ಎಸ್‌ಟಿಪಿ ಪ್ಲಾಂಟ್, ಪೈಪ್‌ಲೈನ್ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಚಿವ ಕೆ.ಹೆಚ್.ಮುನಿಯಪ್ಪ ಸೂಚನೆ

ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಿಗೆ ಆರು ತಿಂಗಳವರೆಗೆ ನೀರು ಪೂರೈಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಸೂಚಿಸಿದರು.

ಇಂದು ನಗರದ ಪ್ರವಾಸಿ ಮಂದಿರದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಪಂಚಾಯತಿ ವ್ಯಾಪ್ತಿಯ ಅಂತರ್ಜಲ ಶುದ್ಧಿ ಆಗಬೇಕಾದರೆ ಆರು ತಿಂಗಳು ಬೇಕಾಗುತ್ತದೆ, ಅಷ್ಟರಲ್ಲಿ ಎಸ್‌ಟಿಪಿ ಪ್ಲಾಂಟ್, ಪೈಪ್‌ಲೈನ್ ಕಾಮಗಾರಿಗಳನ್ನು ಪೂರ್ಣಗೊಳಿಸಿ ಎಂದರು.

ಶನಿವಾರ ಜಿಲ್ಲಾಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದು ಅಷ್ಟರಲ್ಲಿ ತಾಲ್ಲೂಕಿನಲ್ಲಿ ಜಿಲ್ಲಾ ಪರಿಷತ್ ರಸ್ತೆಗಳೂ ಸೇರಿದಂತೆ ಹದಗೆಟ್ಟ ರಸ್ತೆಗಳು ಮತ್ತು ತುರ್ತಾಗಿ ಮಾಡಲೇಬೇಕಾದ ರಸ್ತೆಗಳು, ತಾಲ್ಲೂಕಿನಲ್ಲಿ ಹದಗೆಟ್ಟಿರುವ ಆರ್‌ಒ ಪ್ಲಾಂಟ್‌ಗಳು ಹೊಸದಾಗಿ ಆರಂಬಿಸಬೇಕಾದ ಕಾಮಗಾರಿಗಳ ಬಗ್ಗೆ ಸಮಗ್ರ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಆದೇಶ ನೀಡಿದರು.

ಸಭೆಯಲ್ಲಿ ತಹಶಿಲ್ದಾರ್ ಮೋಹನಕುಮಾರಿ, ಇಒ ಶ್ರೀನಾಥ್‌ಗೌಡ, ಪಿಡಬ್ಲೂ ಇಂಜಿನಿಯರ್ ಜಯಪ್ರಕಾಶ್, ಕಾಂಗ್ರೆಸ್ ಮುಖಂಡರಾದ ಎಸ್‌ಆರ್.ಮುನಿರಾಜು, ರಂಗಪ್ಪ, ಕೆಪಿ.ಜಗನ್ನಾಥ್, ಅಖಿಲೇಶ್, ಆರ್‌ವಿ.ಮಹೇಶ್, ರಾಮಕೃಷ್ಣ ಸೇರಿದಂತೆ ತಾಲ್ಲೂಕು ಮಟ್ಟದ ಹಲವಾರು ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

4 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

17 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

18 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

20 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

21 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

23 hours ago