ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಬೇಟೆ: 28 ಕೋಟಿ ಗಾಂಜಾ, 1.75 ಕೋಟಿ ಚಿನ್ನ ಜಪ್ತಿ

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಸರಣಿ ಕಾರ್ಯಾಚರಣೆಯಲ್ಲಿ 28 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ 1.75 ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದೆ. ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ಆರು ಪ್ರಯಾಣಿಕರನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗಿದೆ.

ವಿಯೆಟ್ನಾಂ ಮತ್ತು ಬ್ಯಾಂಕಾಕ್‌ನಿಂದ ಪ್ರಯಾಣಿಕರ ಲಗೇಜ್‌ಗಳಲ್ಲಿ ಅಡಗಿಸಿ ತರಲಾಗಿದ್ದ ಒಟ್ಟು 80.11 ಕೆ.ಜಿ. ಹೈಡ್ರೋಪೋನಿಕ್ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಇದರ ಅಂದಾಜು ಮಾರುಕಟ್ಟೆ ಮೌಲ್ಯ ಸುಮಾರು 28 ಕೋಟಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂಬಂಧ ಬ್ಯಾಂಕಾಕ್‌ನಿಂದ ಆಗಮಿಸಿದ್ದ ಪ್ರಯಾಣಿಕರು ಸೇರಿದಂತೆ ಪ್ರತ್ಯೇಕ ನಾಲ್ಕು ಪ್ರಕರಣಗಳಲ್ಲಿ ಐವರನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣಗಳಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಕ್ರಮ ಕೈಗೊಂಡು ತನಿಖೆ ನಡೆಸಲಾಗುತ್ತಿದೆ.

ಇದೇ ವೇಳೆ ಮತ್ತೊಂದು ಕಾರ್ಯಾಚರಣೆಯಲ್ಲಿ ಅಬುದಾಬಿ ಹಾಗೂ ಕೌಲಾಲಂಪುರದಿಂದ ಕೆಐಎಗೆ ಆಗಮಿಸಿದ್ದ ಪ್ರಯಾಣಿಕರಿಂದ ಸುಮಾರು 1.75 ಕೋಟಿ ಮೌಲ್ಯದ 1.2 ಕೆ.ಜಿ. ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದೆ. ಸೂಕ್ತ ದಾಖಲೆಗಳಿಲ್ಲದೆ ಚಿನ್ನ ಸಾಗಿಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಪ್ರಯಾಣಿಕರನ್ನು ವಶಕ್ಕೆ ಪಡೆದು ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ವಿಮಾನ ನಿಲ್ದಾಣದಲ್ಲಿ ನಡೆದ ಈ ಸರಣಿ ಕಾರ್ಯಾಚರಣೆಗಳ ಮೂಲಕ ಅಕ್ರಮ ಮಾದಕ ವಸ್ತು ಹಾಗೂ ಚಿನ್ನದ ಸಾಗಾಟದ ವಿರುದ್ಧ ಕಸ್ಟಮ್ಸ್ ಅಧಿಕಾರಿಗಳು ಕ್ರಮ ಕೈಗೊಂಡಿದ್ದು, ವಶಕ್ಕೆ ಪಡೆದವರ ಹಿನ್ನೆಲೆ ಹಾಗೂ ಸಾಗಾಟದ ಜಾಲದ ಕುರಿತು ತನಿಖೆ ಮುಂದುವರಿದಿದೆ.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

11 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

16 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

17 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

23 hours ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

23 hours ago

ಸ್ಟಿಂಗ್ ವಿಡಿಯೋ ವಿವಾದ: ಪೊಲೀಸ್ ತನಿಖೆ, ನ್ಯಾಯಾಲಯದ ಮೊರೆ ಹೋದ ಮಾಜಿ ಸಿಎಂ ಸಿದ್ದರಾಮಯ್ಯ

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ನನ್ನ ಹೆಸರನ್ನು ಜೋಡಿಸಿ ಅಪಪ್ರಚಾರ…

1 day ago