Categories: ಕೋಲಾರ

ಏ.4 ರಂದು ಮೈತ್ರಿ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆ

ಕೋಲಾರ: ಮೀಸಲು ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಎಂ.ಮಲ್ಲೇಶ್ ಬಾಬು ಅವರು ಏ.4 ರಂದು ಗುರುವಾರ ನಗರದ ಬಂಗಾರಪೇಟೆ ವೃತ್ತದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮೆರವಣಿಗೆ ಮೂಲಕ ತೆರಳಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜೆಡಿಎಸ್‌ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ನಗರದ ಸಿಎಂಆರ್ ಶ್ರೀನಾಥ್ ಅವರ ನಿವಾಸದಲ್ಲಿ ಮಂಗಳವಾರ ಜೆಡಿಎಸ್‌ ಮತ್ತು ಬಿಜೆಪಿ ಸಭೆಯ ನಂತರ ಮಾತನಾಡಿದ ಅವರು, ನಾಮಪತ್ರ ಸಲ್ಲಿಸಲು ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ ಅವರು ಈ ಸಂದರ್ಭದಲ್ಲಿ ಎರಡು ಪಕ್ಷದ ರಾಷ್ಟ್ರೀಯ,ಮತ್ತು ರಾಜ್ಯ ನಾಯಕರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಜೆಡಿಎಸ್‌ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ ಮಾತನಾಡಿ, ಲೋಕಸಭೆ ಚುನಾವಣೆ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಉಳಿಯುತ್ತದೆ ಎಂಬ ಭರವಸೆ ಇಲ್ಲ ಸುಳ್ಳು ಭರವಸೆಗಳನ್ನು ನೀಡಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ. ಇವರನ್ನು ಆಯ್ಕೆಯ ಮಾಡಿದ ಜನರು ಈಗ ಶಪಿಸುತ್ತಿದ್ದಾರೆ. ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಡಾ ವೇಣುಗೋಪಾಲ್ ಮಾತನಾಡಿ, ಜಾತಿ ಜಾತಿಗಳನ್ನು ಒಡೆದು ಕುತಂತ್ರದ ರಾಜಕಾರಣವನ್ನು ಕಾಂಗ್ರೆಸ್ ಮಾಡುತ್ತಿದೆ ಅದಕ್ಕೆ ಕೋಲಾರ ಲೋಕಸಭಾ ಕ್ಷೇತ್ರವೇ ಉದಾಹರಣೆಯಾಗಿದೆ ದಲಿತರನ್ನು ಎಡಗೈ ಬಲಗೈ ಎಂದು ವಿಂಗಡಿಸಿದ್ದಾರೆ ರಾಜ್ಯದ ಆರ್ಥಿಕ ಸ್ಥಿತಿ ದಿವಾಳಿ ಎದ್ದು ಹೋಗಿದೆ. ಕರ್ನಾಟದಲ್ಲಿ ಬರವಿದ್ದು ಕೇಳಿದರೆ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿರುದ್ದ ಮಾತಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಈ ಬಾರಿ ರಾಜ್ಯದಲ್ಲಿ 28 ಕ್ಕೆ 28 ಕ್ಷೇತ್ರವನ್ನು ಗೆಲ್ಲಿಸಿ ನರೇಂದ್ರ ಮೋದಿ ಅವರ ಕೈ ಬಲಪಡಿಸುತ್ತೇವೆ ಕಳೆದ ಬಾರಿಯ ಬಿಜೆಪಿಯ ಯಡಿಯೂರಪ್ಪ ಮತ್ತು ಬಸವರಾಜ್ ಬೊಮ್ಮಾಯಿ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರ ಆಡಳಿತವೇ ಮಾದರಿಯಾಗಿ ರಾಷ್ಟ್ರದ ಪ್ರಧಾನ ಮಂತ್ರಿ ಹಾಗೂ ಮಾಜಿ ಪ್ರಧಾನ ಮಂತ್ರಿ ಒಟ್ಟಿಗೆ ತೆಗೆದುಕೊಂಡಿರುವ ನಿರ್ಧಾರದಿಂದ ಕಳೆದ ಬಾರಿಗಿಂತ ಹೆಚ್ಚಿನ ಅಂತರದಲ್ಲಿ ಗೆಲ್ಲಿಸುತ್ತೇವೆ ಎಂದರು

ಈ ಸಂದರ್ಭದಲ್ಲಿ ಜೆಡಿಎಸ್‌ ಬಿಜೆಪಿ ಮೈತ್ರಿ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು, ಎಂಎಲ್ಸಿ ಇಂಚರ ಗೋವಿಂದರಾಜು, ಮಾಜಿ ಶಾಸಕರಾದ ಕೆಜಿಎಫ್ ವೈ.ಸಂಪಂಗಿ, ಮಾಲೂರು ಕೆ.ಎಸ್ ಮಂಜುನಾಥ್ ಗೌಡ, ಮುಖಂಡರಾದ ಸಿಎಂಆರ್ ಶ್ರೀನಾಥ್ ಬಣಕನಹಳ್ಳಿ ನಟರಾಜ್, ಬೆಗ್ಲಿ ಸೂರ್ಯಪ್ರಕಾಶ್, ಮುನಿರಾಜು ವೈ ಸುರೇಂದ್ರ ಗೌಡ, ವಕ್ಕಲೇರಿ ರಾಮು, ಮುಂತಾದವರು ಇದ್ದರು

Ramesh Babu

Journalist

Recent Posts

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…

6 hours ago

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

13 hours ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

24 hours ago

ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದ ಕಾರ್ಮಿಕರ ಶಾಲೆ: ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…

1 day ago

ಸಾಗುವಳಿ ಚೀಟಿಗಳ ಅಕ್ರಮ ಮಂಜೂರಾತಿ ಬಯಲು; ಅರ್ಹರಿಗಷ್ಟೇ ಹಕ್ಕು, ಸ್ವಯಂಘೋಷಿತ ಬುದ್ಧಿವಂತರಿಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…

1 day ago

ಪೋಷಕರ ಗೌರವವೇ ಬದುಕಿನ ಮೊದಲ ಪಾಠ- ಸುರೇಶ್ ಗೌಡ ಬಿ

ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…

1 day ago