿವಾರ, ಅವಕಾಶಗಳನ್ನು‌ ನೀಡುವ ಸಮಯ ಬಂದಾಗ ಮನೆ ಗೇಟ್‌ನಿಂದ ಹೊರಗೆ ಇಡುತ್ತಾ ಬಂದಿದೆ. ಶೂದ್ರ ಮತ್ತು‌ ದಲಿತ ಸಮುದಾಯ ಈಗಲಾದರೂ ಕಣ್ತೆರೆದು ಈ ನಗ್ನ ಸತ್ಯವನ್ನು ಅರಿತುಕೊಳ್ಳಲಿ ಎಂದು ಸಲಹೆ ನೀಡಿದ್ದಾರೆ.

Ramesh Babu

Journalist

Recent Posts

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

35 minutes ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

6 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

20 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago