ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ ಟ್ರಸ್ಟ್ ಮತ್ತು ಸಾಯಿ ಮಿಲನ ಮೆಡಿಕಲ್ ಸೆಂಟರ್ ಇವರ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದೆ.

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಉದ್ಘಾಟನೆ ಮಾಡಲಿದ್ದಾರೆ…

ಕಾರ್ಯಕ್ರಮವನ್ನು ಡಾ. ಜ್ಞಾನೇಶ್ವರಿ ಮತ್ತು ಡಾಕ್ಟರ್ ಜಯಕುಮಾರ್ ಅವರು ನೆರವೇರಿಸಿಕೊಡಲಿದ್ದಾರೆ.

ಇದರ ಪೂರ್ವಭಾವಿ ಸಭೆಯನ್ನು ನಗರದ ಪ್ರವಾಸಿ ಮಂದಿರದಲ್ಲಿಂದು ಆಯೋಜನೆ ಮಾಡಲಾಗಿತ್ತು.

ಈ ವೇಳೆ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ, ಘಾಟಿ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್, ಗಂಗಸಂದ್ರ ಶ್ರೀಧರ್, ಮುರುಳಿ, ಪ್ರಧಾನ ಕಾರ್ಯದರ್ಶಿ ಎಂ ಮಂಜುನಾಥ್ ನಾಗೇನಹಳ್ಳಿ, ಎಸ್ ಮಂಜುನಾಥ್ ಮೇಲೆಕೋಟೆ ಕ್ರಾಸ್, ಶ್ರೀನಿವಾಸ್ ಗೊಲ್ಲಹಳ್ಳಿ, ತೂಬಗೆರೆ ಹೋಬಳಿ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎನ್ ನರಸಿಂಹ ಮೂರ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು…

Ramesh Babu

Journalist

Recent Posts

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

2 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

5 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

17 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

20 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

23 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

1 day ago