Categories: ಕ್ರೀಡೆ

ಏಷ್ಯನ್ ಗೇಮ್ಸ್‌: ಪದಕ ಬೇಟೆಯಲ್ಲಿ ಶತಕ‌ ಸಾಧಿಸಿದ ಭಾರತ: ಬರೋಬ್ಬರಿ 72ವರ್ಷಗಳ ಬಳಿಕ ಮಹತ್ತರ ಸಾಧನೆ

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ನಲ್ಲಿ ವಿವಿಧ ಕ್ರೀಡಾಕೂಟಗಳಲ್ಲಿ ಭಾರತದ ಕ್ರೀಡಾಪಟುಗಳಿಂದ ಪದಕ ಬೇಟೆ ಮುಂದುವರಿದಿದೆ.

ಮಹಿಳೆಯರ ಕಬಡ್ಡಿಯಲ್ಲಿ ಭಾರತ ತಂಡ ಗೆದ್ದು ಚಿನ್ನಕ್ಕೆ ಮುತ್ತಿಡುವ ಮೂಲಕ ಶತಕದ ಸಾಧನೆಯನ್ನು ಪೂರ್ಣಗೊಳಿಸಿ ಏಷ್ಯನ್ ಗೇಮ್ಸ್‌ನಲ್ಲಿ ದೊಡ್ಡ ಇತಿಹಾಸವನ್ನ ನಿರ್ಮಿಸಲಾಗಿದೆ.

ಇಲ್ಲಿಯವರೆಗೂ ಭಾರತ 25 ಚಿನ್ನ, 35 ಬೆಳ್ಳಿ ಮತ್ತು 40 ಕಂಚಿನ ಪದಕದೊಂದಿಗೆ ಒಟ್ಟಾರೆ 100 ಪದಕಗಳನ್ನು ಗೆದ್ದು ಶತಕದ ಸಾಧನೆ ಮಾಡಲಾಗಿದೆ.

ಏಷ್ಯನ್ ಗೇಮ್ಸ್ ನಲ್ಲಿ ಭಾರತ ಪಡೆದ ಪದಕಗಳ ವಿವರ

2002-36 ಪದಕ

2006-53 ಪದಕ

2010-65 ಪದಕ

2014-57 ಪದಕ

2018-70 ಪದಕ

2023-100 ಪದಕಗಳಿಗೆ ಮುತ್ತಿಕ್ಕುವ ಮೂಲಕ ಭಾರತ ಇತಿಹಾಸ ನಿರ್ಮಿಸಿದೆ.

ನಾವು 100 ಪದಕಗಳ ಗಮನಾರ್ಹ ಮೈಲಿಗಲ್ಲನ್ನು ತಲುಪಿದ್ದೇವೆ ಎಂದು ಭಾರತದ ಜನರು ರೋಮಾಂಚನಗೊಂಡಿದ್ದಾರೆ. ಭಾರತಕ್ಕೆ ಈ ಐತಿಹಾಸಿಕ ಮೈಲಿಗಲ್ಲಿಗೆ ಕಾರಣವಾದ ನಮ್ಮ ಅದ್ಭುತ ಕ್ರೀಡಾಪಟುಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಬರೆದುಕೊಂಡಿದ್ದಾರೆ.

 ಪ್ರತಿ ವಿಸ್ಮಯಕಾರಿ ಪ್ರದರ್ಶನವು ಇತಿಹಾಸವನ್ನು ನಿರ್ಮಿಸಿದೆ ಮತ್ತು ನಮ್ಮ ಹೃದಯವನ್ನು ಹೆಮ್ಮೆಯಿಂದ ತುಂಬಿದೆ. ಅ.10ರಂದು ನಮ್ಮ ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಲು ನಾನು ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

6 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

10 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

11 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

12 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

14 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

17 hours ago