Categories: ಬೆಳಗಾವಿ

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: 2 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಎಸ್ ಡಿಎ ಸಿಬ್ಬಂದಿ

ಬೆಳಗಾವಿ: ಸರ್ಕಾರಿ ಕೆಲಸ ಮಾಡಿಕೊಡುವ ನೆಪದಲ್ಲಿ ಹಣಕ್ಕೆ ಬೇಡಿಕೆಯಿಟ್ಟಿದ್ದ ಉಪವಿಭಾಗಾಧಿಕಾರಿಗಳ (ಎಸಿ) ಕಚೇರಿಯ ಎಸ್‌ಡಿಎ ಸಿಬ್ಬಂದಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಬೆಳಗಾವಿ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಪದ್ಮಾಕರ್ ಪಾಟೀಲ್ ಎಂಬ ಸಿಬ್ಬಂದಿಯನ್ನು ವಶಕ್ಕೆ ಪಡೆದಿದ್ದಾರೆ.

ದೂರುದಾರ ಶುಭಂ ಅಪ್ಪಾರಾವ್ ಅವರಿಗೆ ಸಂಬಂಧಿಸಿದ 37 ಪ್ರಕರಣಗಳನ್ನು ಎಸಿ ನ್ಯಾಯಾಲಯಕ್ಕೆ ವರ್ಗಾಯಿಸುವ ಪ್ರಕ್ರಿಯೆ ಪೂರ್ಣಗೊಳಿಸಲು ಸಿಬ್ಬಂದಿ 30 ಸಾವಿರ ಲಂಚ ನೀಡುವಂತೆ ಒತ್ತಾಯಿಸಿದ್ದರು ಎನ್ನಲಾಗಿದೆ. ಈ ಪೈಕಿ ಮೊದಲ ಹಂತವಾಗಿ 2 ಸಾವಿರ ಹಣವನ್ನು ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ಲಂಚದ ಬೇಡಿಕೆಯಿಂದ ಬೇಸತ್ತ ದೂರುದಾರರು ಲೋಕಾಯುಕ್ತ ಪೊಲೀಸರ ಮೊರೆ ಹೋಗಿದ್ದರು. ದೂರನ್ನು ಆಧರಿಸಿ ಕಾರ್ಯಾಚರಣೆಗೆ ಮುಂದಾದ ಅಧಿಕಾರಿಗಳು, ಎಸಿ ಕಚೇರಿಯಲ್ಲಿಯೇ ಹಣ ಪಡೆಯುತ್ತಿದ್ದ ವೇಳೆ ಸಿಬ್ಬಂದಿಯನ್ನು ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಲೋಕಾಯುಕ್ತ ಎಸ್‌ಪಿ ಪ್ರಸನ್ನ ದೇಸಾಯಿ ಅವರ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತ ಸಿಬ್ಬಂದಿ ವಿರುದ್ಧ ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡಲು ಸರ್ಕಾರಿ ಕಚೇರಿಗಳಲ್ಲೇ ಲಂಚದ ಬೇಡಿಕೆ ಇಡುತ್ತಿರುವ ಆರೋಪಗಳು ಮತ್ತೆ ಚರ್ಚೆಗೆ ಗ್ರಾಸವಾಗಿದ್ದು, ಬೆಳಗಾವಿಯಲ್ಲಿ ನಡೆದ ಈ ಲೋಕಾಯುಕ್ತ ಕಾರ್ಯಾಚರಣೆ ಸರ್ಕಾರಿ ವಲಯದಲ್ಲಿ ಸಂಚಲನ ಮೂಡಿಸಿದೆ.

Ramesh Babu

Journalist

Recent Posts

ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ಸಾಮಾನ್ಯ ಕನ್ನಡ ಪತ್ರಿಕೆ ಮರುಸೇರ್ಪಡೆಗೆ ಕನ್ನಡ ಪಕ್ಷ ಒತ್ತಾಯ

  ದೊಡ್ಡಬಳ್ಳಾಪುರ: ಎಸ್‌ಡಿಎ, ಎಫ್‌ಡಿಎ ಹಾಗೂ ಅಬಕಾರಿ ಗಾರ್ಡ್ ನೇಮಕಾತಿ ಪರೀಕ್ಷೆಗಳಲ್ಲಿ ಈ ಹಿಂದೆ ಇದ್ದ 100 ಅಂಕಗಳ ಸಾಮಾನ್ಯ…

11 hours ago

ವಿದ್ಯಾರ್ಥಿ ದೆಸೆಯಿಂದಲೇ ಕಾನೂನಿನ ಅರಿವು ಬೆಳೆಸಿಕೊಳ್ಳುವುದು ಅಗತ್ಯ: ಡಾ. ವೆಂಕಟೇಶ್ ರೆಡ್ಡಿ

ದೊಡ್ಡಬಳ್ಳಾಪುರ: ಪ್ರತಿಯೊಬ್ಬ ನಾಗರಿಕನಿಗೂ ಕಾನೂನಿನ ಅರಿವು ಅತ್ಯಂತ ಅವಶ್ಯಕವಾಗಿದ್ದು, ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ದೆಸೆಯಿಂದಲೇ ಸಂವಿಧಾನ, ಮೂಲಭೂತ ಹಕ್ಕುಗಳು, ಕರ್ತವ್ಯಗಳು…

14 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಭಾಗಗಳಲ್ಲಿ ಕನ್ನಡಿಗರಿಗೆ ಉದ್ಯೋಗಕ್ಕೆ ಕರವೇ ಪಟ್ಟು

  ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿರುವ ಬಹುರಾಷ್ಟ್ರೀಯ ಕಂಪನಿಗಳು ಸ್ಥಳೀಯ ಕನ್ನಡಿಗರಿಗೆ ಉದ್ಯೋಗಾವಕಾಶ ನೀಡದೆ, ಹೊರರಾಜ್ಯದವರಿಗೆ ಹೆಚ್ಚಿನ…

16 hours ago

ಮರಕ್ಕೆ ಡಿಕ್ಕಿ ಹೊಡೆದ ಕಾರು: ಭೀಕರ ಕಾರು ಅಪಘಾತಕ್ಕೆ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ದುರ್ಮರಣ: ನಾಲ್ವರಿಗೆ ಗಂಭೀರ ಗಾಯ

ನೆಲಮಂಗಲ: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ…

21 hours ago

ಒಂಟಿ ಮನೆಗೆ ನುಗ್ಗಿ ದಂಪತಿಗೆ ಚಾಕು ತೋರಿಸಿ ದರೋಡೆ: ಚಿನ್ನಾಭರಣ, ನಗದು ದೋಚಿದ ಖದೀಮರು

ದೇವನಹಳ್ಳಿ: ಮಿಡ್‌ನೈಟ್‌ನಲ್ಲಿ ಒಂಟಿ ಮನೆಗೆ ನುಗ್ಗಿದ ಮೂವರು ಮುಸುಕುಧಾರಿ ದರೋಡೆಕೋರರು, ಮನೆಯ ಮಾಲೀಕ ಹಾಗೂ ಅವರ ಪತ್ನಿಗೆ ಚಾಕು ತೋರಿಸಿ…

21 hours ago

ತಾಲೂಕಿನಲ್ಲಿ 250 ಕೋಟಿ ವೆಚ್ಚದ ಟೆಟ್ರಾಪ್ಯಾಕ್ ಘಟಕ ಸ್ಥಾಪನೆ: ಶೀಘ್ರದಲ್ಲೇ ಸಿಎಂ ಡಿ.ಕೆ.ಶಿ ಅವರಿಂದ ಶಂಕುಸ್ಥಾಪನೆ- ಬಮುಲ್ ನಿರ್ದೇಶಕ ಬಿ.ಸಿ. ಆನಂದ್ ಕುಮಾರ್

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗೇಟ್ ಬಳಿ 15 ಎಕರೆ ವಿಸ್ತೀರ್ಣದಲ್ಲಿ ಬಮುಲ್ ವತಿಯಿಂದ 250 ಕೋಟಿ ವೆಚ್ಚದಲ್ಲಿ ಟೆಟ್ರಾಪ್ಯಾಕ್ ತಯಾರಿಕಾ…

2 days ago