ಏ.24ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 ಆರಂಭ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ  ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್ 24 ರಿಂದ ಪ್ರಾರಂಭಗೊಳ್ಳುತ್ತಿದೆ. ಜಿಲ್ಲೆಯ  4 ಪರೀಕ್ಷಾ ಕೇಂದ್ರಗಳಲ್ಲಿ  ಒಟ್ಟು 2641 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ 2ನ್ನು ತೆಗೆದುಕೊಂಡಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ   ಶಾಲಾ ಶಿಕ್ಷಣ ಇಲಾಖೆ ( ಪದವಿಪೂರ್ವ) ಉಪನಿರ್ದೇಶಕ ಎನ್. ಮೋಹನ್ ಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆ 2 ಕುರಿತು ಮಾಹಿತಿ ನೀಡಿ,   ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಸರ್ಕಾರಿ ಪದವಿಪೂರ್ವ ಕಾಲೇಜು, ದೇವನಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜು, ಹೊಸಕೋಟೆ
ಸರ್ಕಾರಿ ಪದವಿಪೂರ್ವ ಕಾಲೇಜು ಮತ್ತು ನೆಲಮಂಗಲ ಸರ್ಕಾರಿ ಪದವಿಪೂರ್ವ ಕಾಲೇಜು ಒಟ್ಟು 4 ಪರೀಕ್ಷಾ ಕೇಂದ್ರಗಳಾಗಿವೆ.‌ ದ್ವಿತೀಯ ಪಿಯುಸಿ ಪರೀಕ್ಷಾ 1 ರಲ್ಲಿ ಹೊಸ ವಿದ್ಯಾರ್ಥಿಗಳು ‌(ಅನುತ್ತೀರ್ಣರಾದ) 1659, ಖಾಸಗಿ ವಿದ್ಯಾರ್ಥಿಗಳು 03, ಪುನರಾವರ್ತಿತ (2025ಕ್ಕಿಂತ ಮೊದಲಿನವರು) 184, ಅಂಕ ಸುಧಾರಣೆ ಬಯಸಿರುವ 795 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ 2 ಬರೆಯಲಿದ್ದಾರೆ ಎಂದರು.

ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ
ಏಪ್ರಿಲ್ 24 ರಿಂದ ಪ್ರಾರಂಭಗೊಳ್ಳುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷೆ 2 ಕುರಿತು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ದತಾ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಭಾಗವಹಿಸಿ ಮಾತನಾಡಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ 2 ಪಾರದರ್ಶಕವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು ಎಲ್ಲಾ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಜಿಲ್ಲೆಯ ನಾಲ್ಕು ತಾಲ್ಲೂಕಿನ ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿ, ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.

ಸಕಲ ಸಿದ್ದತೆ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಮತ್ತು ಜಿಲ್ಲಾಡಳಿತದ  ಮಾರ್ಗದರ್ಶನದಂತೆ     ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕತೆ ಮತ್ತು ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಸಿದ್ದತೆ ನಡೆದಿದೆ.‌

ಕಾನೂನು ವ್ಯವಸ್ಥೆ :-  ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ಪರೀಕ್ಷಾ ಕೇಂದ್ರಗಳಲ್ಲೂ ಜಾಗೃತ ದಳ‌ ವ್ಯವಸ್ಥೆ  ಜೊತೆಗೆ  ಪೊಲೀಸ್‌ ಭದ್ರತಾ ವ್ಯವಸ್ಥೆ, ಪರೀಕ್ಷಾ ಕೇಂದ್ರದ  ಸುತ್ತಲೂ 200 ಮೀಟರ್ ಸುತ್ತಳತೆಯಲ್ಲಿ ನಿಷೇಧಾಜ್ಞೆ,  ಜೆರಾಕ್ಸ್ ಅಂಗಡಿಗಳು ಹಾಗೂ ಕಂಪ್ಯೂಟರ್ ಕೇಂದ್ರಗಳು ಮುಚ್ಚುವುದು ಸೇರಿದಂತೆ ಎಲ್ಲಾ ಅಗತ್ಯ ವ್ಯವಸ್ಥೆ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ( ಪದವಿಪೂರ್ವ) ಉಪನಿರ್ದೇಶಕ ಎನ್. ಮೋಹನ್ ಕುಮಾರ್‌ ತಿಳಿಸಿದರು.

Ramesh Babu

Journalist

Recent Posts

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

7 hours ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

7 hours ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

10 hours ago

ಎಫ್‌ಐಡಿ ಹೊಂದಿದ ರೈತರಿಗೆ ಮಾತ್ರ ಬರಪರಿಹಾರ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದಾಗಿ ಸಂಕಷ್ಟಕ್ಕೊಳಗಾದ ರೈತರಿಗೆ ನೆರವು ಒದಗಿಸುವ ಉದ್ದೇಶದಿಂದ,…

11 hours ago

ಉರ್ದು ಹಬ್ಬವನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ನಿಖಿಲ್ ಕುಮಾರಸ್ವಾಮಿ

ದೊಡ್ಡಬಳ್ಳಾಪುರ: ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆಯಲಿರುವ ‘ಉರ್ದು ಹಬ್ಬ’ ಆಚರಣೆಯನ್ನು ಕೇವಲ ರಾಜಕೀಯ ದೃಷ್ಟಿಕೋನದಿಂದ ನೋಡಬಾರದು ಎಂದು ಜೆಡಿಎಸ್ ಯುವ…

11 hours ago

ಜಿಲ್ಲೆಯಲ್ಲಿ ಪಾತಾಳ ಮುಟ್ಟಿದ ಅಂತರ್ಜಲ! ಕೊಳವೆಬಾವಿಗಳ ಅತಿಯಾದ ಬಳಕೆ, ಮಳೆ ಕೊರತೆ; 1,250 ಅಡಿಯಲ್ಲೂ ನೀರು ಸಿಗುವುದು ಅನುಮಾನ

ಬೆಂಗಳೂರು ಗ್ರಾಮಾಂತರ: ಯಾವುದೇ ನದಿ ಮೂಲವಿಲ್ಲದ ಬಯಲುಸೀಮೆ ಪ್ರದೇಶವಾಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲದ ಮೇಲಿನ ಅವಲಂಬನೆ ವರ್ಷದಿಂದ ವರ್ಷಕ್ಕೆ…

20 hours ago