2023-ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 13 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಐದನೇಯ ದಿನವಾದ ಏ.17ರಂದು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 16 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಮಾಹಿತಿ ನೀಡಿದರು.
ಜಿಲ್ಲೆಯ 178-ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿ.ಜೆ.ಪಿ. ಪಕ್ಷದ ಅಭ್ಯರ್ಥಿಯಾಗಿ ಎನ್.ನಾಗರಾಜ್ , ಐ.ಎನ್.ಸಿ ಪಕ್ಷದ ಅಭ್ಯರ್ಥಿಯಾಗಿ ಶರತ್ ಕುಮಾರ್ ಬಚ್ಚೇಗೌಡ , ಪಕ್ಷೇತರ ಅಭ್ಯರ್ಥಿಗಳಾಗಿ ಅಜಯ್ ಕುಮಾರ್ ರೆಡ್ಡಿ ಆಡಲಾ, ಎಚ್.ಟಿ ಶಶಿ ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ.
179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿ.ಜೆ.ಪಿ ಪಕ್ಷದ ಅಭ್ಯರ್ಥಿಯಾಗಿ ಪಿಳ್ಳಮುನಿಶಾಮಪ್ಪ , ಐ.ಎನ್.ಸಿ ಪಕ್ಷದ ಅಭ್ಯರ್ಥಿಯಾಗಿ ಕೆ.ಎಚ್ ಮುನಿಯಪ್ಪ , ಜೆ.ಡಿ.ಎಸ್ ಪಕ್ಷದ ಅಭ್ಯರ್ಥಿಯಾಗಿ ನಿಸರ್ಗ ನಾರಾಯಣಸ್ವಾಮಿ, ಪಕ್ಷೇತರ ಅಭ್ಯರ್ಥಿಯಾಗಿ ನಾರಾಯಣಸ್ವಾಮಿ.ಎಂ ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿ.ಜೆ.ಪಿ ಪಕ್ಷದ ಅಭ್ಯರ್ಥಿಯಾಗಿ ಧೀರಜ್ ಮುನಿರಾಜು , ಐ.ಎನ್.ಸಿ ಪಕ್ಷದ ಅಭ್ಯರ್ಥಿಯಾಗಿ ಟಿ.ವೆಂಕಟರಮಣಯ್ಯ , ಎ.ಎ.ಪಿ ಪಕ್ಷದ ಅಭ್ಯರ್ಥಿಯಾಗಿ ಪುರುಷೋತ್ತಮ , ಪಕ್ಷೇತರ ಅಭ್ಯರ್ಥಿಯಾಗಿ ಆನಂದಮೂರ್ತಿ , ಇತರೆ ಪಕ್ಷದಡಿ ರವಿಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ.
181- ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಐ.ಎನ್. ಸಿ ಪಕ್ಷದ ಅಭ್ಯರ್ಥಿಯಾಗಿ ಶ್ರೀನಿವಾಸಯ್ಯ.ಎನ್ , ಜೆ.ಡಿ.ಎಸ್ ಪಕ್ಷದ ಅಭ್ಯರ್ಥಿಯಾಗಿ ಡಾ.ಕೆ.ಶ್ರೀನಿವಾಸಮೂರ್ತಿ , ಇತರೆ ಪಕ್ಷದಡಿ ಅರುಣ್ ಕುಮಾರ್‌ಬಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮಾಹಿತಿ ನೀಡಿದ್ದಾರೆ.