ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಕೋಟಿ ಕೋಟಿ ಮೌಲ್ಯದ ಗೋಲ್ಡ್ ವಶ

ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಕಳ್ಳಸಾಗಾಣಿಕೆ ಮಾಡುತ್ತಿದ್ದ ಕೋಟಿ ಕೋಟಿ ಮೌಲ್ಯದ ಗೋಲ್ಡ್ ನ್ನ ವಶಪಡಿಸಿಕೊಂಡಿದ್ದಾರೆ.

ಸುಮಾರು 1.29 ಕೋಟಿ ಮೌಲ್ಯದ 2 ಕೆಜಿ 86 ಗ್ರಾಂ ಚಿನ್ನವನ್ನ ಜಪ್ತಿ ಮಾಡಲಾಗಿದೆ.

ಜ.4ರಂದು ಮದೀನಾ ಹಾಗೂ ಮಸ್ಕತ್ ಮೂಲಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 11 ಮಂದಿ ಮಹಿಳೆಯರು ಹಾಗೂ ಓರ್ವ ಪುರುಷ ಪ್ರಯಾಣಿಕನನ್ನ ತಡೆದಿ ತಪಾಸಣೆ ನಡೆಸಿದಾಗ ಬೆಳಕಿಗೆ ಬಂದಿದೆ.

ಚಿನ್ನಕ್ಕೆ ಸರಿಯಾದ ಬಿಲ್ ಹಾಗೂ ಟ್ಯಾಕ್ಸ್ ಇಲ್ಲದ ಕಾರಣ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಸದ್ಯ 12 ಮಂದಿ ಪ್ರಯಾಣಿಕರನ್ನು ಬಂಧಿಸಿ, ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *