ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ನಲ್ಲಿ ವಿವಿಧ ಕ್ರೀಡಾಕೂಟಗಳಲ್ಲಿ ಭಾರತದ ಕ್ರೀಡಾಪಟುಗಳಿಂದ ಪದಕ ಬೇಟೆ ಮುಂದುವರಿದಿದೆ.
ಮಹಿಳೆಯರ ಕಬಡ್ಡಿಯಲ್ಲಿ ಭಾರತ ತಂಡ ಗೆದ್ದು ಚಿನ್ನಕ್ಕೆ ಮುತ್ತಿಡುವ ಮೂಲಕ ಶತಕದ ಸಾಧನೆಯನ್ನು ಪೂರ್ಣಗೊಳಿಸಿ ಏಷ್ಯನ್ ಗೇಮ್ಸ್‌ನಲ್ಲಿ ದೊಡ್ಡ ಇತಿಹಾಸವನ್ನ ನಿರ್ಮಿಸಲಾಗಿದೆ.
ಇಲ್ಲಿಯವರೆಗೂ ಭಾರತ 25 ಚಿನ್ನ, 35 ಬೆಳ್ಳಿ ಮತ್ತು 40 ಕಂಚಿನ ಪದಕದೊಂದಿಗೆ ಒಟ್ಟಾರೆ 100 ಪದಕಗಳನ್ನು ಗೆದ್ದು ಶತಕದ ಸಾಧನೆ ಮಾಡಲಾಗಿದೆ.
ಏಷ್ಯನ್ ಗೇಮ್ಸ್ ನಲ್ಲಿ ಭಾರತ ಪಡೆದ ಪದಕಗಳ ವಿವರ
2002-36 ಪದಕ
2006-53 ಪದಕ
2010-65 ಪದಕ
2014-57 ಪದಕ
2018-70 ಪದಕ
2023-100 ಪದಕಗಳಿಗೆ ಮುತ್ತಿಕ್ಕುವ ಮೂಲಕ ಭಾರತ ಇತಿಹಾಸ ನಿರ್ಮಿಸಿದೆ.
ನಾವು 100 ಪದಕಗಳ ಗಮನಾರ್ಹ ಮೈಲಿಗಲ್ಲನ್ನು ತಲುಪಿದ್ದೇವೆ ಎಂದು ಭಾರತದ ಜನರು ರೋಮಾಂಚನಗೊಂಡಿದ್ದಾರೆ. ಭಾರತಕ್ಕೆ ಈ ಐತಿಹಾಸಿಕ ಮೈಲಿಗಲ್ಲಿಗೆ ಕಾರಣವಾದ ನಮ್ಮ ಅದ್ಭುತ ಕ್ರೀಡಾಪಟುಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಬರೆದುಕೊಂಡಿದ್ದಾರೆ.
ಪ್ರತಿ ವಿಸ್ಮಯಕಾರಿ ಪ್ರದರ್ಶನವು ಇತಿಹಾಸವನ್ನು ನಿರ್ಮಿಸಿದೆ ಮತ್ತು ನಮ್ಮ ಹೃದಯವನ್ನು ಹೆಮ್ಮೆಯಿಂದ ತುಂಬಿದೆ. ಅ.10ರಂದು ನಮ್ಮ ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಲು ನಾನು ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…