ಅಹ್ಮದಾಬಾದ್: ಅಹ್ಮದಾಬಾದ್ ನಲ್ಲಿಂದು ಪತನವಾದ ಏರ್ ಇಂಡಿಯಾ ವಿಮಾನ ದುರಂತ ಪ್ರಕರಣದಲ್ಲಿ ಯಾರೂ ಉಳಿದಿಲ್ಲ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ.
ದುರಂತದಲ್ಲಿ ವಿಮಾನ ಪ್ರಯಾಣಿಕರಲ್ಲದೇ 5 ಹಾಸ್ಟೆಲ್ ವಿದ್ಯಾರ್ಥಿಗಳೂ ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಗುಜರಾತ್ ರಾಜಧಾನಿ ಅಹಮದಾಬಾದ್ ಏರ್ಪೋರ್ಟ್ ಬಳಿ ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೇವಲ ಐದೇ ನಿಮಿಷದಲ್ಲಿ ಪತನಗೊಂಡಿದೆ.
ಏರ್ಪೋರ್ಟ್ ಬಳಿ ಮೇಧಿನಿ ನಗರ್ನಲ್ಲಿ ಈ ಘಟನೆ ಸಂಭವಿಸಿದ್ದು, ಬೋಯಿಂಗ್ 787-8 ಡ್ರೀಮ್‌ಲೈನರ್ (AI-171) ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರೊಂದಿಗೆ ಲಂಡನ್‌ಗೆ ತೆರಳುತ್ತಿತ್ತು ಎನ್ನಲಾಗಿದೆ.
ವಿಮಾನವು ನಗರದ ವಿಮಾನ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿರುವ ಫೋರೆನ್ಸಿಕ್ ಕ್ರಾಸ್ ರಸ್ತೆಯ ಬಳಿ ಬಿಜೆ ಮೆಡಿಕಲ್ ಕಾಲೇಜು ಹಾಸ್ಟೆಲ್ ಮೆಸ್ ಮೇಲೆ ಬಿದ್ದಿದೆ.
ದುರಂತದಲ್ಲಿ ಒಟ್ಟು 247 ಮಂದಿ ಸಾವಿಗೀಡಾಗಿದ್ದು, ಈ ಪೈಕಿ 230 ವಿಮಾನ ಪ್ರಯಾಣಿಕರು, 10 ಮಂದಿ ವಿಮಾನ ಸಿಬ್ಬಂದಿ, ಇಬ್ಬರು ಪೈಲಟ್ ( ಮುಖ್ಯ ಪೈಲಟ ಸುಮಿತ್ ಸಭರ್ವಾಲ್ ಮತ್ತು ಕೋ ಪೈಲಟ್ ಕ್ಲೈವ್ ಕುಂದರ್) ಗಳು ಸೇರಿದ್ದರು.
ವಿಾನದಲ್ಲಿದ್ದ 242 ಜನರಲ್ಲಿ 169 ಭಾರತೀಯ ಪ್ರಜೆಗಳು, 53 ಬ್ರಿಟಿಷ್ ಪ್ರಜೆಗಳು, 1 ಕೆನಡಾ ಪ್ರಜೆ ಮತ್ತು 7 ಪೋರ್ಚುಗೀಸ್ ಪ್ರಜೆಗಳು ಇದ್ದರು ಎಂದು ತಿಳಿದುಬಂದಿದೆ.
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…