ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ ಹನ್ನೊಂದನೇ ಸ್ಥಾನ ಪಡೆದುಕೊಂಡಿದೆ.

ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಜಿಲ್ಲೆಯ ಒಟ್ಟು 278 ಪ್ರೌಢಶಾಲೆಗಳಲ್ಲಿನ ಒಟ್ಟು 13,083 ವಿದ್ಯಾರ್ಥಿಗಳ ಹಾಜರಾಗಿದ್ದು, 12,510 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇಕಡ 95.62 ರಷ್ಟು ಫಲಿತಾಂಶ ಪಡೆದಿದ್ದಾರೆ.

ಒಟ್ಟು 6639 ಬಾಲಕರು ಹಾಜರಾಗಿದ್ದು 6247 ಬಾಲಕರು ತೇರ್ಗಡೆಯಾಗುವ ಮೂಲಕ ಶೇ. 94.10 ರಷ್ಟು ಫಲಿತಾಂಶ ಪಡೆದಿದ್ದಾರೆ. 6444 ಬಾಲಕಿಯರು ಪರೀಕ್ಷೆಗೆ ಹಾಜರಾಗಿದ್ದು, 6263 ಬಾಲಕಿಯರು ತೇರ್ಗಡೆ ಹೊಂದುವ ಮೂಲಕ ಶೇ 97.19 ರಷ್ಟು ಫಲಿತಾಂಶ ದೊರಕಿದೆ.

ನಗರ ಪ್ರದೇಶದ 4775 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 4496 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 94.16 ರಷ್ಟು ಫಲಿತಾಂಶ ದೊರೆತಿದೆ.

ಗ್ರಾಮೀಣ ಪ್ರದೇಶದ 8308 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 8014 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ 96.46 ರಷ್ಟು ಫಲಿತಾಂಶ ಸಿಕ್ಕಿದೆ.

*ತಾಲ್ಲೂಕು ವಾರು ಫಲಿತಾಂಶ*

*ದೇವನಹಳ್ಳಿ
* ಹಾಜರಾದವರು-3091
ಉತ್ತೀರ್ಣರಾದವರು-2956
ಶೇಕಡ: 95.63%

*ದೊಡ್ಡಬಳ್ಳಾಪುರ*
* ಹಾಜರಾದವರು-3553
ಉತ್ತೀರ್ಣರಾದವರು-3416
ಶೇಕಡ: 96.14%

*ಹೊಸಕೋಟೆ*
* ಹಾಜರಾದವರು-3578
ಉತ್ತೀರ್ಣರಾದವರು-3479
ಶೇಕಡ: 97.23%

*ನೆಲಮಂಗಲ*
* ಹಾಜರಾದವರು-2861
ಉತ್ತೀರ್ಣರಾದವರು-2659
ಶೇಕಡ:92.94%

*ಶಾಲಾವಾರು ಫಲಿತಾಂಶ*

* ಸರ್ಕಾರಿ ಶಾಲೆ-94.35%
* ಅನುದಾನಿತ-90.14%
* ಅನುದಾನ ರಹಿತ-98.27%

*625 ಕ್ಕೆ 622 ಅಂಕ ಪಡೆದ ಜಿಲ್ಲೆಯ ಮೂವರು ಟಾಪರ್ ಗಳು*

1. ಹೇಮ ಜಿ. ಹೆಚ್, ಡಾ. ಬಿ.ಆರ್ ಅಂಬೇಡ್ಕರ್ ಹೆಣ್ಣು ಮಕ್ಕಳ ವಸತಿ ಶಾಲೆ. ಮಧುರೆ ದೊಡ್ಡಬಳ್ಳಾಪುರ.
2. ವಿಷ್ಣು ರೆಡ್ಡಿ. ಪಿ, ನ್ಯೂ ಹಾರಿಜನ್ ಶಾಲೆ, ಹೊಸಕೋಟೆ ತಾಲ್ಲೂಕು.
3. ಸಹನಾ.ಎ, ಲಿಟ್ಲ್ ಮಾಸ್ಟರ್ ಆಂಗ್ಲ ಶಾಲೆ, ಕಂಟನಕುಂಟೆ, ದೊಡ್ಡಬಳ್ಳಾಪುರ ತಾಲ್ಲೂಕು.

Ramesh Babu

Journalist

Recent Posts

ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ- ಆರ್.ವಿ. ಮಹೇಶ್

ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…

9 hours ago

ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ 18ರ ಹರೆಯದ ವಿದ್ಯಾರ್ಥಿ

ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…

10 hours ago

ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ತೇಜಸ್ವಿನಿ.ಸಿ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…

10 hours ago

ಬರದ ನಡುವೆ ಜಾನುವಾರುಗಳಿಗೆ ಹಸಿರು ಆಸರೆ: 70 ಎಕರೆಯಲ್ಲಿ ಹಸಿಹುಲ್ಲು ಬೆಳವಣಿಗೆಗೆ ಜಿಪಂ ಕ್ರಮ: ಮತ್ತಷ್ಟು ಸರ್ಕಾರಿ ಜಮೀನು ಹುಲ್ಲುಗಾವಲಾಗಿ ಪರಿವರ್ತನೆ

ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…

22 hours ago

ನಕಲಿ ಔಷಧಿಗಳ ಮಾರಾಟ ಜಾಲದ ಕಿಂಗ್‌ಪಿನ್ ಪ್ರಶಾಂತ್ ಪೊಲೀಸರ ವಶಕ್ಕೆ

ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…

2 days ago

ಒಂದು ವಾರದೊಳಗೆ ಮಳೆಯಾಗದಿದ್ದರೆ ಬಿತ್ತನೆಯಾದ ಬೆಳೆಗೂ ಕುತ್ತು | ರಾಗಿ, ಮೆಕ್ಕೆಜೋಳಕ್ಕೆ ತೇವಾಂಶದ ಕೊರತೆ | ಕೆರೆ-ಕುಂಟೆಗಳು ಖಾಲಿ, ಮೇವಿನ ಕೊರತೆಯ ಆತಂಕ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…

2 days ago