ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಸೌಲಭ್ಯ ವಿತರಣೆಗಾಗಿ ಏಪ್ರಿಲ್ 28 ರಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಕೈಗಾರಿಕಾ ಪ್ರದೇಶ ಫಾಕ್ಸ್ ಕಾನ್ ಸಮೀಪ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಅಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಸೌಲಭ್ಯ ವಿತರಣೆ ಮಾಡಲಿದ್ದಾರೆ.
ಈ ಹಿನ್ನೆಲೆ ಸ್ಥಳದಲ್ಲಿ ಸಕಲ ಸಿದ್ಧತೆ ನಡೆಸಲಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸುವ ಕಾರ್ಯಕ್ರಮದ ಸಿದ್ಧತೆಗಳನ್ನು ಆಹಾರ ನಾಗರಿಕ ಸರಬರಾಜು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ವೇಳೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ, ಜಿ.ಪಂ.ಸಿಇಒ ಅನುರಾಧಾ, ಮುಖಂಡರುಗಳು, ಅಧಿಕಾರಿಗಳು ಇದ್ದರು.