ಎಸ್‌ಎಫ್‌ಐ ರಾಜ್ಯ ಸಮ್ಮೇಳನದ ಪೋಸ್ಟರ್ ಬಿಡುಗಡೆ

ಸಾರ್ವತ್ರಿಕ ಶಿಕ್ಷಣ, ಸಮಾನತೆ, ಸೌಹಾರ್ದತೆಗೆ ಸೆ.26, 27, 28ರಂದು ಚಿಕ್ಕಬಳ್ಳಾಪುರದಲ್ಲಿ ನಡೆಯಲಿರುವ ಎಸ್‌ಎಫ್‌ಐ ರಾಜ್ಯ ಸಮ್ಮೇಳನದ ಪೋಸ್ಟರ್ ನ್ನು ಸರ್ಕಾರಿ ಬಸ್ ನಿಲ್ದಾನದಲ್ಲಿ ಬಿಡುಗಡೆ ಮಾಡಲಾಯಿತು.

ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಸಮಾಜವಾದದ ಆಶಯಗಳನ್ನಿಟ್ಟುಕೊಂಡು ಅಭ್ಯಾಸ, ಹೋರಾಟ ಮತ್ತು ತ್ಯಾಗ ಎಂಬ ಘೋಷವಾಕ್ಯದಡಿ ದೇಶದ ಐಕ್ಯತೆ, ಸಮಗ್ರತೆ ಹಾಗೂ ಸೌಹಾರ್ದತೆ ಉಳಿವಿಗೆ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುತ್ತಿರುವ ದೇಶದ ಅತಿದೊಡ್ಡ ಕ್ರಾಂತಿಕಾರಿ ವಿದ್ಯಾರ್ಥಿ ಸಂಘಟನೆಯಾಗಿದೆ ಎಂದು ತಾಲ್ಲೂಕು ಅಧ್ಯಕ್ಷೆ ಅರ್ಚನಾ‌ ಹೇಳಿದರು.

ಸರಕಾರಗಳು ದೇಶದ ಮತ್ತು ರಾಜ್ಯ ಬಜೆಟ್‌ನಲ್ಲಿ ಶಿಕ್ಷಣಕ್ಕೆ ವರ್ಷದಿಂದ ವರ್ಷಕ್ಕೆ ಹಣಕಾಸನ್ನು ಕಡಿತ ಮಾಡುತ್ತಾ ಶಿಕ್ಷಣ ಕ್ಷೇತ್ರವನ್ನು ನಿರ್ಲಕ್ಷ್ಯ ಮಾಡುತ್ತಿವೆ. ಸರಕಾರಿ ಶಾಲೆ ಮುಚ್ಚುವ ಇಲ್ಲವೆ ಇತರೆ ಶಾಲೆಗಳೊಂದಿಗೆ ವಿಲೀನಗೊಳಿಸುವ ಮೂಲಕ ವಿದ್ಯಾರ್ಥಿಗಳನ್ನು ಬಲವಂತವಾಗಿ ಖಾಸಗಿ ಶಾಲೆಗಳಿಗೆ ಸೇರಿಕೊಳ್ಳಬೇಕಾದ ಅನಿವಾರ್ಯ ಪರಿಸ್ಥಿತಿ ಸೃಷ್ಟಿಸುತ್ತಿದ್ದಾರೆ ಎಂದು ಕಿಡಿದಾರಿದರು. ಬಡ, ಕೃಷಿ ಕೂಲಿಕಾರ್ಮಿಕರ, ದಲಿತ ಹಾಗೂ ಅಲ್ಪಸಖ್ಯಾತ ಸಮುದಾಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕಾಗಿ ನಿರಂತರ ಹೋರಾಟ ರೂಪಿಸುತ್ತಿದೆ. ಸರ್ವರಿಗೂ ಶಿಕ್ಷಣ, ಸರ್ವರಿಗೂ ಉದ್ಯೋಗಕ್ಕಾಗಿ ಶ್ರಮಿಸುತ್ತಿದೆ ಎಂದರು.

ಶೈಕ್ಷಣಿಕ ಕ್ಷೇತ್ರದ ಮೇಲೆ ನಡೆಯುತ್ತಿರುವ ದಾಳಿಗಳನ್ನು ಹಿಮ್ಮೆಟ್ಟಿಸಲು ಹಾಗೂ ಶಿಕ್ಷಣವನ್ನು ಸಾರ್ವತ್ರೀಕರಣಗೊಳಿಸಲು ಆಗ್ರಹಿಸಿ
ಚಿಕ್ಕಬಳ್ಳಾಪುರದಲ್ಲಿ  ಸೆ.26,27,28 ನಡೆಯುವ ಎಸ್.ಎಫ್.ಐ. 16ನೇ ರಾಜ್ಯ ಸಮ್ಮೇಳನದಲ್ಲಿ ಚರ್ಚೆ ನಡೆಯಲಿದೆ ಎಂದರು.

ಮಾಜಿ ಜಿಲ್ಲಾ ಕಾರ್ಯದರ್ಶಿ ಬೀರಾಜ್, ತಾಲೂಕು ಕಾರ್ಯದರ್ಶಿ ಸುದರ್ಶನ್, ನೂತನ ಜಿಲ್ಲಾ ಕಾರ್ಯದರ್ಶಿ ಸುರೇಶ್, ತಾಲ್ಲೂಕು ಅಧ್ಯಕ್ಷೆ ಅರ್ಚನಾ, ತಾಲ್ಲೂಕು ಕಾರ್ಯದರ್ಶಿ ಸುದರ್ಶನ್, ಜಿಲ್ಲಾ ಸಮಿತಿ ಸದಸ್ಯ ಅಜಯ್ ಕುಮಾರ್ ಹಾಗೂ ತಾಲ್ಲೂಕು ಸಮಿತಿ ಸದಸ್ಯರಾದ ನಾಗೇಶ್, ರಾಜೇಶ್ ಸೇರಿದಂತೆ ಮುಂತಾದವರಿದ್ದರು.

Leave a Reply

Your email address will not be published. Required fields are marked *