ದೇವನಹಳ್ಳಿ ತಾಲ್ಲೂಕಿನ ನಿವೇಶನ ರಹಿತ ಅರ್ಹ ಫಲಾನುಭವಿಗಳನ್ನು ಈಗಾಗಲೇ ಗುರ್ತಿಸಿಲಾಗಿದ್ದು, ಏಪ್ರಿಲ್ ಮಾಹೆಯಲ್ಲಿ 2500 ನಿವೇಶನ ಹಂಚಿಕೆ ಮಾಡುವ ಗುರಿ ಇದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಅವರು ಹೇಳಿದರು.
ಕನ್ನಮಂಗಲ ಗ್ರಾಮ ಪಂಚಾಯತಿ ಆವರಣದಲ್ಲಿ ನಡೆದ 2024-25ನೇ ಸಾಲಿನ ಗ್ರಾಮಸಭೆಯಲ್ಲಿ ಮಾತನಾಡಿದ ಸಚಿವರು ಮಾರ್ಚ್ ಅಂತ್ಯದಲ್ಲಿ ನಿವೇಶನ ನೀಡುವ ಗುರಿ ಹೊಂದಲಾಗಿತ್ತು ಕಾರಣಾಂತರಗಳಿಂದ ಮುಂದಿಡಲಾಗಿದ್ದು ಏಪ್ರಿಲ್ ಮಾಹೆಯಲ್ಲಿ ದೊಡ್ಡಮಟ್ಟದಲ್ಲಿ ಕಾರ್ಯಕ್ರಮ ಏರ್ಪಡಿಸಿ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಲಾಗುವುದು ಎಂದರು.
ಪ್ರತಿ ಗ್ರಾಮಪಂಚಾಯತಿಯಲ್ಲಿ ಹೊಸ ಮಾದರಿ ಶಾಲೆಗಳ ನಿರ್ಮಾಣದ ಗುರಿಯನ್ನು ಹೊಂದಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಲಭ್ಯವಾದಲ್ಲಿ ಭವಿಷ್ಯದಲ್ಲಿ ಮಕ್ಕಳು ಉನ್ನತ ಹುದ್ದೆಗಳನ್ನು ಪಡೆಯಲು ಸಹಕಾರಿಯಾಗುತ್ತೆ ಎಂದು ಹೇಳಿದರು.
ಮಕ್ಕಳ ಪೋಷಣೆ, ಪಾಲನೆಯಲ್ಲಿ ತಾಯಂದಿರ ಪಾತ್ರ ಬಹಳ ಮುಖ್ಯ. ಗರ್ಭಿಣಿ, ಬಾಣಂತಿಯರಿಗೆ ಪೌಷ್ಟಿಕ ಅಹಾರವನ್ನು ಅಂಗನವಾಡಿ ಮುಖಾಂತರ ಕ್ರಮಬದ್ದವಾಗಿ ವಿತರಿಸಬೇಕು. ಇಲ್ಲವಾದಲ್ಲಿ ಅಪೌಷ್ಟಿಕ ಮಕ್ಕಳ ಜನನವಾಗಿ ಸಮಾಜಕ್ಕೆ, ಕುಟಂಬಕ್ಕೂ ಹೊರೆಯಾಗಲಿದ್ದಾರೆ. ಹಾಗಾಗಿ ಪೌಷ್ಟಿಕ ಆಹಾರ ವಿತರಣೆಯಲ್ಲಿ ಯಾವುದೇ ಲೋಪಗಳು ಉಂಟಾಗದೇ ಅಹಾರ ವಿತರಿಸುವ ಮೂಲಕ ಅರಿವು ಮೂಡಿಸಿ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ಗ್ರಾಮ ಸಭೆಯಲ್ಲಿ ವಿಶೇಷಚೇತನರಿಗೆ ಸೋಲಾರ್ ಕಿಟ್ ವಿತರಣೆ , ತಾಂತ್ರಿಕ ಮತ್ತು ವೈದ್ಯಕೀಯ ಪದವಿಯ ವಿದ್ಯಾರ್ಥಿಗಳಿಗೆ ಸಾಧನ ಸಲಕರಣೆಗಳ ವಿತರಣೆ, ತರಬೇತಿ ಪಡೆದ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ, ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಯಿತು. ಕನ್ನಮಂಗಲ ಪಂಚಾಯತಿ ಅಭಿವೃದ್ಧಿ ಕಾರ್ಯಗಳಲ್ಲಿ ಇತರ ಪಂಚಾಯತಿಗಳಿಗೆ ಮಾದರಿ ಪಂಚಾಯತಿ ಯಾಗಲಿ ಎಂದು ಸಚಿವರು ಆಶಿಸಿದರು.
ಪಿಡಿಒ ಶ್ರೀನಿವಾಸ್ ಅವರು ಪರಿಸರದ ಕಾಳಜಿ, ನೀರಿನ ಮೌಲ್ಯ, ಸ್ವಚ್ಛತೆ ನೈರ್ಮಲ್ಯದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಿದರು.
ಸಭೆಯಲ್ಲಿ ಬಯಪ ಅಧ್ಯಕ್ಷರಾದ ಶಾಂತಕುಮಾರ್, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಜಗನ್ನಾಥ, ಕನ್ನಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಾಲಿನಿ, ಉಪಾಧ್ಯಕ್ಷರಾದ ವನಜಾಕ್ಷಿಮ್ಮ, ಗ್ರಾಮ ಪಂಚಾಯಿತಿ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು, ಪಿ.ಡಿ.ಒ ಶ್ರೀನಿವಾಸ್, ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದ ಮೂಲಕ ಹಾದುಹೋಗುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಸ್ಥನ ರಸ್ತೆಗೆ ಅಡ್ಡಲಾಗಿ ರೈಲು ಹಳಿ ಹಾದುಹೋಗಿದ್ದು,…
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗು ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ…
ಧರ್ಮಸ್ಥಳ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿ, ಧರ್ಮಸ್ಥಳ ವಿಶ್ವದಲ್ಲೇ ಪವಿತ್ರವಾದ ಸ್ಥಳ. ಅವಷೇಶ ಮತ್ತೊಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ…
ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು…
ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದಲ್ಲಿ ನಡೆದ ಕರ್ನಾಟಕ ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ…