ಏಷ್ಯಾದಲ್ಲೇ ಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ಬೀದಿದೀಪವನ್ನು ಬೆಳಗಿಸಿದ ಕೀರ್ತಿ ನಾಲ್ವಡಿ ಕೃಷ್ಣರಾಜರ ಒಡೆಯರಿಗೆ ಸಲ್ಲುತ್ತದೆ- ನಿವೃತ್ತ ಪ್ರಾಧ್ಯಾಪಕ ವಿ.ಎಸ್.ಹೆಗಡೆ

ಮೈಸೂರು ರಾಜ್ಯವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್, ಕನ್ನಡ ನಾಡಿನ ಅಭಿವೃದ್ಧಿಯ ಹರಿಕಾರರಾಗಿದ್ದಾರೆ ಎಂದು ನವೋದಯ ವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ವಿ.ಎಸ್.ಹೆಗಡೆ  ತಿಳಿಸಿದರು.

ನಗರದ ಎಂ.ಎ.ಬಿ.ಎಲ್  ಪ್ರೌಢಶಾಲೆಯಲ್ಲಿ  ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತ ಸಮಯದಲ್ಲಿ ನಿರ್ಮಾಣವಾದ ವಿವಿಧ ಜಲಾಶಯಗಳು, ಬೃಹತ್ ಕೈಗಾರಿಕೆಗಳು, ನೂರಾರು ಶಾಲೆಗಳು ಕನ್ನಡಿಗರ ಬದುಕನ್ನು  ಉಜ್ವಲಗೊಳಿಸಿವೆ. ಏಷ್ಯಾದಲ್ಲೇ ಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ಬೀದಿದೀಪವನ್ನು ಬೆಳಗಿಸಿದ ಕೀರ್ತಿ ನಾಲ್ವಡಿ ಕೃಷ್ಣರಾಜರ ಒಡೆಯರಿಗೆ ಸಲ್ಲುತ್ತದೆ ಎಂದರು.

ಮಹಾತ್ಮಗಾಂಧೀಜಿಯವರಿಂದ ರಾಜರ್ಷಿ ಬಿರುದು ಪಡೆದ ಹೆಗ್ಗಳಿಕೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪಾತ್ರರಾಗಿದ್ದಾರೆ. ಹಿಂದುಳಿದ ವರ್ಗಗಳಿಗೆ ಮೊದಲ ಬಾರಿಗೆ ಮೀಸಲಾತಿ ಕಲ್ಪಿಸಿ ಸಾಮಾಜಿಕ ಮತ್ತು ಆರ್ಥಿಕ ಸಮಾನತೆಗೆ ಶ್ರಮಿಸಿದ ಮಹನೀಯರನ್ನು ಕನ್ನಡಿಗರು ಎಂದಿಗೂ ಮರೆಯಲಾರರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರು ಸಂಸ್ಥಾನ ವಿಶ್ವಮಾನ್ಯವಾಗಿ ಸರ್ವಾಂಗೀಣ ಪ್ರಗತಿ ಹೊಂದಲು ಕಾರಣೀಭೂತರಾದವರು. ಕೃಷ್ಣರಾಜ ಒಡೆಯರ್ ಅವರ ಆಳ್ವಿಕೆಯಲ್ಲಿ ಗ್ರಾಮ ನಿರ್ಮಲೀಕರಣ, ವೈದ್ಯಕೀಯ ಸಹಾಯ, ವಿದ್ಯಾ ಪ್ರಚಾರ, ನೀರಿನ ಸೌಕರ್ಯ ದೊರೆತವು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಸಬಾ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ನಾಲ್ವಡಿ ಕೃಷ್ಣರಾಜ ಒಡೆಯರ್ ದೂರದೃಷ್ಟಿಯ ಫಲವಾಗಿ ಮೈಸೂರು ರಾಜ್ಯ “ಮಾದರಿ ಮೈಸೂರು” ಎಂಬ ಕೀರ್ತಿಗೆ ಪ್ರಾಪ್ತವಾಯಿತು ಎಂದರು.

ನೀರಾವರಿ, ಕೈಗಾರಿಕೆ, ಶಿಕ್ಷಣ ಕ್ಷೇತ್ರಗಳಲ್ಲಿ ಕೃಷ್ಣರಾಜರ ಕೊಡುಗೆ ಅನನ್ಯವಾದುದು. ಅವರು ಜಾರಿಗೆ ತಂದ ಸಾಮಾಜಿಕ ಕಾನೂನುಗಳಿಂದ ಸಮಾಜದಲ್ಲಿನ ಅನಿಷ್ಠ ಪದ್ಧತಿಗಳ ನಿರ್ಮೂಲನೆ ಸಾಧ್ಯವಾಯಿತು. ಅವರು ಕನ್ನಡನಾಡಿನ ಸಮಗ್ರ ಅಭಿವೃದ್ಧಿಗೆ ಅಡಿಪಾಯ ಹಾಕಿದರು. ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಾದ ಕೃಷ್ಣರಾಜರು ಪ್ರಾತಃಸ್ಮರಣೀಯರಾಗಿದ್ದಾರೆ. ಕೃಷ್ಣರಾಜರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಇಂದಿನ ಯುವಪೀಳಿಗೆ ಶ್ರಮಿಸಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕೃಷ್ಣರಾಜ ಒಡೆಯರ ಕುರಿತ ಗೀತೆಗಳನ್ನು ಹಾಡಿದರು.

ಈ ವೇಳೆ ಎಂ.ಎ.ಬಿ.ಎಲ್. ಸಂಸ್ಥೆಯ ಸಿ.ಇ.ಓ ಬಿ.ಪಿ. ಪ್ರಿಯಾಂಕ, ಸಮಾಜಸೇವಕ ದರ್ಗಾಜೋಗಿಹಳ್ಳಿ ಮಲ್ಲೇಶ್, ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 hour ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

5 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

7 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

7 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

9 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

13 hours ago