ಕೋಲಾರ: ಮೀಸಲು ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಎಂ.ಮಲ್ಲೇಶ್ ಬಾಬು ಅವರು ಏ.4 ರಂದು ಗುರುವಾರ ನಗರದ ಬಂಗಾರಪೇಟೆ ವೃತ್ತದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮೆರವಣಿಗೆ ಮೂಲಕ ತೆರಳಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ನಗರದ ಸಿಎಂಆರ್ ಶ್ರೀನಾಥ್ ಅವರ ನಿವಾಸದಲ್ಲಿ ಮಂಗಳವಾರ ಜೆಡಿಎಸ್ ಮತ್ತು ಬಿಜೆಪಿ ಸಭೆಯ ನಂತರ ಮಾತನಾಡಿದ ಅವರು, ನಾಮಪತ್ರ ಸಲ್ಲಿಸಲು ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ ಅವರು ಈ ಸಂದರ್ಭದಲ್ಲಿ ಎರಡು ಪಕ್ಷದ ರಾಷ್ಟ್ರೀಯ,ಮತ್ತು ರಾಜ್ಯ ನಾಯಕರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ ಮಾತನಾಡಿ, ಲೋಕಸಭೆ ಚುನಾವಣೆ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಉಳಿಯುತ್ತದೆ ಎಂಬ ಭರವಸೆ ಇಲ್ಲ ಸುಳ್ಳು ಭರವಸೆಗಳನ್ನು ನೀಡಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ. ಇವರನ್ನು ಆಯ್ಕೆಯ ಮಾಡಿದ ಜನರು ಈಗ ಶಪಿಸುತ್ತಿದ್ದಾರೆ. ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಡಾ ವೇಣುಗೋಪಾಲ್ ಮಾತನಾಡಿ, ಜಾತಿ ಜಾತಿಗಳನ್ನು ಒಡೆದು ಕುತಂತ್ರದ ರಾಜಕಾರಣವನ್ನು ಕಾಂಗ್ರೆಸ್ ಮಾಡುತ್ತಿದೆ ಅದಕ್ಕೆ ಕೋಲಾರ ಲೋಕಸಭಾ ಕ್ಷೇತ್ರವೇ ಉದಾಹರಣೆಯಾಗಿದೆ ದಲಿತರನ್ನು ಎಡಗೈ ಬಲಗೈ ಎಂದು ವಿಂಗಡಿಸಿದ್ದಾರೆ ರಾಜ್ಯದ ಆರ್ಥಿಕ ಸ್ಥಿತಿ ದಿವಾಳಿ ಎದ್ದು ಹೋಗಿದೆ. ಕರ್ನಾಟದಲ್ಲಿ ಬರವಿದ್ದು ಕೇಳಿದರೆ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿರುದ್ದ ಮಾತಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಈ ಬಾರಿ ರಾಜ್ಯದಲ್ಲಿ 28 ಕ್ಕೆ 28 ಕ್ಷೇತ್ರವನ್ನು ಗೆಲ್ಲಿಸಿ ನರೇಂದ್ರ ಮೋದಿ ಅವರ ಕೈ ಬಲಪಡಿಸುತ್ತೇವೆ ಕಳೆದ ಬಾರಿಯ ಬಿಜೆಪಿಯ ಯಡಿಯೂರಪ್ಪ ಮತ್ತು ಬಸವರಾಜ್ ಬೊಮ್ಮಾಯಿ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರ ಆಡಳಿತವೇ ಮಾದರಿಯಾಗಿ ರಾಷ್ಟ್ರದ ಪ್ರಧಾನ ಮಂತ್ರಿ ಹಾಗೂ ಮಾಜಿ ಪ್ರಧಾನ ಮಂತ್ರಿ ಒಟ್ಟಿಗೆ ತೆಗೆದುಕೊಂಡಿರುವ ನಿರ್ಧಾರದಿಂದ ಕಳೆದ ಬಾರಿಗಿಂತ ಹೆಚ್ಚಿನ ಅಂತರದಲ್ಲಿ ಗೆಲ್ಲಿಸುತ್ತೇವೆ ಎಂದರು
ಈ ಸಂದರ್ಭದಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು, ಎಂಎಲ್ಸಿ ಇಂಚರ ಗೋವಿಂದರಾಜು, ಮಾಜಿ ಶಾಸಕರಾದ ಕೆಜಿಎಫ್ ವೈ.ಸಂಪಂಗಿ, ಮಾಲೂರು ಕೆ.ಎಸ್ ಮಂಜುನಾಥ್ ಗೌಡ, ಮುಖಂಡರಾದ ಸಿಎಂಆರ್ ಶ್ರೀನಾಥ್ ಬಣಕನಹಳ್ಳಿ ನಟರಾಜ್, ಬೆಗ್ಲಿ ಸೂರ್ಯಪ್ರಕಾಶ್, ಮುನಿರಾಜು ವೈ ಸುರೇಂದ್ರ ಗೌಡ, ವಕ್ಕಲೇರಿ ರಾಮು, ಮುಂತಾದವರು ಇದ್ದರು
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಮುಸ್ಲಿಂ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…