ಬೆಂಗಳೂರು: ಕರ್ನಾಟಕದಾದ್ಯಂತ ಲೋಕಾಯುಕ್ತ ಅಧಿಕಾರಿಗಳು ಏಳು ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ. ಅದೇರೀತಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಭೋಧನ ಹೊಸಹಳ್ಳಿ ಗ್ರಾಮದ ಎಸ್ ಡಿಎ ಅಧಿಕಾರಿ ಅನಂತ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ ಮಾಡಲಾಗಿದೆ.
ಲೋಕಾಯುಕ್ತ ಎಸ್ಪಿ ನೇತೃತ್ವದ 8 ಜನರ ತಂಡದಿಂದ ಎಸ್.ಡಿಎ ಅಧಿಕಾರಿ ಅನಂತ್ ಮನೆ ಮೇಲೆ ದಾಳಿ ನಡೆಸಲಾಗಿದ್ದು, ಎಸ್ ಡಿಎ ಅಧಿಕಾರಿ ಅನಂತ್ ಮನೆಯಲ್ಲಿ ಲಕ್ಷ ಲಕ್ಷ ಹಣ ಪತ್ತೆಯಾಗಿದೆ. ಈಗಾಗಲೇ ಅನಂತ್ ಮನೆಯಲ್ಲೆ ಮೂರು ಲಕ್ಷ ನಗದು ಪತ್ತೆಯಾಗಿದ್ದು, ಜೊತೆಗೆ 11 ಚಿನ್ನದ ಉಂಗುರ, ಎರಡು ಬ್ರಾಸ್ ಲೈಟ್, ಎರಡು ಕೆಜಿಗೂ ಅಧಿಕ ಬೆಳ್ಳಿ ವಸ್ತುಗಳು ಪತ್ತೆಯಾಗಿದೆ.
ಹೊಸಕೋಟೆ ತಾಲೂಕು ಕಚೇರಿಯ ಭೂ ಮಂಜೂರಾತಿ ಸೆಕ್ಷನ್ ನಲ್ಲಿ ಅನಂತ್ ಎಸ್ ಡಿಎ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿಹೊಂದಿರೋ ಆರೋಪದ ಹಿನ್ನೆಲೆ ಅನಂತ್ ಮನೆ ಮೇಲೆ ರೈಡ್ ಮಾಡಲಾಗಿದೆ.
ಸದ್ಯ ಅಧಿಕಾರಿ ಮನೆಯಲ್ಲಿ ದಾಖಲೆಗಳ ಪರಿಶೀಲನೆ ಮುಂದುವರಿದಿದೆ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…
ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…
2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ…