ಮೈಸೂರು ರಾಜ್ಯವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್, ಕನ್ನಡ ನಾಡಿನ ಅಭಿವೃದ್ಧಿಯ ಹರಿಕಾರರಾಗಿದ್ದಾರೆ ಎಂದು ನವೋದಯ ವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ವಿ.ಎಸ್.ಹೆಗಡೆ ತಿಳಿಸಿದರು.
ನಗರದ ಎಂ.ಎ.ಬಿ.ಎಲ್ ಪ್ರೌಢಶಾಲೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತ ಸಮಯದಲ್ಲಿ ನಿರ್ಮಾಣವಾದ ವಿವಿಧ ಜಲಾಶಯಗಳು, ಬೃಹತ್ ಕೈಗಾರಿಕೆಗಳು, ನೂರಾರು ಶಾಲೆಗಳು ಕನ್ನಡಿಗರ ಬದುಕನ್ನು ಉಜ್ವಲಗೊಳಿಸಿವೆ. ಏಷ್ಯಾದಲ್ಲೇ ಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ಬೀದಿದೀಪವನ್ನು ಬೆಳಗಿಸಿದ ಕೀರ್ತಿ ನಾಲ್ವಡಿ ಕೃಷ್ಣರಾಜರ ಒಡೆಯರಿಗೆ ಸಲ್ಲುತ್ತದೆ ಎಂದರು.
ಮಹಾತ್ಮಗಾಂಧೀಜಿಯವರಿಂದ ರಾಜರ್ಷಿ ಬಿರುದು ಪಡೆದ ಹೆಗ್ಗಳಿಕೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪಾತ್ರರಾಗಿದ್ದಾರೆ. ಹಿಂದುಳಿದ ವರ್ಗಗಳಿಗೆ ಮೊದಲ ಬಾರಿಗೆ ಮೀಸಲಾತಿ ಕಲ್ಪಿಸಿ ಸಾಮಾಜಿಕ ಮತ್ತು ಆರ್ಥಿಕ ಸಮಾನತೆಗೆ ಶ್ರಮಿಸಿದ ಮಹನೀಯರನ್ನು ಕನ್ನಡಿಗರು ಎಂದಿಗೂ ಮರೆಯಲಾರರು.
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರು ಸಂಸ್ಥಾನ ವಿಶ್ವಮಾನ್ಯವಾಗಿ ಸರ್ವಾಂಗೀಣ ಪ್ರಗತಿ ಹೊಂದಲು ಕಾರಣೀಭೂತರಾದವರು. ಕೃಷ್ಣರಾಜ ಒಡೆಯರ್ ಅವರ ಆಳ್ವಿಕೆಯಲ್ಲಿ ಗ್ರಾಮ ನಿರ್ಮಲೀಕರಣ, ವೈದ್ಯಕೀಯ ಸಹಾಯ, ವಿದ್ಯಾ ಪ್ರಚಾರ, ನೀರಿನ ಸೌಕರ್ಯ ದೊರೆತವು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಸಬಾ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ನಾಲ್ವಡಿ ಕೃಷ್ಣರಾಜ ಒಡೆಯರ್ ದೂರದೃಷ್ಟಿಯ ಫಲವಾಗಿ ಮೈಸೂರು ರಾಜ್ಯ “ಮಾದರಿ ಮೈಸೂರು” ಎಂಬ ಕೀರ್ತಿಗೆ ಪ್ರಾಪ್ತವಾಯಿತು ಎಂದರು.
ನೀರಾವರಿ, ಕೈಗಾರಿಕೆ, ಶಿಕ್ಷಣ ಕ್ಷೇತ್ರಗಳಲ್ಲಿ ಕೃಷ್ಣರಾಜರ ಕೊಡುಗೆ ಅನನ್ಯವಾದುದು. ಅವರು ಜಾರಿಗೆ ತಂದ ಸಾಮಾಜಿಕ ಕಾನೂನುಗಳಿಂದ ಸಮಾಜದಲ್ಲಿನ ಅನಿಷ್ಠ ಪದ್ಧತಿಗಳ ನಿರ್ಮೂಲನೆ ಸಾಧ್ಯವಾಯಿತು. ಅವರು ಕನ್ನಡನಾಡಿನ ಸಮಗ್ರ ಅಭಿವೃದ್ಧಿಗೆ ಅಡಿಪಾಯ ಹಾಕಿದರು. ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಾದ ಕೃಷ್ಣರಾಜರು ಪ್ರಾತಃಸ್ಮರಣೀಯರಾಗಿದ್ದಾರೆ. ಕೃಷ್ಣರಾಜರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಇಂದಿನ ಯುವಪೀಳಿಗೆ ಶ್ರಮಿಸಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕೃಷ್ಣರಾಜ ಒಡೆಯರ ಕುರಿತ ಗೀತೆಗಳನ್ನು ಹಾಡಿದರು.
ಈ ವೇಳೆ ಎಂ.ಎ.ಬಿ.ಎಲ್. ಸಂಸ್ಥೆಯ ಸಿ.ಇ.ಓ ಬಿ.ಪಿ. ಪ್ರಿಯಾಂಕ, ಸಮಾಜಸೇವಕ ದರ್ಗಾಜೋಗಿಹಳ್ಳಿ ಮಲ್ಲೇಶ್, ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…