ಪತಿ ವಿರುದ್ಧ ಎಸ್‌ಪಿಗೆ ದೂರು ನೀಡಲು ಬಂದ ಪತ್ನಿಯನ್ನು ಚಾಕುವಿನಿಂದ ಇರಿದು ಪತಿಯೇ ಕೊಲೆ ಮಾಡಿರುವ ಘಟನೆ ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
ಹಾಸನ ನಗರ ಠಾಣೆಯ ಕಾನ್‌ಸ್ಟೆಬಲ್ ಲೋಕನಾಥ್ ತನ್ನ ಪತ್ನಿ ಮಮತಾ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಮೂಲಗಳ ಪ್ರಕಾರ ಲೋಕನಾಥ್ ಮತ್ತು ಮಮತಾ ಮಧ್ಯೆ 4-5 ದಿನಗಳಿಂದ ಜಗಳ ನಡೆದಿತ್ತು. ಇಂದು ಪತಿ ವಿರುದ್ಧ ದೂರು ನೀಡಲು ಎಸ್‌ಪಿ ಕಚೇರಿಗೆ ಪತ್ನಿ ಮಮತಾ ಬಂದಿದ್ದಾರೆ. ಪತ್ನಿ ತನ್ನ ವಿರುದ್ಧ ದೂರು ನೀಡಲು ಬರುತ್ತಿರುವುದನ್ನು ಗಮನಿಸಿದ ಲೋಕನಾಥ್ ಆವರಣದಲ್ಲೇ ಮಮತಾ ಎದೆಗೆ ಚೂರಿ ಇರಿದಿದ್ದಾನೆ ಎನ್ನಲಾಗಿದೆ.
ಲೋಕನಾಥ್ ಹಾಗೂ ಮಮತಾ ಇಬ್ಬರಿಗೂ 17 ವರ್ಷಗಳ ಹಿಂದೆ ಮದುವೆಯಾಗಿತ್ತು. ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದರು. ಕಳೆದ ನಾಲ್ಕೈದ ದಿನದಿಂದಲೂ ಇಬ್ಬರ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿತ್ತು. ದಂಪತಿಗಳು ಆಗಾಗ್ಗೆ ವಿವಿಧ ವಿಷಯಗಳಿಗೆ ಪರಸ್ಪರ ಜಗಳವಾಡುತ್ತಿದ್ದರು ಮತ್ತು ಸಂಬಂಧಿಕರು ಅವರ ನಡುವೆ ಮಾತುಕತೆ ನಡೆಸಿದರು. ಆದರೆ, ಅದು ಸಫಲವಾಗಲಿಲ್ಲ.
ಇಂದು ಕೂಡ ದಂಪತಿಗಳು ಭೂವಿವಾದ ಸಂಬಂಧ ಪರಸ್ಪರ ಜಗಳವಾಡಿದ್ದು ಜಗಳ ವಿಕೋಪಕ್ಕೆ ತಿರುಗಿ ಇಬ್ಬರೂ ಪರಸ್ಪರ ಹೊಡೆದಿದ್ದಾರೆ ಎನ್ನಲಾಗಿದೆ. ಹೀಗಾಗಿ ಪತಿ ಲೋಕನಾಥ್ ವಿರುದ್ಧ ಎಸ್ ಪಿಗೆ ದೂರು ನೀಡಲು ಮಮತಾ ಮುಂದಾಗಿದ್ದರು. ಈ ವಿಚಾರ ತಿಳಿದ ಲೋಕನಾಥ್ ಆಕೆಯನ್ನು ಮನೆಯಿಂದ ಮೋಟಾರ್ ಸೈಕಲ್ ನಲ್ಲಿ ಮಮತಾಳನ್ನು ಹಿಂಬಾಲಿಸಿಕೊಂಡು ಬಂದಿದ್ದ.
ಪತ್ನಿ ಎಸ್ ಪಿ ಕಚೇರಿ ಪ್ರವೇಶಿಸುತ್ತಿದ್ದಂತೆಯೇ ಅಕೆಯನ್ನು ಮನಸೋ ಇಚ್ಛೆ ಇರಿದಿದ್ದಾನೆ.
ಈ ವೇಳೆ ಮಮತಾರ ಹೊಟ್ಟೆ ಮತ್ತು ಎದೆಗೆ ಇರಿತವಾಗಿದೆ. ಗಂಭೀರವಾಗಿ ಗಾಯಗೊಂಡ ಮಮತಾ ಅವರನ್ನು ಎಸ್ಪಿ ಕಚೇರಿ ಸಮೀಪವಿರುವ ಹಿಮ್ಸ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯೆ ಆಕೆ ಕೊನೆಯುಸಿರೆಳೆದಿದ್ದಾರೆ.
ಇರಿತದ ಬಳಿಕ ಲೋಕನಾಥ್ ತನ್ನ ಮೋಟಾರ್ ಸೈಕಲ್ ನಲ್ಲಿ ಪರಾರಿಯಾಗಿದ್ದ. ಕೂಡಲೇ ಕಾರ್ಯಾಚರಣೆ ನಡೆಸಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ ಎಂದು ಎಸ್ಪಿ ಮಹಮ್ಮದ್ ಸುಜೀತಾ ತಿಳಿಸಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿ ಪೊಲೀಸ್ ಪತ್ನಿ ಮಮತಾ ಕುಟುಂಬ ಸದಸ್ಯರ ಆಕ್ರಂದನ ಮುಗಿಲುಟ್ಟಿದೆ. ಮಗಳನ್ನ ನೆನೆದು ಹೆತ್ತ ತಾಯಿ ಕಣ್ಣೀರಿಡುತ್ತಿದ್ದಾರೆ. ಕೊಲೆ ಆರೋಪಿ ಲೋಕನಾಥ್ ವಿರುದ್ಧ ಸಂಬಂಧಿಕರು ಆಕ್ರೋಶ ಹೊರ ಹಾಕುತ್ತಿದ್ದಾರೆ.
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…