Categories: ಕೋಲಾರ

ಎಸ್ಐಟಿ ತನಿಖೆಯನ್ನು ದಾರಿ ತಪ್ಪಿಸಬೇಡಿ ಜೆಡಿಎಸ್‌-ಬಿಜೆಪಿ ಮುಖಂಡರಿಗೆ ಶಾಸಕ ಕೆ.ವೈ ನಂಜೇಗೌಡ ಕಿವಿಮಾತು

ಕೋಲಾರ: ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣದಲ್ಲಿ ರಾಜ್ಯ ಸರ್ಕಾರ ತನಿಖಾ ತಂಡವನ್ನು ರಚಿಸಿದ್ದು, ಸತ್ಯಾ ಸತ್ಯತೆ ಹೊರಬರುವ ಮೊದಲೇ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ದಿನ್ನಕ್ಕೊಂದು ಹೇಳಿಕೆ ನೀಡುವ ಮೂಲಕ ತನಿಖೆಯ ದಿಕ್ಕು ತಪ್ಪಿಸಲು ಹೊರಟಿದ್ದಾರೆ ಎಂದು ಮಾಲೂರು ಶಾಸಕ ಕೆ.ವೈ.ನಂಜೇಗೌಡ ಹೇಳಿದರು.

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ‌ ಅವರು, ಘಟನೆಯ ನೈಜತೆ ಹೊರಬರುವ ಮೊದಲೇ ಮಾಜಿ‌ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಉದ್ದೇಶ ಪೂರ್ವಕವಾಗಿಯೇ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ವಿನಾಕಾರಣ ಗೂಬೆ ಕೂರಿಸಲು ಹೊರಟಿದ್ದಾರೆ. ಜನ ಜೆಡಿಎಸ್‌ ಮತ್ತು ಬಿಜೆಪಿ ಪಕ್ಷಗಳ ದಿನವೊಂದು ಹೇಳಿಕೆಗಳನ್ನು ಗಮನಿಸುತ್ತಿದ್ದಾರೆ ಎಂದು ತಿಳಿಸಿದರು

ಸಂಸದ ಪ್ರಜ್ವಲ್ ರೇವಣ್ಣ ಲೈಗಿಂಕ ಪ್ರಕರಣ ಇಡೀ ರಾಜ್ಯದಲ್ಲಿ ಮಾತ್ರವಲ್ಲದೆ ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ವಿಶ್ವದಲ್ಲೇ ಇಂತಹ ಪ್ರಕರಣ ನಡೆದಿಲ್ಲ. ಈ ಪ್ರಕರಣದಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆಯಾಗುವ ಉದ್ದೇಶದಿಂದಲೇ ರಾಜ್ಯ ಸರ್ಕಾರ ಪ್ರಮಾಣಿಕ ಅಧಿಕಾರಿಗಳನ್ನು ನೇಮಿಸಿ ಎಸ್ಐಟಿಯ ಮೂಲಕ ತನಿಖೆಗೆ ಒಪ್ಪಿಸಿದ್ದು, ಇದನ್ನು ಮೊದಲು ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ನಾಯಕರು ಸಹ ಸ್ವಾಗತ ಕೋರಿದ್ದರು. ಆದರೆ, ಈಗ ತನಿಖ ತಂಡದ ಮೇಲೆ ನಂಬಿಕೆ ಇಲ್ಲ ಎಂದು ದಿನ್ನಕ್ಕೊಂದು ರೀತಿಯಲ್ಲಿ ಹೇಳಿಕೆ ನೀಡುತ್ತಿದ್ದು ತನಿಖೆ ತಂಡದ ತನಿಖೆಯನ್ನು ದಿಕ್ಕು ತಪ್ಪಿಸುವ ಹುನ್ನಾರವನ್ನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಜನರ ನಂಬಿಕೆ ಉಳಿಸಿಕೊಳ್ಳಬೇಕಾದ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲಿದ್ದು, ಆ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಪೆನ್ ಡ್ರೈವ್ ವಿಚಾರಕ್ಕೂ ಸಂಬಂದವೇ ಇಲ್ಲ, ಹೀಗಿದ್ದರೂ ಪೆನ್ ಡ್ರೈವ್ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಹೆಸರನ್ನು ಎಳೆದು ತರವುದು ಜೆಡಿಎಸ್ ಹಾಗೂ ಬಿಜೆಪಿ ನಾಯಕರಿಗೆ ಶೋಭೆ ತರುವಂತದಲ್ಲ. ಅನ್ಯಾಯಕ್ಕೊಳಗಾದ ಹೆಣ್ಣು ಮಕ್ಕಳಿಗೆ ನ್ಯಾಯ ಕೊಡಿಸಬೇಕಾಗಿದೆ. ಆ ನಿಟ್ಟಿನಲ್ಲಿ ಮಾತನಾಡುವುದನ್ನು ಬಿಟ್ಟು ಪೆನ್ ಡ್ರೈವ್ ಮೊದಲು ಹೊರತಂದಿದ್ದು ಯಾರು ಅದಕ್ಕೆ ಕುಮ್ಮಕ್ಕು ನೀಡಿದವರು ಯಾರು ಎಂಬ ವಿಚಾರಗಳು ಇದೀಗ ಮುನ್ನಲೆಗೆ ಬಂದಿದೆ. ಇದರಿಂದ ರಾಜ್ಯದ ಜನಕ್ಕೆ ಒಳ್ಳೆಯ ಸಂದೇಶ ಹೋಗುವುದಿಲ್ಲ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ ಕುಮಾರ್ ಮಾತನಾಡಿ, ಇಡೀ ರಾಜ್ಯ ದೇಶದ ಇತಿಹಾಸದಲ್ಲೇ ಬಹು ದೊಡ್ಡ ಲೈಗಿಂಕ ದೌರ್ಜನ್ಯದ ಹಗರಣ ಹಾಸನದಲ್ಲಿ ನಡೆದಿದೆ, ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ನಡೆಯುತ್ತಿದ್ದ ಸಮಯದಲ್ಲಿ ಲೈಗಿಂಕ ದೌರ್ಜನ್ಯ ಪ್ರಕರಣ ಹಾಸನಕ್ಕೆ ಮಾತ್ರ ಸೀಮಿತವಾಗಿತ್ತು ಇವತ್ತು ರಾಜ್ಯ ಹಾಗೂ ದೇಶದಾದ್ಯಂತ ಚರ್ಚೆಗೆ ಬಂದ ನಂತರ ರಾಜ್ಯ ಸರ್ಕಾರದ ಹಂತದಲ್ಲಿ ಎಸ್.ಐ.ಟಿ ತಂಡ ರಚಿಸಿ ಪ್ರಮಾಣಿಕ ಅಧಿಕಾರಿಗಳನ್ನು ನೇಮಿಸಿದ್ದ ಸಂದರ್ಭದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಪ್ರಜ್ವಲ್ ರೇವಣ್ಣನಿಗೂ ನಮ್ಮ ಕುಟುಂಬಕ್ಕೂ ಯಾವುದೇ ಸಂಬಂಧವಿಲ್ಲ ದೇವೇಗೌಡರನ್ನು ಈ ಹಗರಣದಲ್ಲಿ ಸಿಲುಕಿಸಬೇಡಿ ಉಪ್ಪು ತಿಂದವನೂ ನೀರು ಕುಡಿಯಲೇ ಬೇಕು ಎಂದು ಎಸ್.ಐ.ಟಿ ತಂಡ ರಚನೆ ಮಾಡಿದ ಬಳಿಕ ಸ್ವಾಗತ ಕೋರಿ ಇವತ್ತು ಮಾತು ತಪ್ಪಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿಯವರು ಸಹ ಜೆಡಿಎಸ್ ಪಕ್ಷದ ಸಂಸದ ಮಾಡಿರುವ ಕೃತ್ಯ ಬಿಜೆಪಿ ಪಕ್ಷ ಸಮರ್ಥನೆ ಮಾಡಿಕೊಳ್ಳುವುದಿಲ್ಲ ಒಂದು ವೇಳೆ ಹಾಸದಲ್ಲಿ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಗೆಲುವು ಸಾಧಿಸಿದರೆ ಸಂಸದರ ಸ್ಥಾನವನ್ನು ಅನರ್ಹ ಗೊಳಿಸುವುದಾಗಿ ಬಿಜೆಪಿ ನಾಯಕರೇ ಹೇಳಿದ್ದರು
ಒಂದು ವಾರದ ನಂತರ ತನಿಖೆಯನ್ನು ದಿಕ್ಕು ತಪ್ಪಿಸುವ ಕೆಲಸ ವ್ಯವಸ್ಥಿತವಾಗಿ ರಾಜ್ಯದಲ್ಲಿ ನಡೆಯುತ್ತಿದೆ ಸತ್ಯಾಂಶ ಹೊರ ಬರಬಾರದಾಗಿರಬೇಕು ಅವರಿಗೆ ಪೆನ್ ಡ್ರೈವ್ ಬಿಡುಗಡೆ ಯಾರು ಮಾಡಿದ್ದರು ಅದರ ವಿಚಾರದಲ್ಲಿ ಚರ್ಚೆಗಳು ನಡೆಯುತ್ತಲೇ ಇದೆ ವಿಡಿಯೋದಲ್ಲಿರುವ ಸಂತ್ರಸ್ತರ ಬಗ್ಗೆ ಚರ್ಚೆ ಇಲ್ಲ ಹೆಣ್ಣು ಮಕ್ಕಳಿಗಾಗಿರುವ ದೌರ್ಜನ್ಯದ ಬಗ್ಗೆ ಚರ್ಚೆ ಯಾಕೆ ಇಲ್ಲ ಎಂದು ಪ್ರಶ್ನೆ ಮಾಡಿದರು.

ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಕಳೆದ ಒಂದು ವರ್ಷದಿಂದ ನನ್ನ ಬಳಿ ಪೆನ್ ಡ್ರೈವ್ ಇದೆ ಬಿಡುಗಡೆ ಮಾಡುತ್ತೇನೆ ಎಂದು ಹೇಳುತ್ತಿದ್ದ ಆ ವ್ಯಕ್ತಿ ಡಿಕೆ ಶಿವಕುಮಾರ್ ಅವರ ಕೈವಾಡ ಈ ಪ್ರಕರಣದ ಹಿಂದೆ ಇದೆ ಎಂದರೆ ಹೇಗೆ ಹಾಗಾಗಿ ಈ ಪ್ರಕರಣದಲ್ಲಿ ಎಲ್ಲವೂ ತನಿಖೆಯಾಗಬೇಕು ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು

ಈ ಪತ್ರಿಕಾಗೋಷ್ಠಿಯಲ್ಲಿ ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲ್ ಗೌಡ, ನಗರಸಭೆ ಸದಸ್ಯ ಮುರಳಿಗೌಡ, ಜಿಲ್ಲಾ ಕಾಂಗ್ರೆಸ್ ಮಾಧ್ಯಮ ವಕ್ತಾರ ದಯಾನಂದ್, ಮುಖಂಡರಾದ ರಾಜೇಂದ್ರ, ಆನೇಪುರ ಹನುಮಂತಪ್ಪ, ಖಾಜಿಕಲ್ಲಹಳ್ಳಿ ಮುನಿರಾಜು, ಚಂಜಿಮಲೆ ರಮೇಶ್, ಮೈಲಾಂಡಹಳ್ಳಿ ಮುರಳಿ, ಅಂಕತಟ್ಟಿ ಬಾಬು, ಜನಪನಹಳ್ಳಿ ನವೀನ್, ಮುಂತಾದವರು ಇದ್ದರು.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

2 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

4 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

7 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

11 hours ago

ಉಪರಾಷ್ಟ್ರಪತಿ‌ ಚುನಾವಣೆ: ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರಿಗೆ ಭರ್ಜರಿ ಗೆಲುವು

ಮಂಗಳವಾರ ನಡೆದ ಉಪರಾಷ್ಟ್ರಪತಿ‌ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…

22 hours ago

40 ಕೋಟಿ ಮೌಲ್ಯದ 6 ಎಕರೆ ಸರ್ಕಾರಿ ಆಸ್ತಿ ಸರ್ಕಾರದ ವಶ: ಡಿಸಿ ಕ್ರಮಕ್ಕೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಅಭಿನಂದನೆ ಸಲ್ಲಿಕೆ

ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…

24 hours ago