ಜಿಲ್ಲೆಯಲ್ಲಿ ಮೊದಲ ದಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯು ಸುಸೂತ್ರವಾಗಿ ನಡೆದಿದೆ ಎಂದು ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎನ್.ಶ್ರೀಕಂಠ ಅವರು ತಿಳಿಸಿದ್ದಾರೆ.
ಪ್ರಥಮ ಭಾಷೆಯಾಗಿ ಕನ್ನಡ, ಉರ್ದು, ತೆಲುಗು, ಇಂಗ್ಲೀಷ್ ವಿಷಯಗಳ ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದ ಜಿಲ್ಲೆಯ 13617 ವಿದ್ಯಾರ್ಥಿಗಳ ಪೈಕಿ 59 ವಿದ್ಯಾರ್ಥಿಗಳು ಗೈರಾಗಿದ್ದು, 13558 ವಿದ್ಯಾರ್ಥಿಗಳು ಹಾಜರಾಗಿದ್ದಾರೆ.
ಜಿಲ್ಲೆಯಲ್ಲಿ 2022-23ನೇ ಸಾಲಿನ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆಗೆ 14,040 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, ಈ ಪೈಕಿ 295 ವಿದ್ಯಾರ್ಥಿಗಳು ಖಾಸಗಿ ಅಭ್ಯರ್ಥಿಗಳಾಗಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ 58 ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಈ ಪೈಕಿ ದೇವನಹಳ್ಳಿಯಲ್ಲಿ ಮಾತ್ರ ಒಂದು ಪರೀಕ್ಷಾ ಕೇಂದ್ರವನ್ನು ಖಾಸಗಿ ಅಭ್ಯರ್ಥಿಗಳಿಗಾಗಿ ತೆರೆಯಲಾಗಿದೆ.
ದೂರದ ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಅಡ್ಮಿಷನ್ ಟಿಕೆಟ್ ತೋರಿಸಿ ಉಚಿತ ಪ್ರಯಾಣ ಮಾಡಲು ಅವಕಾಶ ನೀಡಲಾಗಿದೆ.