ವಿಧಾನಸಭೆ ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಇಳಿ ವಯಸ್ಸಿನಲ್ಲಿಯೂ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತಿದ್ದಾರೆ.
ಪ್ರತಿ ಕ್ಷೇತ್ರದಲ್ಲಿಯೂ ಪ್ರಚಾರ ಮಾಡುತ್ತಿರುವ ಎಚ್.ಡಿ.ಡಿ ಅವರು ಏ.29ರಂದು ಶನಿವಾರ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಪ್ರಚಾರ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ತಾಲ್ಲೂಕಿನ ದೊಡ್ಡಬೆಳವಂಗಲದ ಸರ್ಕಾರಿ ಕಾಲೇಜು ಮೈದಾನದಲ್ಲಿ ವೇದಿಕೆ ಕಾರ್ಯಕ್ರಮವನ್ನು ಬೆಳಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಜೆಡಿಎಸ್ ಅಭ್ಯರ್ಥಿ ಬಿ.ಮುನೇಗೌಡ ಪರವಾಗಿ ಲಕ್ಷಾಂತರ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡಿ, ಮತಯಾಚನೆ ಮಾಡಲಿದ್ದಾರೆ ಎಂದು ವಕ್ತಾರ ಮಂಜುನಾಥ ತಿಳಿಸಿದ್ದಾರೆ.