ನವದೆಹಲಿ : ತವರಿನಲ್ಲಿ ನಡೆಯುವ ಮುಂಬರುವ ಏಕದಿನ ಕ್ರಿಕೆಟ್ ವಿಶ್ವಕಪ್ ಗೆ ಈಗಾಗಲೇ ತಯಾರಿ ಆರಂಭಿಸಿರುವ ಟೀಂ ಇಂಡಿಯಾ ಬಾಂಗ್ಲಾದೇಶದ ವಿರುದ್ಧ ನಡೆಯಲಿರುವ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲು ರೋಹಿತ್ ಶರ್ಮಾ ನಾಯಕತ್ವದ ತಂಡ ಢಾಕಾಗೆ ಪಯಣ ಬೆಳೆಸಿದೆ.
ಡಿಸೆಂಬರ್ 4 ರಿಂದ ಆರಂಭವಾಗಲಿರುವ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಭಾಗವಹಿಸಲು ಬಿಸಿಸಿಐ ಈಗಾಗಲೇ ಹದಿನೈದು ಸದಸ್ಯರ ಪಟ್ಟಿಯನ್ನು ಪ್ರಕಟಿಸಿದ್ದು ನ್ಯೂಜಿಲೆಂಡ್ ವಿರುದ್ದ ವಿಶ್ರಾಂತಿ ಪಡೆದಿದ್ದ ನಾಯಕ ರೋಹಿತ್ ಶರ್ಮಾ ಸೇರಿದಂತೆ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ಉಪ ನಾಯಕ ಕೆ. ಎಲ್. ರಾಹುಲ್ ಬಾಂಗ್ಲಾ ವಿರುದ್ಧದ ಸರಣಿಯಲ್ಲಿ ಭಾಗವಹಿಸಲು ತಂಡಕ್ಕೆ ವಾಪಸ್ ಆಗಿದ್ದಾರೆ.
ತಂಡದಲ್ಲಿ ಆರಂಭಿಕ ಆಟಗಾರ ಶಿಖರ್ ಧವನ್, ಶ್ರೇಯಸ್ ಅಯ್ಯರ್, ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್, ರಜತ್ ಪಾಟೀದರ್, ಆಲ್ ರೌಂಡರ್ ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಸಿರಾಜ್, ಕುಲದೀಪ್ ಸೇನ್, ಶಾದುಲ್ ಟಾಕೂರ್, ದೀಪಕ್ ಚಹರ್, ಇಶಾನ್ ಕಿಶನ್, ವಾಶಿಂಗ್ಟನ್ ಸುಂದರ್, ಶಾಬಾಜ್ ಅಹಮದ್, ರಾಹುಲ್ ತ್ರಿಪಾಠಿ ತಂಡದಲ್ಲಿದ್ದಾರೆ.
ತವರಿನಲ್ಲಿ ಸದಾ ಅಚ್ಚರಿ ಫಲಿತಾಂಶ ನೀಡುವ ಬಾಂಗ್ಲಾದೇಶವನ್ನು ಹಗುರವಾಗಿ ಪರಿಗಣಿಸುವಂತಿಲ್ಲ, ಏಕದಿನ ಆಲ್ ರೌಂಡರ್ ನಂ 1 ಸ್ಥಾನದ ಆಟಗಾರ, ಸ್ಟಾರ್ ಆಲ್ ರೌಂಡರ್ ಶಕೀಬ್ ಆಲ್ ಹಸನ್ ತಂಡಕ್ಕೆ ವಾಪಸ್ ಮರಳಿದ್ದು ಬ್ಯಾಟ್ಸ್‌ಮನ್ಗಳಾದ ಲಿಟ್ಟಲ್ ದಾಸ್ ಹಾಗೂ ಮುಸ್ತಿಪರ್ ರಹೀಮ್, ಬೌಲರ್‌ಗಳಾದ ಮುಸ್ತಫಿಯರ್ ರೆಹಮಾನ್ ಹಾಗೂ ಟಸ್ಕಿನ್ ಅಹಮದ್ ಉತ್ತಮ ಫಾರ್ಮ್ ನಲ್ಲಿದ್ದು ಭಾರತಕ್ಕೆ ಸವಾಲಾಗಬಹುದು.
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…