ಎಸ್.ಎಸ್.ಎಲ್.ಸಿ. ಪರೀಕ್ಷಾ ಕಾರ್ಯವನ್ನು ಜವಾಬ್ಧಾರಿಯಿಂದ ನಿರ್ವಹಿಸಿ: ಜಿಲ್ಲಾಧಿಕಾರಿ ಆರ್.ಲತಾ

2023ರ ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆಗಳು ನಡೆಯಲಿದ್ದು, ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷಾ ಕಾರ್ಯವು ಸುವ್ಯವಸ್ಥಿತವಾಗಿ, ಪಾರದರ್ಶಕವಾಗಿ ಸುಗಮವಾಗಿ ನಡೆಯಲು ಅಧಿಕಾರಿಗಳು ಜವಾಬ್ಧಾರಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಸಭಾಂಗಣದಲ್ಲಿಂದು ನಡೆದ “2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ 58 ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರ ಸಭೆ”ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸಕ್ತ ವರ್ಷ ಸಾರ್ವತ್ರಿಕ ಚುನಾವಣೆ ಮತ್ತು ಎಸ್.ಎಸ್.ಎಲ್.ಸಿ. ಪರೀಕ್ಷಾ ಕಾರ್ಯಗಳೆರಡೂ ಜೊತೆ ಜೊತೆಯಲ್ಲೇ ಆಯೋಜನೆಗೊಂಡಿದೆ. ಈ ಎರಡೂ ಜವಾಬ್ದಾರಿಗಳು ಅತ್ಯಂತ ಪ್ರಮುಖವಾದವುಗಳೇ ಆಗಿದ್ದು ಧೃತಿಗೆಡದೆ ಎಲ್ಲರೂ ಒಟ್ಟಾಗಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸೋಣ ಎಂದರಲ್ಲದೆ ಪರೀಕ್ಷಾ ಕಾರ್ಯವನ್ನು ಅತ್ಯಂತ ನಿಷ್ಠೆ, ಪ್ರಾಮಾಣಿಕತೆ,
ಪಾರದರ್ಶಕತೆ, ಗೌಪ್ಯತೆ ಮತ್ತು ಸುವ್ಯವಸ್ಥಿತವಾಗಿ ನಡೆಸುವಂತೆ ತಿಳಿಸಿದರು.

ಸಭೆಯಲ್ಲಿ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎನ್.ಶ್ರೀಕಂಠ, ಜಿಲ್ಲಾ ಡಯಟ್‌ನ ಪ್ರಾಂಶುಪಾಲರಾದ ಉಷಾಕುಮಾರಿ, ಶಿಕ್ಷಣಾಧಿಕಾರಿ ಹನುಮಂತಪ್ಪ, ನಾಲ್ಕು ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲೆಯ ವಿಷಯ ಪರಿವೀಕ್ಷಕರು, ತಾಲ್ಲೂಕು ನೋಡಲ್ ಅಧಿಕಾರಿಗಳು ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *