ಏ.16‌ ಮತ್ತು 17ರಂದು ನಗರದ 5 ಪರೀಕ್ಷಾ‌ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ: 2021 ವಿದ್ಯಾರ್ಥಿಗಳು ನೋಂದಣಿ: ಪರೀಕ್ಷೆಗೆ ಸಕಲ ಸಿದ್ಧತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ 5 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2021 ವಿದ್ಯಾರ್ಥಿಗಳು ಏಪ್ರಿಲ್ 16 ಮತ್ತು 17 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ( ಸಿಇಟಿ) ಬರೆಯಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ  ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಎನ್.ಮೋಹನ್ ಕುಮಾರ್ ತಿಳಿಸಿದ್ದಾರೆ.

ಅವರು ಸಿಇಟಿ ಪರೀಕ್ಷೆಯ ಪೂರ್ವ ಸಿದ್ಧತೆ ಕುರಿತು ಮಾಹಿತಿ ನೀಡಿ, ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕೊಂಗಾಡಿಯಪ್ಪ ಪದವಿಪೂರ್ವ ಕಾಲೇಜಿನಲ್ಲಿ 688, ಮಾದಗೊಂಡನಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ  432, ಹೊಸ ಬಸ್ ನಿಲ್ದಾಣ ಮುಂಭಾಗದ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ 360, ವಿದ್ಯಾನಿಧಿ ಸ್ವತಂತ್ರ್ಯ ಪದವಿಪೂರ್ವ ಕಾಲೇಜಿನಲ್ಲಿ 270, ಶ್ರೀ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ 271 ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆ ನಡೆಯುತ್ತದೆ ಎಂದರು.

ಏ.16 ರಂದು ಬುಧವಾರ ಬೆಳಗ್ಗೆ 10.30 ರಿಂದ 11.50ರ ವರೆಗೆ ಭೌತವಿಜ್ಞಾನ, ಮಧ್ಯಾಹ್ನ 2.30 ರಿಂದ 3.50ರವರೆಗೆ ರಸಾಯನವಿಜ್ಞಾನ

ಏ.17 ರಂದು ಗುರುವಾರ ಬೆಳಿಗ್ಗೆ 10.30 ರಿಂದ 11.50ರ ವರೆಗೆ ಗಣಿತ, ಮಧ್ಯಾಹ್ನ 2.30 ರಿಂದ 3.50ರ ವರೆಗೆ ಜೀವವಿಜ್ಞಾನ ಪರೀಕ್ಷೆಗಳು ದೊಡ್ಡಬಳ್ಳಾಪುರ ನಗರದ 5 ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಯುತ್ತದೆ ಎಂದರು.

ವೆಬ್ ಕಾಸ್ಟಿಂಗ್
ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ಸಿಇಟಿ ಪರೀಕ್ಷೆಯ 5 ಪರೀಕ್ಷಾ ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್ ಕಡ್ಡಾಯವಾಗಿದೆ. ಯಾವುದೇ ಲೋಪಗಳು ಉಂಟಾಗದಂತೆ ಪರೀಕ್ಷೆಗಳು ಸುಗಮವಾಗಿ ನಡೆಸಲು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ‌ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ.

ಸಿಇಟಿ ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್‌ವರೆಗೆ ನಿಷೇಧಾಜ್ಞೆ ಜಾರಿ ಇರುತ್ತದೆ. ಝೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಪೊಲೀಸ್ ಬಂದೋಬಸ್ತ್ ಸೇರಿದಂತೆ ಎಲ್ಲಾ ಪರೀಕ್ಷಾ ಕೊಠಡಿಗಳಲ್ಲಿ ಮೂಲ ಸೌಕರ್ಯಗಳ ಕಲ್ಪಿಸುವ ವ್ಯವಸ್ಥೆ ಮಾಡಲಾಗಿದೆ ಎಂದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

2 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

7 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

7 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

12 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

23 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

24 hours ago