ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು ಶೇ.100ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯಕ್ಕೆ 4ನೇ ಸ್ಥಾನ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ತಾಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಈ ಹಿನ್ನೆಲೆ ನಾವು ಮಾಡಿದ ಕಠೋರ ತಪಸ್ಸಿಗೆ ತಕ್ಕ ಯಶಸ್ಸು ಸಿಕ್ಕಿದೆ ಎಂದು ಶಾಲಾ ಸಂಸ್ಥಾಪಕ ಕಾರ್ಯದರ್ಶಿ ಶ್ರೀನಿವಾಸ್ ಮೂರ್ತಿ ಹೇಳಿದರು.

ಶಾಲಾ ವಿದ್ಯಾರ್ಥಿನಿ ಸಹನಾ 625ಕ್ಕೆ 622 ಅಂಕ (99.52%) ಪಡೆಯುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. 88 ವಿದ್ಯಾರ್ಥಿಗಳು ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 34 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 47 ವಿದ್ಯಾರ್ಥಿಗಳು ಪ್ರಥಮ ದರ್ಜೆ, 7 ವಿದ್ಯಾರ್ಥಿಗಳು ಸೆಕೆಂಡ್ ಕ್ಲಾಸ್ ಬಂದಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು..

ಇಡೀ ಜಿಲ್ಲೆಗೆ ಟಾಪರ್ ಆದ ವಿದ್ಯಾರ್ಥಿಗಳಿಗೆ 50 ಸಾವಿರ ನಗದು ಬಹುಮಾನ‌ ನೀಡಲಾಗುವುದು ಎಂದು ಈ ಮೊದಲೇ ತಿಳಿಸಿದ್ದೇವು. ಅದರಂತೆ ಸಹನಾ ಎ ವಿದ್ಯಾರ್ಥಿನಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುರುತ್ತಾರೆ. ಈ ಹಿನ್ನೆಲೆ ಸಹನಾ ಎ ಗೆ ನಗದು ಬಹುಮಾನ ನೀಡಲಾಗುವುದು.

ನಮ್ಮ ಶಾಲೆಯಲ್ಲಿ ಅನುಭವಿ, ನುರಿತ ಶಿಕ್ಷಕರಿದ್ದಾರೆ.‌ ಮಕ್ಕಳ ವಿದ್ಯಾಭ್ಯಾಸ ಸುಧಾರಿಸಲು ಅವಿರತ ಶ್ರಮ ವಹಿಸುತ್ತಾರೆ. ಅದರಂತೆ ಮಕ್ಕಳು, ಪೋಷಕರು ಸಹಕಾರದಿಂದ ಈ ಯಶಸ್ಸು ಕಾಣಲು ಸಾಧ್ಯವಾಯಿತು ಎಂದರು.

ನಂತರ ಎಸ್ ಎಸ್ ಎಲ್ ಸಿ ಟಾಪರ್ ಸಹನಾ.ಎ ಮಾತನಾಡಿ, ನನ್ನ ಶಿಕ್ಷಕರಿಂದಲೇ ನಾನು ಉತ್ತಮ ಅಂಕ ಪಡೆಯಲು ಸಾಧ್ಯವಾಯಿತು. ಟಾಪರ್ ಆಗಿದ್ದಕ್ಕೆ ತುಂಬಾ ಸಂತೋಷ ಆಗುತ್ತಿದೆ. ಭವಿಷ್ಯದಲ್ಲಿ ವೈದ್ಯೆ ಆಗುವ ಆಸೆ ಇದೆ. ಅದನ್ನು ಸಾಕಾರಗೊಳಿಸಿಕೊಳ್ಳುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ಎಸ್ ಎಲ್ ಸಿ ಟಾಪರ್ ಸಹನಾ.ಎ ತಂದೆ ಕೆ.ಆರ್ ಅಶ್ವತ್ಥ್ ಮಾತನಾಡಿ, ನನ್ನ ಮಗಳು ಎಸ್ ಎಸ್ ಎಲ್ ಸಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾಳೆ. ಈ ಸಾಧನೆಯನ್ನು ಶಾಲಾ ಆಡಳಿತ ಮಂಡಳಿ, ಶಿಕ್ಷಕರಿಗೆ ಅರ್ಪಣೆ ಮಾಡುತ್ತಿದ್ದೇನೆ. ಎಂಬಿಬಿಎಸ್ ಓದಿ ವೈದ್ಯೆಯಾಗುವ ಇಚ್ಛೆಯನ್ನು ಮಗಳು ಹೊಂದಿದ್ದಾಳೆ. ಈ ನಿಟ್ಟಿನಲ್ಲಿ ಮುಂದಿನ‌‌ ವಿದ್ಯಾಭ್ಯಾಸ ಮಾಡಿಸುತ್ತೇನೆ.‌ ಮಗಳ ಓದಿಗಾಗಿ ನಮ್ಮ ಸಹಕಾರ ಇದ್ದೇ ಇರುತ್ತದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶಂಕರಯ್ಯ ಟಿ ಎಸ್, (ಕ್ಷೇತ್ರ ಸಮನ್ವಯ ಅಧಿಕಾರಿ, ಆರ್. ನಾರಾಯಣಸ್ವಾಮಿ, ಎಸ್‌ಎಸ್‌ಎಲ್‌ಸಿ ನೋಡಲ್ ಅಧಿಕಾರಿಗಳಾದ ಕೆ.ಎಮ್ ಭೀಮರಾಜು, ರಾಮಚಂದ್ರ ವಿ, ಆಂಜಿನಪ್ಪ ಶಿಕ್ಷಣ ಸಂಯೋಜಕರು ಮತ್ತು ಮುಖ್ಯೋಪಾಧ್ಯಾಯರಾದ ಶೋಭಾವತಿ.ಎಂ, ಪೋಷಕರು ಮತ್ತು ಶಿಕ್ಷಕರ ಸಮ್ಮುಖದಲ್ಲಿ ಕುಮಾರಿ ಸಹಾನರವರನ್ನು ಸನ್ಮಾನಿಸಿ ಶುಭ ಕೋರಿದರು.

ನಂತರ ಕನ್ನಡ ಭಾಷಾ ಶಿಕ್ಷಕ ನವೀನ್ ಕುಮಾರ್ ಮಾತನಾಡಿ, ಮಕ್ಕಳ ಪರಿಶ್ರಮದಿಂದ ಶಾಲೆಗೆ ಉತ್ತಮ ಫಲಿತಾಂಶ ಬಂದಿದೆ. ಎಸ್ ಎಸ್ ಎಲ್ ಸಿ ಟಾಪರ್ ಸಹನಾ ಒಳ್ಳೆ ಸಂಸ್ಕಾರವುಳ್ಳ ಮಗು, ಈ ಮಗು ನಮ್ಮ ಶಾಲೆಯ ಹೆಮ್ಮೆ. ಮುಂದಿನ ವರ್ಷ ಫಲಿತಾಂಶದಲ್ಲಿ ರಾಜ್ಯ ದರ್ಜೆ ಪಡೆಯಲು ಶ್ರಮಪಡುತ್ತೇವೆ ಎಂದರು…

Ramesh Babu

Journalist

Recent Posts

ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ- ಆರ್.ವಿ. ಮಹೇಶ್

ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…

7 hours ago

ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ 18ರ ಹರೆಯದ ವಿದ್ಯಾರ್ಥಿ

ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…

7 hours ago

ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ತೇಜಸ್ವಿನಿ.ಸಿ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…

8 hours ago

ಬರದ ನಡುವೆ ಜಾನುವಾರುಗಳಿಗೆ ಹಸಿರು ಆಸರೆ: 70 ಎಕರೆಯಲ್ಲಿ ಹಸಿಹುಲ್ಲು ಬೆಳವಣಿಗೆಗೆ ಜಿಪಂ ಕ್ರಮ: ಮತ್ತಷ್ಟು ಸರ್ಕಾರಿ ಜಮೀನು ಹುಲ್ಲುಗಾವಲಾಗಿ ಪರಿವರ್ತನೆ

ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…

20 hours ago

ನಕಲಿ ಔಷಧಿಗಳ ಮಾರಾಟ ಜಾಲದ ಕಿಂಗ್‌ಪಿನ್ ಪ್ರಶಾಂತ್ ಪೊಲೀಸರ ವಶಕ್ಕೆ

ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…

2 days ago

ಒಂದು ವಾರದೊಳಗೆ ಮಳೆಯಾಗದಿದ್ದರೆ ಬಿತ್ತನೆಯಾದ ಬೆಳೆಗೂ ಕುತ್ತು | ರಾಗಿ, ಮೆಕ್ಕೆಜೋಳಕ್ಕೆ ತೇವಾಂಶದ ಕೊರತೆ | ಕೆರೆ-ಕುಂಟೆಗಳು ಖಾಲಿ, ಮೇವಿನ ಕೊರತೆಯ ಆತಂಕ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…

2 days ago