ಏ.17ರಂದು ಜಿಲ್ಲೆಯಲ್ಲಿ 16 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ- ಜಿಲ್ಲಾಧಿಕಾರಿ ಆರ್ ಲತಾ

2023-ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 13 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಐದನೇಯ ದಿನವಾದ ಏ.17ರಂದು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 16 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಮಾಹಿತಿ ನೀಡಿದರು.

ಜಿಲ್ಲೆಯ 178-ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿ.ಜೆ.ಪಿ. ಪಕ್ಷದ ಅಭ್ಯರ್ಥಿಯಾಗಿ ಎನ್.ನಾಗರಾಜ್ , ಐ.ಎನ್.ಸಿ ಪಕ್ಷದ ಅಭ್ಯರ್ಥಿಯಾಗಿ ಶರತ್ ಕುಮಾರ್ ಬಚ್ಚೇಗೌಡ , ಪಕ್ಷೇತರ ಅಭ್ಯರ್ಥಿಗಳಾಗಿ ಅಜಯ್ ಕುಮಾರ್ ರೆಡ್ಡಿ ಆಡಲಾ, ಎಚ್.ಟಿ ಶಶಿ ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ.

179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿ.ಜೆ.ಪಿ ಪಕ್ಷದ ಅಭ್ಯರ್ಥಿಯಾಗಿ ಪಿಳ್ಳಮುನಿಶಾಮಪ್ಪ , ಐ.ಎನ್.ಸಿ ಪಕ್ಷದ ಅಭ್ಯರ್ಥಿಯಾಗಿ ಕೆ.ಎಚ್ ಮುನಿಯಪ್ಪ , ಜೆ.ಡಿ.ಎಸ್ ಪಕ್ಷದ ಅಭ್ಯರ್ಥಿಯಾಗಿ ನಿಸರ್ಗ ನಾರಾಯಣಸ್ವಾಮಿ, ಪಕ್ಷೇತರ ಅಭ್ಯರ್ಥಿಯಾಗಿ ನಾರಾಯಣಸ್ವಾಮಿ.ಎಂ ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿ.ಜೆ.ಪಿ ಪಕ್ಷದ ಅಭ್ಯರ್ಥಿಯಾಗಿ ಧೀರಜ್ ಮುನಿರಾಜು , ಐ.ಎನ್.ಸಿ ಪಕ್ಷದ ಅಭ್ಯರ್ಥಿಯಾಗಿ ಟಿ.ವೆಂಕಟರಮಣಯ್ಯ , ಎ.ಎ.ಪಿ ಪಕ್ಷದ ಅಭ್ಯರ್ಥಿಯಾಗಿ ಪುರುಷೋತ್ತಮ , ಪಕ್ಷೇತರ ಅಭ್ಯರ್ಥಿಯಾಗಿ ಆನಂದಮೂರ್ತಿ , ಇತರೆ ಪಕ್ಷದಡಿ ರವಿಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ.

181- ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಐ.ಎನ್. ಸಿ ಪಕ್ಷದ ಅಭ್ಯರ್ಥಿಯಾಗಿ ಶ್ರೀನಿವಾಸಯ್ಯ.ಎನ್ , ಜೆ.ಡಿ.ಎಸ್ ಪಕ್ಷದ ಅಭ್ಯರ್ಥಿಯಾಗಿ ಡಾ.ಕೆ.ಶ್ರೀನಿವಾಸಮೂರ್ತಿ , ಇತರೆ ಪಕ್ಷದಡಿ ಅರುಣ್ ಕುಮಾರ್‌ಬಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮಾಹಿತಿ ನೀಡಿದ್ದಾರೆ.

Ramesh Babu

Journalist

Recent Posts

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

12 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

12 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

13 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

19 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

21 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

24 hours ago