ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಾರಂಭ ದಿನದಂದೇ ಕಿಡಿಗೇಡಿಗಳ ಅವಾಂತರ: ಪರೀಕ್ಷಾ ಕೇಂದ್ರಕ್ಕೆ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾ ನಾಶ: ಸ್ಥಳಕ್ಕೆ ಅಧಿಕಾರಿಗಳು‌ ಭೇಟಿ,‌ ಪರಿಶೀಲನೆ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯ ಸರ್ಕಾರಿ ಪ್ರೌಢ ಶಾಲೆಯನ್ನು ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರವನ್ನಾಗಿ ಗುರುತಿಸಿ ಸಕಲ ಸಿದ್ಧತೆ ನಡೆಸಲಾಗಿತ್ತು. ಇಂದು ನಿಗದಿಯಂತೆ‌ ಎಸ್ ಎಸ್ ಎಲ್ ಸಿ ಪರೀಕ್ಷೆ ಸುಸೂತ್ರವಾಗಿ ನಡೆಸಲು ತಯಾರಿ ಮಾಡಲಾಗಿತ್ತು.

ಪರೀಕ್ಷಾ ಕೇಂದ್ರದ ಪ್ರತಿಯೊಂದು ಕೊಠಡಿಗೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಕಳೆದ ರಾತ್ರಿ ಯಾರೋ ಕಿಡಿಗೇಡಿಗಳು ಪರೀಕ್ಷಾ ಕೇಂದ್ರಕ್ಕೆ ಬಂದು ಗೇಟ್, ಕೊಠಡಿಗಳ ಬಾಗಿಲು‌ ಮುರಿದು, ಕೊಠಡಿಗಳಿಗೆ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಕಿತ್ತು, ಮತ್ತೆ ಜೋಡಿಸು ಪ್ರಯತ್ನ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

10 ಕೊಠಡಿಗಳಲ್ಲಿ 14 ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಅದರಲ್ಲಿ 6 ಕ್ಯಾಮೆರಾಗಳನ್ನು ಕಿತ್ತೆಸೆದಿದ್ದಾರೆ. ವಿಚಾರ ತಿಳಿದ ಪೊಲೀಸರು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಪರೀಕ್ಷಾ ಕೇಂದ್ರಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ, ನಾಶಪಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಮತ್ತೆ ಜೋಡಿಸಿ, ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೇ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲಾಗಿದೆ.

Ramesh Babu

Journalist

Recent Posts

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

3 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

3 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

8 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

19 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

20 hours ago

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕ- ಮೇಲ್ಸೇತುವೆ ಅಗತ್ಯ- ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…

20 hours ago