ಎಸ್.ಟಿ ಸಮುದಾಯದ ಅಭಿವೃದ್ಧಿಗಾಗಿ ಸರ್ಕಾರದ‌ ಬಳಿ 24 ಬೇಡಿಕೆ ಇಡಲಾಗಿದೆ; ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ

ಸಂವಿಧಾನಬದ್ಧ ಬೇಡಿಕೆಗಳಲ್ಲಿ ಒಂದು ಬೇಡಿಕೆಯನ್ನು ಸರ್ಕಾರ ಈಗ ಈಡೇರಿಸಿದೆ, ಇನ್ನೂ 24 ಬೇಡಿಕೆಗಳನ್ನು ಈಡೇರಿಸಬೇಕಿದೆ ಈ ನಿಟ್ಟಿನಲ್ಲಿ ನಮ್ಮ ಸಮಾಜದ ಜನರು ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಸಂಘಟಿತರಾಗಿ ಸರ್ಕಾರಕ್ಕೆ ಮನವರಿಕೆ ಮಾಡಬೇಕಿದೆ ಎಂದು ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು. ಫೆಬ್ರವರಿ 8 ಮತ್ತು 9 ರಂದು ದಾವಣಗೆರೆ ಜಿಲ್ಲೆ, ಹರಿಹರ ತಾಲ್ಲೂಕಿನಲ್ಲಿ 5ನೇ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರಾಮಹೋತ್ಸ ನಡೆಯಲಿದೆ.

ಈ ಜಾತ್ರೆಯಲ್ಲಿ, ತಮ್ಮ ಬದುಕಿನಲ್ಲಿ ಪರಿವರ್ತನೆಯಾಗುವುದರ ಮೂಲಕ ಸಮಾಜಕ್ಕೆ ರಾಮಾಯಣ ಮಹಾಕಾವ್ಯವನ್ನು ನೀಡಿದ ದಾರ್ಶನಿಕರು ಬೇಡ ವಾಲ್ಮೀಕಿ ನಾಯಕರು, ಈ ಹಿನ್ನೆಲೆಯಲ್ಲಿ ಮಹರ್ಷಿ ವಾಲ್ಮೀಕಿ ಜಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.

ಕಳೆದ ನಾಲ್ಕು ವರ್ಷಗಳಿಂದ ವಾಲ್ಮೀಕಿ ಜಾತ್ರಾ ಮಹೋತ್ಸವವನ್ನು ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ, ನಾಲ್ಕನೇ ವರ್ಷ ಕೋವಿಡ್ ಮತ್ತು ಫ್ರೀಡಂಪಾರ್ಕ್ ನಲ್ಲಿ ಹೋರಾಟಕ್ಕೆ ಕುಳಿತಿದ್ದ ಕಾರಣದಿಂದ ಸರಳವಾಗಿ ಆಚರಿಸಲಾಯಿತು ಈ ಬಾರಿ ಅದ್ಧೂರಿ ಜಾತ್ರೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಪ್ರತಿ ವರ್ಷದ ಜಾತ್ರಾ ಮಹೋತ್ಸವಕ್ಕೆ ಲಕ್ಷಾಂತರ ಮಂದಿ ಸೇರುತ್ತಾರೆ ಈ ಜಾತ್ರೆಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ಜನತೆ ತನ್ನದೇ ಆದ ಉದಾರವಾದ ಕೊಡುಗೆ ನೀಡುತ್ತಾ ಬಂದಿದ್ದಾರೆ ಎಂದು ಈ ವೇಳೆ ಸ್ಮರಿಸಿದರು.

ಎಸ್ ಟಿ ಸಮುದಾಯಕ್ಕೆ ಕುರುಬ ಸಮುದಾಯವನ್ನು ಸೇರ್ಪಡೆ ಮಾಡಲು ಹೊರಟಿರುವ ಸರ್ಕಾರದ ನಿಲುವಿನ ಬಗ್ಗೆ ಮಾತನಾಡಿದ ಅವರು ದೇಶದಲ್ಲಿ ತಮ್ಮ ಸಮುದಾಯಕ್ಕೆ ಸಾಮುದಾಯಿಕ ಹಕ್ಕನ್ನು ಕೇಳುವಂತದ್ದು ಅವರ ಹಕ್ಕು, ಯಾವ ಜನಾಂಗವನ್ನು ಎಸ್.ಟಿ ಗೆ ಮತ್ತು ಎಸ್ಸಿಗೆ ಸೇರಿಸಬೇಕು ಎನ್ನುವುದರ ಬಗ್ಗೆ ಕೇಂದ್ರ ಸರ್ಕಾರಕ್ಕೆ ತನ್ನದೇ ಆದ ಮಾನದಂಡಗಳಿವೆ, ಈ ನಿಟ್ಟಿನಲ್ಲಿ ಕುರುಬ ಸಮುದಾಯ ಆ ಮಾನದಂಡಕ್ಕೆ ಅರ್ಹರಾಗಿದ್ದಲ್ಲಿ ಎಸ್ ಟಿ ಸಮುದಾಯಕ್ಕೆ ಸೇರ್ಪಡೆ ಮಾಡಿದರೆ ಅಭ್ಯಂತರವಿಲ್ಲ ಎಂದರು.

ಈ ವೇಳೆ ವಾಲ್ಮೀಕಿ ನಾಯಕರ ಯುವಪಡೆ ಸಂಘದ ರಾಜ್ಯಾಧ್ಯಕ್ಷ ಸುಬ್ರಮಣಿ, ಹಾಗೂ ಪದಾಧಿಕಾರಿಗಳು, ತಾಲ್ಲೂಕು ಬಿಜೆಪಿ ಟಿಕೇಟ್ ಆಕಾಂಕ್ಷಿ ಸಾರಥಿ ಸತ್ಯಪ್ರಕಾಶ್, ವಾಲ್ಮೀಕಿ ಜಾತ್ರಾ ಸಮಿತಿ ಅಧ್ಯಕ್ಷ ತ್ಯಾಗರಾಜ್, ಸುಧೀರ್, ಮಂಜು, ಮೋಹನ ಕಾಂತರಾಜು ಮತ್ತಿತರರು ಇದ್ದರು.

Leave a Reply

Your email address will not be published. Required fields are marked *