ಕೋಲಾರ: ರಾಜ್ಯದಲ್ಲಿ ಜಾತಿ ಸಮೀಕ್ಷೆಯಯಲ್ಲಿ ಪರಿಶಿಷ್ಟ ಪಂಗಡಕ್ಕೆ ಕುರುಬ ಸಮುದಾಯವನ್ನು ಸೇರಿಸಲು ನಡೆಸುತ್ತಿರುವ ಪ್ರಯತ್ನಗಳನ್ನು ಈ ಕೂಡಲೇ ಕೈ ಬಿಡಬೇಕು ಎಂದು ಒತ್ತಾಯಿಸಿ ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ನೀಡಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಎನ್ ಅಂಬರೀಷ್ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ವಾಲ್ಮೀಕಿ ನಾಯಕ ಸಮುದಾಯವು ರಾಜ್ಯದಲ್ಲಿ ಶೈಕ್ಷಣಿಕವಾಗಿ ಮತ್ತು ಔದ್ಯೋಗಿಕವಾಗಿ ತೀರ ಹಿಂದುಳಿದಿದ್ದು ರಾಜಕೀಯವಾಗಿ ಅಧಿಕಾರಗಳನ್ನು ಪಡೆಯುವುದು ಸಹ ತುಂಬಾ ಕಷ್ಟವಾಗಿದೆ ಇಂತಹ ಸಂದರ್ಭದಲ್ಲಿ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗಳಿಗೆ ಸೇರಿಸುವ ಪ್ರಯತ್ನವು ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ಕೊಡಲಿ ಪೆಟ್ಟು ಕೊಟ್ಟಂತಾಗುತ್ತದೆ ಸಂವಿಧಾನ ಬದ್ಧವಾಗಿ ಕೆಲವು ಜಿಲ್ಲೆಗಳಲ್ಲಿ ಜೇನು ಕುರುಬ, ಕಾಡು ಕುರುಬ ಇನ್ನು ಕೆಲವು ಉಪ ಪಂಗಡಗಳಲ್ಲಿ ಇರತಕ್ಕಂತವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗಿದೆ ಮುಖ್ಯ ವಾಹಿನಿಯಲ್ಲಿರುವ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದು ಸರಿಯಾದ ಕ್ರಮವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಮುದಾಯದ ಮುಖಂಡ ಎಂ.ಬಾಲಗೋವಿಂದ್ ಮಾತನಾಡಿ ಕರ್ನಾಟಕ ರಾಜ್ಯದಲ್ಲಿ 15 ಮೀಸಲಾತಿ ಕ್ಷೇತ್ರಗಳು ಪರಿಶಿಷ್ಟ ಪಂಗಡಕ್ಕೆ ಸೇರಿದ್ದು. ಇದರಲ್ಲಿ ಕಾಂಗ್ರೆಸ್ ಪಕ್ಷಕ್ಕೆ 14 ಶಾಸಕರನ್ನು ನೀಡಿದ್ದಾರೆ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮರೆಯಬಾರದು ಕುರುಬ ಸಮುದಾಯದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಸರ್ಕಾರದ ಪ್ರಯತ್ನವನ್ನು ಈ ಕೂಡಲೇ ಕೈಬಿಡಬೇಕು ಒಂದು ವೇಳೆ ತಾವು ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಪ್ರಯತ್ನ ನಡೆಸಿದರೆ ರಾಜ್ಯಾದ್ಯಂತ ತೀವು ಸ್ವರೂಪದ ಹೋರಾಟವನ್ನು ಕೂಡ ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಸಮುದಾಯದ ರಾಜ್ಯ ಮುಖಂಡ ಮಾಲೂರು ಎನ್ ವೆಂಕಟರಾಮ್ ಮಾತನಾಡಿ ಪರಿಶಿಷ್ಟ ಪಂಗಡಕ್ಕೆ ಕುರುಬ ಸಮುದಾಯವನ್ನು ಸೇರ್ಪಡೆ ಕೂಡಲೇ ಕೈಬಿಡಬೇಕು ಇಲ್ಲದೇ ಹೋದರೆ ಮುಂದಿನ ವಾಲ್ಮೀಕಿ ಜಯಂತಿಯನ್ನು ಬಹಿಷ್ಕಾರ ಹಾಕಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಸಮುದಾಯದ ಮುಖಂಡರಾದ ಕುಡುವನಹಳ್ಳಿ ಆನಂದ್, ಕೋಟೆ ಶ್ರೀನಿವಾಸ್, ಮಂಜುಳಾ ಶ್ರೀನಿವಾಸ್, ಶ್ರೀನಿವಾಸಪುರ ನರೇಶ್, ಬೆಳ್ಳೂರು ತಿರುಮಲೇಶ್, ಬೈರಂಡಹಳ್ಳಿ ನಾಗೇಶ್, ಮೇಡಹಾಳ ಮಂಜು, ಕಲ್ಲಂಡೂರು ನಾರಾಯಣಸ್ವಾಮಿ, ವಕ್ಕಲೇರಿ ನಾಗೇಶದ, ಕಲ್ವಮಂಜಲಿ ರವಿ, ಕೃಷ್ಣಪುರ ನರೇಶ್, ನಾಳಕುಂಟೆ ನವೀನ್ ಮುಂತಾದವರು ಇದ್ದರು.
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…
ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…