ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ ಯಾರೆಲ್ಲಾ ಮತದಾನಕ್ಕೆ ಅರ್ಹರು ಎಂಬುದನ್ನು ಎಸ್‌ಐಆರ್‌ ನಿರ್ಧರಿಸಲಿದೆ. ಈಗಾಗಲೇ ಶೇ.90 ರಷ್ಟು ಮತದಾರರ ಮ್ಯಾಪಿಂಗ್‌ ಕಾರ್ಯ ಪೂರ್ಣಗೊಂಡಿದೆ. 276 ಮಂದಿ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಪರಿಷ್ಕರಣೆ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಬಿಎಲ್‌ಒಗಳು ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆ (ಎನುಮೆರೇಷನ್‌ ಫಾರ್ಮ್‌) ವಿತರಣೆ ಹಾಗೂ ಸಂಗ್ರಹಣೆ ಮಾಡಲಿದ್ದಾರೆ ಎಂದು ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ, ಚುನಾವಣಾಧಿಕಾರಿಯಾದ ಟಿ.ಆರ್ ಮಂಜುನಾಥ ತಿಳಿಸಿದರು.

ಎಸ್‌ಐಆರ್‌ ಕುರಿತು ಬುಧವಾರ ನಗರದ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಎಸ್ಐಆರ್ ಬಗ್ಗೆ ಜನರಲ್ಲಿ ಯಾವುದೇ ಗೊಂದಲ ಭಯಪಡುವ ಅವಶ್ಯಕತೆ ಇಲ್ಲ. ಮೃತರ ಹೆಸರು ತೆಗೆಯುವುದು ಸೇರಿದಂತೆ ಯಾರೊಬ್ಬರು ಮತದಾನದ ಹಕ್ಕನ್ನು ಕಳೆದುಕೊಳ್ಳದಂತೆ ನೋಡಿಕೊಳ್ಳಲಾಗುವುದು. ಸಿಬ್ಬಂದಿಗೆ ಜೂನ್‌ 20 ರಿಂದ 29 ರವರೆಗೆ ಎಸ್ ಐ ಆರ್ ಗೆ ಸಿದ್ಧತೆ, ಬಿ ಎಲ್ ಒ ಗಳ ತರಬೇತಿ ಹಾಗೂ ಮುದ್ರಣ ಕಾರ್ಯ, ಜೂನ್‌ 30 ರಿಂದ ಜುಲೈ 29 ರವರೆಗೆ ಬಿಎಲ್‌ಒಗಳಿಂದ ಮನೆ ಮನೆ ಭೇಟಿ, ಜುಲೈ 29 ರೊಳಗೆ ಮತಗಟ್ಟೆಗಳ ತಾರ್ಕಿಕ ಮರು ಹೊಂದಾಣಿಕೆ ಕಾರ್ಯ ನಡೆಯಲಿದೆ‌ ಎಂದು ತಿಳಿಸಿದರು.

ಎಸ್‌ಐಆರ್‌ ಪ್ರಕ್ರಿಯೆ, ನಮೂನೆಗಳು ಹಾಗೂ ವೇಳಾಪಟ್ಟಿಗೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾಧಿಕಾರಿಗಳ ಅಧಿಕೃತ ಜಾಲತಾಣಗಳು, ಮುಖ್ಯ ಚುನಾವಣಾಧಿಕಾರಿ ಹಾಗೂ ಕೇಂದ್ರ ಚುನಾವಣಾ ಆಯೋಗದ ಅಧಿಕೃತ ಜಾಲತಾಣಗಳಲ್ಲಿ ಹೆಚ್ಚಿನ ಮಾಹಿತಿ ಪ್ರಕಟಿಸಲಾಗುವುದು. ಮತದಾರರ ಅನುಕೂಲಕ್ಕಾಗಿ ಗ್ರಾಮ ಪಂಚಾಯಿತಿ ಹಾಗೂ ನಗರ ವಾರ್ಡ್‌ ಮಟ್ಟದಲ್ಲಿ ಮತದಾರರ ಸಹಾಯ ಕೇಂದ್ರ ಸ್ಥಾಪಿಸಲಾಗುತ್ತದೆ. ಅರ್ಹ ಮತದಾರರು ಕೈ ಬಿಟ್ಟು ಹೋಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು‌ ಎಂದು ವಿವರಿಸಿದರು.

ಎನುಮೆರೇಷನ್‌ ಫಾರ್ಮ್‌

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಗಣತಿ ನಮೂನೆಗಳನ್ನು (ಎನುಮೆರೇಷನ್‌ ಫಾರ್ಮ್‌) ಪ್ರತಿ ಮತದಾರರಿಗೂ ದ್ವಿಪತ್ರಿಯಲ್ಲಿ ಬಿಎಲ್‌ಒಗಳು ಮನೆ ಮನೆಗೆ ತಲುಪಿಸುತ್ತಾರೆ. ಬಿಎಲ್‌ಒ ಹಸ್ತಾಕ್ಷರ ಇರುವ ಒಂದು ಪ್ರತಿಯನ್ನು ಮತದಾರರು ತಮ್ಮ ಬಳಿ ಇಟ್ಟುಕೊಂಡು, ಮತ್ತೊಂದು ಪ್ರತಿಯಲ್ಲಿ ಅಗತ್ಯ ಮಾಹಿತಿ ಭರ್ತಿ ಮಾಡಿ ಬಿಎಲ್‌ಒಗಳಿಗೆ ಹಿಂದಿರುಗಿಸಬೇಕು. ಮತದಾರರ ಪಟ್ಟಿಯಲ್ಲಿರುವಂತೆ ಭಾವಚಿತ್ರ, ಹೆಸರು, ಮತಗಟ್ಟೆ ಸಂಖ್ಯೆ, ವಿಧಾನಸಭಾ ಕ್ಷೇತ್ರದ ಹೆಸರು ಈ ಅರ್ಜಿಯಲ್ಲಿ ಮುದ್ರಣವಾಗಿರುತ್ತದೆ. ಪ್ರತಿ ಮತದಾರರಿಗೂ ನೀಡುವ ಅರ್ಜಿಯಲ್ಲಿ ಕ್ಯೂಆರ್‌ ಕೋಡ್‌ ವಿಭಿನ್ನವಾಗಿರುತ್ತದೆ. ಬಿಎಲ್‌ಒ ಆ್ಯಪ್‌ ಮೂಲಕ ಕ್ಯೂಆರ್‌ ಕೋಡ್‌ ಸ್ಕ್ಯಾ‌ನ್‌ ಮಾಡಿದರೆ ಮತದಾರರ ಮಾಹಿತಿ ಲಭ್ಯವಾಗುತ್ತದೆ. ಒಂದು ವೇಳೆ ಮತದಾರರ ಭಾವಚಿತ್ರ ಹಳೆಯದಾಗಿದ್ದರೆ ಎನುಮೆರೇಷನ್‌ ಅರ್ಜಿಯೊಂದಿಗೆ ಹೊಸ ಭಾವಚಿತ್ರ ನೀಡಬಹುದು. ಇಲ್ಲದಿದ್ದರೆ ಬಿಎಲ್‌ಒಗಳೇ ಆ್ಯಪ್‌ ಮೂಲಕ ಭಾವಚಿತ್ರ ಪಡೆದುಕೊಳ್ಳುತ್ತಾರೆ. 2002ರ ಮತದಾರರ ಪಟ್ಟಿಯಲ್ಲಿತಮ್ಮ ಹೆಸರು ಇದ್ದರೆ ಅದರ ವಿವರವನ್ನು ನೀಡಬೇಕು. ಇಲ್ಲದಿದ್ದರೆ ತಮ್ಮ ಸಂಬಂಧಿಯ (ತಂದೆ, ತಾತ ಇತ್ಯಾದಿ) ಮಾಹಿತಿ ಒದಗಿಸಬೇಕು ಎಂದರು.

ಅರ್ಜಿಯಲ್ಲಿ ಮತದಾರರು ಸಹಿ ಅಥವಾ ಎಡಗೈ ಹೆಬ್ಬೆರಳಿನ ಗುರುತು ಹಾಕಬಹುದು. ಒಂದು ವೇಳೆ ಮತದಾರರು ಆ ಸಂದರ್ಭದಲ್ಲಿ ಲಭ್ಯವಿಲ್ಲದಿದ್ದರೆ ಕುಟುಂಬದಲ್ಲಿನ ವಯಸ್ಕ ಸದಸ್ಯರು ಸಹಿ ಮಾಡಿ ಬಿಎಲ್‌ಒಗಳಿಗೆ ಅರ್ಜಿ ಹಸ್ತಾಂತರಿಸಬಹುದು. ಅಂತಿಮ ಮತದಾರರ ಪಟ್ಟಿ ಪ್ರಕಟಣೆ ಅಕ್ಟೋಬರ್ 7 ರಂದು ಪ್ರಕಟ ಮಾಡಲಾಗುವುದು ಎಂದು ತಿಳಿಸಿದರು.

ಒಟ್ಟು ಮತದಾರರ ವಿವರಗಳು (2/6/2026ರಂತೆ ಮತದಾರರ ಪಟ್ಟಿಯ ವಿವರ)

ಒಟ್ಟು ಮತಗಟ್ಟೆ – 276
ಗಂಡು – 109627
ಹೆಣ್ಣು – 113828
ಇತರೆ – 2
ಒಟ್ಟು – 2,23,457

ಒಟ್ಟು ಮತಗಟ್ಟೆಗಳು & ಬಿ.ಎಲ್.ಒ ವಿವರಗಳು

ಹೋಬಳಿ ಮತಗಟ್ಟೆಗಳು ಬಿಎಲ್ಒಗಳು
ಸಾಸಲು – 34        ‌‌‌‌‌‌          34
ದೊಡ್ಡಬೆಳವಂಗಲ-46     46
ಕಸಬಾ -77.                    77
ಮಧುರೆ -37                   39
ನಗರಸಭೆ -79                 79

ಒಟ್ಟು 276 ಮತಗಟ್ಟೆಗಳು 276 ಬಿ.ಎಲ್.ಒ.ಗಳು

ಈ ವೇಳೆ ಸಹಾಯಕ ಚುನಾವಣಾಧಿಕಾರಿ, ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳ, ಜಿಲ್ಲಾ ಬಿಎಲ್ಓಗಳ ತರಬೇತಿದಾರ ಶ್ರೀನಿವಾಸ, ಚುನಾವಣಾ ಶಿರಸ್ತೇದಾರ ಶಿವಮೂರ್ತಿ, ರವಿಕುಮಾರ್ ಮತ್ತಿತ್ತರರು ಇದ್ದರು.

Ramesh Babu

Journalist

Recent Posts

ಡ್ರಗ್ಸ್ ಮುಕ್ತ ಭಾರತ, ವ್ಯಸನ ಮುಕ್ತ ಕರ್ನಾಟಕ……..

ಡ್ರಗ್ಸ್ ಮುಕ್ತ ಭಾರತ, ವ್ಯಸನ ಮುಕ್ತ ಕರ್ನಾಟಕ........ ಹೀಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಘೋಷಿಸಿವೆ. ಇನ್ನು ಕೆಲವೇ ವರ್ಷಗಳಲ್ಲಿ…

2 hours ago

ಘಾಟಿ ಕ್ಷೇತ್ರದಲ್ಲಿ ಮಕ್ಕಳ ಸಂಕಷ್ಟದ ಬದುಕಿಗೆ ಮುಕ್ತಿ: ಪಾಲಕರಿದ್ದರೂ ಅನಾಥರಂತಿದ್ದ ಮೂವರು ಮಕ್ಕಳ ರಕ್ಷಣೆ

ದೇಗುಲದ ಪ್ರಸಾದದಿಂದ ಹೊಟ್ಟೆ ತುಂಬಿಸಿಕೊಳ್ಳುವುದು, ದೇವಸ್ಥಾನದ ಬೀದಿಯಲ್ಲಿ ಭಿಕ್ಷಾಟನೆ ಮಾಡುವುದು, ರಾತ್ರಿ ವೇಳೆ ಬಂಡೆಗಳ ಪೊಟರೆ ಹಾಗೂ ಪೊದೆಗಳ ನಡುವೆ…

18 hours ago

ಸಿನಿಮಾ…. ಸೋಲು, ಗೆಲುವಿನ ಸುತ್ತಾ…..

ಟಾಕ್ಸಿಕ್ ಎಂಬ ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ವಿಫಲವಾದ ಕೆಲವೇ ದಿನಗಳ ನಂತರ ಪ್ರೇಮದ ಊರಲಿ ಎಂಬ ಸಿನಿಮಾ ಸ್ವಲ್ಪ ಮಟ್ಟಿಗೆ…

1 day ago

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

2 days ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

2 days ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

2 days ago