ಏ.4ರಂದು ಇ-ಖಾತಾ ಅಭಿಯಾನಕ್ಕೆ ಚಾಲನೆ: ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು- ಶಾಸಕ ಧೀರಜ್ ಮುನಿರಾಜ್

ನಗರಸಭೆ ಮತ್ತು ಬಾಶೆಟ್ಟಿಹಳ್ಳಿ ಪಟ್ಟಣ‌‌ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಅಧಿಕೃತ, ಅನಧಿಕೃತ ಹಾಗೂ ರೆವಿನ್ಯೂ ಜಾಗದಲ್ಲಿ ನಿರ್ಮಿಸಿರುವ ಕಟ್ಟಡ, ನಿವೇಶನಗಳ ಸ್ವತ್ತುಗಳಿಗೆ ಇ-ಖಾತಾ ನೀಡುವ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದು ಶಾಸಕ ಧೀರಜ್ ಮುನಿರಾಜ್ ತಿಳಿಸಿದರು.

ನಗರದ ತಾಲ್ಲೂಕು ಪಂಚಾಯಿತಿ ಆವರಣದ ಶಾಸಕರ ಕಚೇರಿಯಲ್ಲಿ ಇ-ಖಾತಾ ಅಭಿಯಾನ ಕುರಿತು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.4ರಂದು ನಗರಸಭೆ ಆವರಣದಲ್ಲಿ ಇ-ಖಾತಾ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತದೆ. ಈ ಅಭಿಯಾನ ಏ.22ರವರೆಗೆ ನಡೆಸಲಾಗುತ್ತದೆ ಎಂದರು.

ಕರ್ನಾಟಕ ಸರ್ಕಾರ ಆಸ್ತಿ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಇ-ಖಾತಾ ಅಭಿಯಾನ ಆರಂಭಿಸಿದೆ. ಜನರು ಯಾವುದೇ ಊಹಾಪೋಹಗಳಿಗೆ ಕಿವಿಗೊಟ್ಟು ಮಧ್ಯವರ್ತಿಗಳಿಂದ ಕಿರುಕುಳ ಅನುಭವಿಸುವುದು ಬೇಡ. ನಿಗದಿತ ದಾಖಲೆಗಳನ್ನು ಸಲ್ಲಿಸಿ ಇ-ಖಾತೆಗಳನ್ನು ಪಡೆಯಬಹುದು ಎಂದು ಹೇಳಿದರು.

ಇ-ಖಾತಾ ಆಂದೋಲನದಲ್ಲಿ ಸ್ವತ್ತಿನ ಮಾಲೀಕರು ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳದಲ್ಲಿ ಬೆಳಗ್ಗೆ 10-00 ರಿಂದ ಸಂಜೆ 5-00 ಗಂಟೆವರೆಗೆ ನಿಗದಿತ ದಾಖಲೆಗಳೊಂದಿಗೆ ಹಾಜರಾಗಿ ಅರ್ಜಿ ಸಲ್ಲಿಸಬೇಕು ಎಂದರು.

ನಗರಸಭೆ ವ್ಯಾಪ್ತಿಯಲ್ಲಿ ಅರ್ಜಿ ಸಲ್ಲಿಸಿ 30‌ ದಿನದಲ್ಲಿ ನಿಮ್ಮ ಮನೆಗೆ ಉಚಿತವಾಗಿ ಇ-ಖಾತಾ ನೀಡಲಾಗುವುದು. ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಅರ್ಜಿ ಹಾಕಿದ  15 ದಿನದಲ್ಲಿ ಇ-ಖಾತಾ ನೀಡಲಾಗುವುದು ಎಂದರು.

ಎ-ರಿಜಿಸ್ಟ‌ರ್ ನಲ್ಲಿರುವ ಸ್ವತ್ತುಗಳಿಗೆ ಇ-ಖಾತಾ ಪಡೆಯಲು ಸಲ್ಲಿಸಬೇಕಿರುವ ಕನಿಷ್ಟ ದಾಖಲೆಗಳು

1. ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತುಪಡಿಸುವ ನೋಂದಾಯಿತ ಮಾರಾಟ ಪತ್ರಗಳು /ದಾನಪತ್ರ/ವಿಭಾಗ ಪತ್ರಗಳು/ಸರ್ಕಾರ ಅಥವಾ ಸರ್ಕಾರದ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕು ಪತ್ರಗಳು/ ಮಂಜೂರಾತಿ ಪತ್ರಗಳು /ಕಂದಾಯ ಇಲಾಖೆಯಿಂದ 94 ಸಿಸಿ ಅಡಿ ನೀಡಲಾದ ಹಕ್ಕು ಪತ್ರ.

2. ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಡೀಕೃತ ಪ್ರತಿ ಮತ್ತು ನಿವೇಶನಗಳ ಬಿಡುಗಡೆ ಪತ್ರ.

3. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ.

4. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಸೀದಿ

5. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ

6. ಮಾಲೀಕರ ಗುರುತಿನ ದಾಖಲೆ ಪ್ರತಿ.

ಬಿ- ರಿಜಿಸ್ಟ‌ರ್ ನಲ್ಲಿರುವ ಸ್ವತ್ತುಗಳಿಗೆ ಇ-ಖಾತಾ ಪಡೆಯಲು ಸಲ್ಲಿಸಬೇಕಿರುವ ಕನಿಷ್ಟ ದಾಖಲೆಗಳು

1. ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತುಪಡಿಸುವ ದಿನಾಂಕ: 10-09-2024 ರ ಪೂರ್ವದಲ್ಲಿ ನೋಂದಾಯಿತ ಮಾರಾಟ ಪತ್ರಗಳು /ದಾನಪತ್ರ/ವಿಭಾಗ ಪತ್ರಗಳು/ಹಕ್ಕು ಖುಲಾಸೆ ಪತ್ರಗಳು.

2. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ,

3. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಸೀದಿ.

4. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ

5. ಮಾಲೀಕರ ಗುರುತಿನ ದಾಖಲೆ ಪ್ರತಿ.

Ramesh Babu

Journalist

Recent Posts

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

1 hour ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

5 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

6 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

17 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

21 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

23 hours ago