ಕೋಲಾರ: ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ಬುಧವಾರ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಮಾತನಾಡಿ ಎಸ್.ಎಂ. ಕೃಷ್ಣ ಅವರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿ ಬೆಂಗಳೂರು ನಗರವನ್ನು ಸಿಲಿಕಾನ್ ಸಿಟಿಯಾಗಿ ಮಾಡಿದ್ದಾರೆ ಇಡೀ ರಾಜ್ಯದ ಸರ್ವತೋಮುಖ ಅಭಿವೃದ್ಧಿ ಬಯಸಿ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ದ ಕೀರ್ತಿ ಅವರಿಗೆ ಸಲ್ಲುತ್ತದೆ ಮಹಿಳಾ ಸಂಘಗಳ ರಚನೆ, ಸಹಕಾರಿ ಸಂಸ್ಥೆಗಳಲ್ಲಿ ಯಶಸ್ವಿನಿ ಯೋಜನೆ ಜಾರಿಗೆ ಕಾರಣವಾಗಿದ್ದಾರೆ ಇವರ ಆತ್ಮಕ್ಕೆ ಶಾಂತಿ ಸಿಗುವುದರ ಜತೆಗೆ ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಎಸ್ಸಿ ಘಟಕದ ಜಿಲ್ಲಾ ಅಧ್ಯಕ್ಷ ಕೆ.ಜಯದೇವ್ ಮಾತನಾಡಿ ಎಸ್.ಎಂ ಕೃಷ್ಣ ಅವರು ಮಾಜಿ ಮುಖ್ಯಮಂತ್ರಿಯಾಗಿ ಕೇಂದ್ರದಲ್ಲಿ ಸಚಿವರಾಗಿ ಮಹಾರಾಷ್ಟ್ರ ರಾಜ್ಯದ ರಾಜ್ಯಪಾಲ ಅಂತಹ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದಾರೆ ಅವರ ನಿಧನವು ರಾಜ್ಯಕ್ಕೆ ಮತ್ತು ಕೇಂದ್ರಕ್ಕೆ ತುಂಬಲಾರದ ನಷ್ಟವಾಗಿದೆ ಅವರು ದೇಶಕ್ಕೆ ಮತ್ತು ರಾಜ್ಯಕ್ಕೆ ನೀಡಿರುವ ಕೊಡುಗೆಯೂ ಜನಮಾನಸದಲ್ಲಿ ಉಳಿಯುವಂತೆ ಮಾಡಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಎಸ್ಸಿ ಘಟಕದ ರಾಜ್ಯ ಕಾರ್ಯದರ್ಶಿ ಬಿ.ಶಂಕರಪ್ಪ, ಬೀದಿಬದಿ ವ್ಯಾಪಾರಸ್ಥರ ಘಟಕದ ಜಿಲ್ಲಾ ಅಧ್ಯಕ್ಷ ಮಂಜುನಾಥ್, ಕಿಸಾನ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ನಾಗರಾಜ್ ಗೌಡ, ಮುಖಂಡರಾದ ಶ್ರೀರಾಮ್ ವೆಂಕಟಪತಿಯಪ್ಪ, ಸೈಯದ್ ಜಾಫರ್, ಪಾರೇಜಾನ್, ತಮ್ಮಣ್ಣ ಮುಂತಾದವರು ಇದ್ದರು.