ದೊಡ್ಡಬಳ್ಳಾಪುರ ನಗರದಲ್ಲಿ ಏ.10ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ ಮಾರ್ಗದಲ್ಲಿ ವಾಹಕ ಬದಲಾವಣೆ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು, F02-Birla Super ಫೀಡರ್‌ನ ಮಾರ್ಗದಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವಿನಯ ಕುಮಾರ್ ಹೆಚ್ ಪಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ತೇರಿನ ಬೀದಿ, ರಂಗಪ್ಪ ಸರ್ಕಲ್, ತೂಬಗೆರೆಪೇಟೆ, ಚೌಡೇಶ್ವರಿ ಬೀದಿ, ಬ್ರಾಹ್ಮಣರ ಬೀದಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.