ಹೊಸಕೋಟೆ : ಹೊಸಕೋಟೆ ಟೌನ್ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ನಾಮ ನಿರ್ದೇಶಕರನ್ನಾಗಿ ಹೊಸಕೋಟೆ ತಾಲ್ಲೂಕಿನ ಕೊಳತೂರು ಗ್ರಾಮದ ಕೆ. ಬಿ. ಜಯಪ್ರಕಾಶ್ ನಾರಾಯಣ್ (ರಾಜು) ಅವರನ್ನು ಆಯ್ಕೆ ಮಾಡಲಾಗಿದೆ.
ಈ ಹಿಂದೆ ಹೊಸಕೋಟೆ ನಗರದಲ್ಲಿ ನಡೆದ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ (ಎಸ್. ಎಫ್. ಸಿ. ಎಸ್) ಚುನಾವಣೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅಭೂತ ಪೂರ್ವ ಜಯಗಳಿಸಿದ ಹಿನ್ನಲೆ ಸಹಕಾರ ಸಂಘಕ್ಕೆ ಒಬ್ಬ ಸರಕಾರದ ನಾಮ ನಿರ್ದೇಶಕರನ್ನು ಆಯ್ಕೆ ಮಾಡುವ ಸಲುವಾಗಿ ಕೊಳತೂರು ಗ್ರಾಮದ ಮುಖಂಡರು ಹಾಗೂ ಹೆಚ್ಚಿನ ಸೇವೆ ಸಲ್ಲಿಸುತ್ತಾ ಬಂದಿರುವ ಕೆ. ಬಿ. ಜಯಪ್ರಕಾಶ್ ನಾರಾಯಣ್ (ರಾಜು) ಅವರನ್ನು ಎಲ್ಲಾ ಮುಖಂಡರು ಹಾಗೂ ನಿರ್ದೇಶಕರು ಒಮ್ಮತದಿಂದ ಬೆಂಬಲ ಸೂಚಿಸಿದ್ದಾರೆ.
ಹಿನ್ನಲೆ ಶಾಸಕ ಶರತ್ ಬಚ್ಚೇಗೌಡರ ನೇತೃತ್ವದಲ್ಲಿ ನಿರ್ದೇಶಕರನ್ನಾಗಿ ಆಯ್ಕೆ ಮಾಡಲಾಗಿದೆ.
ಇದೆ ಸಂದರ್ಭದಲ್ಲಿ ನೂತನ ನಿರ್ದೇಶಕರನ್ನು ಸನ್ಮಾನಿಸಿ ಅಭಿನಂದಿಸಿ ಮಾತನಾಡಿದ ಶಾಸಕ ಶರತ್ ಬಚ್ಚೇಗೌಡ ಅವರು, ಸಂಘದ ಅಭಿವೃದ್ಧಿಗೆ ತಮ್ಮ ಸೇವೆ ನಿರಂತರವಾಗಿರಬೇಕು. ಈ ನಿಟ್ಟಿನಲ್ಲಿ ಎಲ್ಲಾ ಸದಸ್ಯರುಗಳು ಹಾಗೂ ಆಡಳಿತ ಮಂಡಳಿ ಅವರೊಂದಿಗೆ ಒಮ್ಮತದಿಂದ ಸಂಘವನ್ನು ಲಾಭದತ್ತ ಮುನ್ನಡೆಸಬೇಕು. ಸಂಘ ಮತ್ತಷ್ಟು ಅಭಿವೃದ್ಧಿಗೆ ತಾವು ತಮ್ಮ ಶ್ರಮವಹಿಸಿ ಎಂದು ಶುಭ ಹಾರೈಸಿದರು.
ನೂತನ ನಾಮ ನಿರ್ದೇಶಕರಾಗಿ ಆಯ್ಕೆಯಾದ ಕೆ. ಬಿ. ಜಯಪ್ರಕಾಶ್ ನಾರಾಯಣ್ (ರಾಜು) ಮಾತನಾಡಿ, ನನ್ನ ಮೇಲೆ ನಂಬಿಕೆ ಇಟ್ಟು ನಾಮ ನಿರ್ದೇಶಕರನ್ನಾಗಿ ಆಯ್ಕೆ ಮಾಡಿದ್ದಾರೆ. ಈ ಜವಾಬ್ದಾರಿಯನ್ನು ನಾನು ಪ್ರಾಮಾಣಿಕವಾಗಿ ಮುನ್ನಡೆಸಿಕೊಂಡು ಹೋಗುತ್ತೇನೆ. ಸಹಕಾರ ಸಂಘದ ಹಾಗೂ ರೈತರ ಶ್ರೇಯಸ್ಸು ಅಭಿವೃದ್ಧಿಗೆ ನಾನು ಪ್ರಾಮಾಣಿಕವಾಗಿ ಶ್ರಮಿಸಲಿದ್ದು ಎಲ್ಲರ ಸಹಕಾರ ಮುಖ್ಯ ಎಂದು ತಿಳಿಸಿದ್ದಾರೆ.
ಇದೆ ಸಂದರ್ಭದಲ್ಲಿ ಮಾಜಿ ಸಂಸದರು ಹಾಗೂ ತಾಲ್ಲೂಕಿನಾ ಮುಖಂಡರು ಮತ್ತು ಕೊಳತುರು ಗ್ರಾಮಸ್ಥರು ಅಭಿನಂದನೆ ತಿಳಿಸಿದ್ದಾರೆ.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…