
ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ.
ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ.
ಗ್ರಾಮದ DVS ವಸತಿ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ 16 ವರ್ಷದ ವಿದ್ಯಾರ್ಥಿ ಕೊಟ್ರೇಶ್ ಶಾಲಾ ಕಟ್ಟಡದ ಮೇಲಿಂದ ಬಿದ್ದು ಸಾ*ವನ್ನಪ್ಪಿದ್ದಾರೆ.
ಈ ಘಟನೆಯಿಂದ ಗ್ರಾಮಸ್ಥರು ಮತ್ತು ಶಾಲಾ ಶಿಕ್ಷಕರು ಆಘಾತಕ್ಕೆ ಒಳಗಾಗಿದ್ದಾರೆ. ಆತ ಕಟ್ಟಡದ ಮೇಲಿಂದ ಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕೊಟ್ರೇಶ್ ಭರಮಸಾಗರ ಹೋಬಳಿಯ ಕರಿಯಮ್ಮನಹಳ್ಳಿ ನಿವಾಸಿಯಾಗಿದ್ದರು. ಶಾಲೆಯ ವಸತಿ ಗೃಹದಲ್ಲೇ ಇದ್ದು ಓದುತ್ತಿದ್ದರು. ಘಟನೆ ಶಾಲಾ ಕಟ್ಟಡದ ಮೇಲ್ಭಾಗದಲ್ಲಿ ನಡೆದಿದೆ. ವಿದ್ಯಾರ್ಥಿ ತಾನಾಗಿಯೇ ಪಲ್ಟಿ ಹೊಡೆದು ಬಿದ್ದಿರುವುದು ಸಿಸಿ ಟಿವಿ ದೃಶ್ಯದಲ್ಲಿ ಸೆರೆಯಾಗಿದೆ. ಆದರೆ ಈ ದುರಂತಕ್ಕೆ ನಿಖರ ಕಾರಣ ಇದುವರೆಗೂ ತಿಳಿದುಬಂದಿಲ್ಲ.
ಸ್ಥಳೀಯರ ಪ್ರಕಾರ, ಕೊಟ್ರೇಶ್ ಶಾಲಾ ಕಟ್ಟಡದ ಮೇಲ್ಭಾಗಕ್ಕೆ ಹೋಗಿದ್ದರು. ಅಲ್ಲಿಂದ ಏಕಾಏಕಿ ಕೆಳಗೆ ಬಿದ್ದಿದ್ದಾರೆ. ಘಟನೆ ನಡೆದ ಕೂಡಲೇ ಶಾಲಾ ಆಡಳಿತ ಮತ್ತು ಸಹಪಾಠಿಗಳು ಆತಂಕಕ್ಕೆ ಒಳಗಾದರು.
ತಕ್ಷಣವೇ ಆಂಬ್ಯುಲೆನ್ಸ್ ಕರೆಸಿ ಮೃ*ತದೇಹವನ್ನು ಭರಮಸಾಗರ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು. ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷಿಸಿದ ನಂತರ ಮೃ*ತದೇಹವನ್ನು ಪೋಸ್ಟ್ಮಾರ್ಟಂಗೆ ಕಳುಹಿಸಲಾಗಿದೆ.