ದೊಡ್ಡಬಳ್ಳಾಪುರ: ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಅಗತ್ಯವಾಗಿದ್ದು, ಮುಖಂಡರು ಹಾಗೂ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದರೆ ಮುಂಬರುವ ಎಲ್ಲ ಚುನಾವಣೆಗಳಲ್ಲೂ ಪಕ್ಷದ ಗೆಲುವು ಸಾಧ್ಯ ಎಂದು ಕೆಪಿಸಿಸಿ ಸದಸ್ಯ ಎಸ್.ಆರ್. ಮುನಿರಾಜ್ ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪ್ರಸನ್ನ ಕುಮಾರ್ ಅವರಿಗೆ ತೂಬಗೆರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ತಾಲೂಕಿನ ಘಾಟಿ ಸುಬ್ರಹ್ಮಣ್ಯ ದೇವಾಲಯದ ಬಳಿ ಇರುವ ಖಾಸಗಿ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ನಮ್ಮಲ್ಲಿ ಒಗ್ಗಟ್ಟು ಇಲ್ಲದಿರುವುದು ಪಕ್ಷಕ್ಕೆ ಹಿನ್ನಡೆಯಾಗುತ್ತಿದೆ. ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಎಲ್ಲ ಚುನಾವಣೆಗಳಲ್ಲೂ ಗೆಲುವು ನಮ್ಮದಾಗಲಿದೆ. ಇತ್ತೀಚೆಗೆ ನಡೆದ ವಿಎಸ್‌ಎಸ್‌ಎನ್ ಚುನಾವಣೆಯಲ್ಲೂ ಗೆಲುವು ಸಾಧಿಸಲು ಸಾಧ್ಯವಾಗಿಲ್ಲ. ಮುಂಬರುವ ಚುನಾವಣೆಗಳನ್ನು ಒಗ್ಗಟ್ಟಿನಿಂದ ಎದುರಿಸಿ ಗೆಲ್ಲಬೇಕು ಎಂದು ಹೇಳಿದರು.
ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ರಂಗಪ್ಪ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಪ್ರಸನ್ನ ಕುಮಾರ್ ಆಯ್ಕೆಯಾಗಿರುವುದು ಸಂತಸದ ವಿಷಯ. ಜಿಲ್ಲೆಯ ನಾಲ್ಕು ತಾಲೂಕುಗಳ ಪಕ್ಷದ ಸಂಘಟನೆಯ ಜವಾಬ್ದಾರಿ ವಹಿಸಿಕೊಂಡಿರುವ ಅವರು ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು ಪಕ್ಷ ಸಂಘಟನೆ ಮಾಡಲಿದ್ದಾರೆ. ಅವರ ಕಾರ್ಯಕ್ಕೆ ಎಲ್ಲರ ಸಹಕಾರ ಇರಲಿದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷ ಪ್ರಸನ್ನ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಸಾಕಷ್ಟು ಕೆಲಸಗಳಿದ್ದು, ಯಾವುದೇ ವಿಚಾರದಲ್ಲಿ ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳದೆ ಎಲ್ಲರ ಅಭಿಪ್ರಾಯ ಪಡೆದು ಮುಂದಿನ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದರು.
ಮುಖಂಡರು ಹಾಗೂ ಕಾರ್ಯಕರ್ತರು ಒಟ್ಟಾಗಿ ಸೇರಿ ಕೆಲಸ ಮಾಡಬೇಕು. ಸಚಿವರು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದಾರೆ. ಸ್ಥಳೀಯವಾಗಿ ಯಾವುದೇ ಸಮಸ್ಯೆಗಳಿದ್ದರೂ ಚರ್ಚೆಯ ಮೂಲಕ ಪರಿಹರಿಸಿಕೊಳ್ಳೋಣ. ಸಮಸ್ಯೆಗಳಿದ್ದರೆ ನನ್ನ ಗಮನಕ್ಕೆ ತನ್ನಿ. ಎಲ್ಲರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ತೂಬಗೆರೆ ಭಾಗದಲ್ಲಿ ಸ್ಥಳೀಯ ಮುಖಂಡರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಉತ್ತಮ ಫಲಿತಾಂಶ ಪಡೆಯಬಹುದು. ಬಿಜೆಪಿ ಮತ್ತು ಜೆಡಿಎಸ್‌ನಲ್ಲಿ ನಾಯಕತ್ವದ ಕೊರತೆಯಿದೆ. ಅದರ ಬಗ್ಗೆ ಚಿಂತೆ ಮಾಡುವ ಅಗತ್ಯವಿಲ್ಲ. ಕಾಂಗ್ರೆಸ್‌ನ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದರು.
ನವೆಂಬರ್–ಡಿಸೆಂಬರ್‌ನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈಗಿನಿಂದಲೇ ಪಕ್ಷ ಸಂಘಟನೆ ಹಾಗೂ ಚುನಾವಣಾ ಸಿದ್ಧತೆ ಆರಂಭಿಸಬೇಕು. ಕಾರ್ಯಕರ್ತರಿಗೆ ಸಲ್ಲಬೇಕಾದ ಗೌರವ ಮತ್ತು ಪ್ರಾಮುಖ್ಯತೆ ನೀಡುವ ಮೂಲಕ ಪಕ್ಷವನ್ನು ಬಲಪಡಿಸಲಾಗುವುದು ಎಂದು ಪ್ರಸನ್ನ ಕುಮಾರ್ ಹೇಳಿದರು.
ಕಾರ್ಯಕ್ರಮದಲ್ಲಿ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ, ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಆರ್.ವಿ. ಮಹೇಶ್, ಕಾಂಗ್ರೆಸ್ ಮುಖಂಡ ಅರವಿಂದ್, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಸದಸ್ಯ ಎಸ್ ಡಿ ಮುನಿರಾಜ್, ಕೃಷಿಕ ಸಮಾಜದ ಅಧ್ಯಕ್ಷ ಮುರುಳಿಧರ್ ಎಸ್‌ಟಿ ಘಟಕದ ಅಧ್ಯಕ್ಷ ಮುನಿಕೃಷ್ಣಪ್ಪ, ಭೂ ಮಂಜೂರಾತಿ ಸಮಿತಿ ಸದಸ್ಯ ಗಂಗಸಂದ್ರ ಶ್ರೀಧರ್, ತೂಬಗೆರೆ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್ ಎನ್ ನರಸಿಂಹಮೂರ್ತಿ, ಆರ್.ವಿ. ಶಿವಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…